ಬೆಳಧರ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆ ಆಟದ ಮೈದಾನದ ಸುತ್ತ ಹಾಕಿರುವ ಬೇಲಿ ಮತ್ತು ಗಿಡಗಳನ್ನು ಧ್ವಂಸಗೊಳಿಸಿ ವಶಕ್ಕೆ ಪಡೆಯಲು ಪ್ರಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮೈದಾನ ವಶಕ್ಕೆ ಪಡೆಯಲು ಯತ್ನಿಸಿದವರು ಯಾವ ಕ್ರಮವನ್ನೂ ತೆಗೆದುದೊಳ್ಳದ ತುಮಕೂರು ತಾಲೂಕು ಶಿಕ್ಷಣಾಧಿಕಾರಿ, ತಹಶೀಲ್ದಾರ್ ಮತ್ತು ಕೋರ ಪೊಲೀಸ್ ಠಾಣೆಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನೈಜ ಹೋರಾಗರರ ವೇದಿಕೆ ಮುಖಂಡರು ಕರ್ನಾಟಕ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರ ಎಚ್ ಎಂ ವೆಂಕಟೇಶ್ ಅವರು ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದು, “ತುಮಕೂರು ತಾಲೂಕು ಕೊರಟಗೆರೆ ತಾಲೂಕಿನ ಬೆಳೆಧರ ಗ್ರಾಮದ ಹಿರಿಯ ಪ್ರಾರ್ಥಮಿಕ ಪಾಠಶಾಲೆಯ ಆಟದ ಮೈದಾನದ ಸುತ್ತ ಹಾಕಿರುವ (ಪೆನ್ಸಿಂಗ್) ಬೇಲಿಯನ್ನು ಮತ್ತು ನೆಟ್ಟಿರುವ ಗಿಡಗಳನ್ನು ಧ್ವಂಸಗೊಳಿಸಿ ಸರ್ಕಾರಿ ಶಾಲೆಯ ಆಟದ ಮೈದಾನವನ್ನು ಕಬ್ಜಾ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ತಾಲೂಕು ಶಿಕ್ಷಣಾಧಿಕಾರಿ, ತಹಶೀಲ್ದಾರ್, ಕೋರ ಪೊಲೀಸ್ ಠಾಣೆಯ ಅಧಿಕಾರಿಗಳು ಈವರೆಗೂ ತಪ್ಪಿತಸ್ಥರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳದಿರುವುದರಿಂದ, ನೈಜ ಹೋರಾಟಗಾರರಿಂದ ಬಂದಿರುವ ಮನವಿಯನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಬೇಕು” ಎಂದು ಉಲ್ಲೇಖಿಸಿದ್ದಾರೆ.
“ಸರ್ಕಾರಿ ಶಾಲೆಯ ಸ್ವತ್ತುಗಳ ರಕ್ಷಣೆ ಮಾಡಬೇಕು. ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆತರುವ ಅಭಿಯಾನವನ್ನು ಮಾಡಬೇಕೆಂದು ಶಿಕ್ಷಣ ಇಲಾಖೆ ಸುತ್ತೋಲೆಗಳನ್ನು ಹೊರಡಿಸುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ಸಮರ್ಪಕ ಕಾರ್ಯ ನಿರ್ವಹಿಸಬೇಕು. ಬಹುಶಃ 1976ರಲ್ಲಿ ಬೆಳೆಧರ ಹಿರಿಯ ಪ್ರಾರ್ಥಮಿಕ ಪಾಠಶಾಲೆಗೆ ಆಟದ ಮೈದಾನವನ್ನು ಸರ್ಕಾರ ಮಂಜೂರು ಮಾಡಿದ್ದು, ಈವರೆಗೂ ಅಧಿಕಾರಿಗಳು ಅದಕ್ಕೆ ಕಾಂಪೌಂಡ್ ಹಾಕಿ ರಕ್ಷಣೆ ಮಾಡದೇ ಇರುವುದರಿಂದ ತುಮಕೂರಿನ ಕಾಳಜಿ ಫೌಂಡೇಶನ್ ಹೋರಾಟಗಾರರು ಪರಿಶ್ರಮದಿಂದ ಕೋರ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಎಸ್ಡಿಎಂಸಿ ಸದಸ್ಯರೊಂದಿಗೆ ಮುಳ್ಳು ತಂತಿ ಬೇಲಿಯನ್ನು ಆಟದ ಮೈದಾನದ ಸುತ್ತ ನಿರ್ಮಿಸಿ ಗಿಡಗಳನ್ನು ನೆಟ್ಟಿದ್ದರು.
ಆದರೆ ಈ ಆಟದ ಮೈದಾನವನ್ನು ಕಬ್ಜಾ ಮಾಡುವ ಉದ್ದೇಶದಿಂದ ರಾತ್ರೋರಾತ್ರಿ ಬುಲ್ಡೋಜರ್ಗಳನ್ನು ತಂದು ಬೇಲಿ ಮತ್ತು ಗಿಡಗಳನ್ನು ದ್ವಂಸ ಮಾಡಿದ್ದಾರೆ. ಇಂತಹವರ ವಿರುದ್ಧ ಶಿಕ್ಷಣ ಇಲಾಖೆಯ ಬಿಇೊ, ತುಮಕೂರು ತಹಶೀಲ್ದಾರ್, ಕೋರ ಪೊಲೀಸ್ ಠಾಣೆ ಅಧಿಕಾರಿಗಳು ಧ್ವಂಸಗೊಳಿಸಿದವರ ಮೇಲೆ ಯಾವುದೇ ಕಾನೂನು ಕ್ರಮಗಳನ್ನು ಜರುಗಿಸಿಲ್ಲ. ಇದರಿಂದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪರೀಕ್ಷಾ ಹಂತದಲ್ಲಿ ತುಂಬಾ ತೊಂದರೆ ಉಂಟಾಗಿದೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.
“ಸರ್ಕಾರಿ ಶಾಲೆಯ ಆಟದ ಮೈದಾನವನ್ನು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸದುಪಯೋಗ ಮಾಡಿಸಿಕೊಳ್ಳುವಲ್ಲಿ ಮುಖ್ಯ ಪಾತ್ರ ವಹಿಸಬೇಕಾಗಿದ್ದ ಅಧಿಕಾರಿಗಳು ನಿಸ್ಸಹಾಯಕರಂತೆ ಕಾಣುತ್ತಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಸರ್ವಜ್ಞನ ತ್ರಿಪದಿಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪ : ಶಿವಕುಮಾರ ಶೀಲವಂತ
“ಆಟದ ಮೈದಾನವನ್ನು ವಶಪಡಿಸಿಕೊಳ್ಳಲು ಪಟ್ಟಭದ್ರ ಹಿತಾಸಕ್ತಿಗಳು ಬುಲ್ಡೋಜರ್ಗಳನ್ನು ತೆಗೆದುಕೊಂಡು ಬಂದು ಕಬ್ಜಾ ಮಾಡುತ್ತಿರುವವರ ವಿರುದ್ಧ ಯಾವುದೇ ಕಾನೂನು ಕ್ರಮಗಳನ್ನು ಜರುಗಿಸದೆ ಕೋರ ಪೊಲೀಸ್ ಠಾಣೆಯ ಅಧಿಕಾರಿಗಳು, ತುಮಕೂರು ತಹಶೀಲ್ದಾರ್ ಮತ್ತು ತಾಲೂಕು ಶಿಕ್ಷಣಾಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ” ಎಂದು ಆರೋಪಿಸಿದರು.
“ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ತಾವುಗಳು ಸದರಿ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.