ತುಮಕೂರು | ರೈತರ ಸಾಲಕ್ಕೆ ಬ್ಯಾಂಕ್‌ಗಳ ನೋಟಿಸ್ ಜಾರಿ ಖಂಡನೀಯ: ಸಿ ಜಿ ಲೋಕೇಶ್

Date:

ಬರ ಪೀಡಿತ ಪ್ರದೇಶವೆಂದು ಘೋಷಣೆಯಾದ ಬೆನ್ನಲ್ಲೇ ಗುಬ್ಬಿ ತಾಲೂಕಿನ ರೈತರಿಗೆ ಬ್ಯಾಂಕ್‌ಗಳು ನೋಟಿಸ್ ಜಾರಿ ಮಾಡುತ್ತಿರುವುದು ಸರಿಯಲ್ಲ. ಜತೆಗೆ ಕೊಬ್ಬರಿ, ರಾಗಿ ಖರೀದಿ ಕೇಂದ್ರದ ಮೂಲಕ ರೈತನ ಖಾತೆಗೆ ಬಂದ ಹಣವನ್ನು ಸಾಲಕ್ಕೆ ವಜಾ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹೀಗೆ ರೈತರಿಗೆ ತೊಂದರೆ ನೀಡುವ ಬ್ಯಾಂಕ್‌ಗಳ ವಿರುದ್ಧ ರೈತ ಸಂಘ ತೀವ್ರ ಹೋರಾಟಕ್ಕೆ ಮುಂದಾಗಲಿದೆ ಎಂದು ಎಂದು ರೈತ ಸಂಘದ ಗುಬ್ಬಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಎಚ್ಚರಿಕೆ ನೀಡಿದರು.

- Advertisement -

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ರೈತರ ಕೊಬ್ಬರಿ ಮತ್ತು ರಾಗಿ ಖರೀದಿ ಕೇಂದ್ರದ ಬಳಿ ರೈತರ ಜತೆಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಬರಗಾಲ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಗುಬ್ಬಿ ತಾಲೂಕು ಸೇರಿರುವ ಬಗ್ಗೆ ಮಾಹಿತಿ ಎಲ್ಲ ಬ್ಯಾಂಕ್‌ಗಳಿಗೂ ತಿಳಿದಿದೆ. ಆದರೂ ಮಾರ್ಚ್ ತಿಂಗಳೆಂದು ಕಾರಣ ನೀಡಿ ರೈತರಿಂದ ಸಾಲ ವಸೂಲಿಗೆ ನೋಟಿಸ್ ತಂತ್ರ ಬಳಸಿದ್ದಾರೆ. ಕಳೆದ ಬಾರಿ ಕೊಬ್ಬರಿ ಮಾರಾಟ ಮಾಡಿದ ರೈತರೊಬ್ಬರ ಖಾತೆಯಲ್ಲಿದ್ದ ಕೊಬ್ಬರಿ ಹಣವನ್ನು ಸಾಲಕ್ಕೆ ವಜಾ ಮಾಡಿಕೊಂಡ ವಿಷಯದಿಂದ ತಾಲೂಕಿನ ಹಲವು ರೈತರಲ್ಲಿ ಆತಂಕ ಮೂಡಿದೆ” ಎಂದು ರೈತರ ಅಳಲು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ; ಹರಿದು ಬಂದ ಜನಸಾಗರ

“ದಿನಗಟ್ಟಲೇ ಸರದಿಯಲ್ಲಿ ನಿಂತು ಕೊಬ್ಬರಿ, ರಾಗಿ ಮಾರಾಟ ಮಾಡಿದ ರೈತರ ಹಣ ಹಲವು ದಿನಗಳ ಬಳಿಕ ಖಾತೆಗೆ ಬರುತ್ತಿದೆ. ಈ ಹಣವೂ ಬ್ಯಾಂಕ್ ಪಾಲಾದರೆ ರೈತ ಹೇಗೆ ಬದುಕು ನಡೆಸುವುದು. ಬರ ಪ್ರದೇಶದಲ್ಲಿ ರೈತರ ಬಳಿ ಸಾಲ ವಸೂಲಿ ಮಾಡಲು ಬಲವಂತ ಮಾಡುವಂತಿಲ್ಲವೆಂದ ಅವರು ರಾಗಿ, ಕೊಬ್ಬರಿ ಖರೀದಿ ಕೇಂದ್ರದ ಬಳಿ ಮೂಲ ಸವಲತ್ತು ಒದಗಿಸದ ಬಗ್ಗೆಯೂ ರೈತರಲ್ಲಿ ಅಸಮಾಧಾನ ತಂದಿದೆ. ಕುಡಿಯಲು ನೀರು, ನೆರಳು ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....