ತುಮಕೂರು | ಬೆಳಧರ ಸರ್ಕಾರಿ ಶಾಲೆ ಆಟದ ಮೈದಾನ ವಶ; ತಪ್ಪಿತಸ್ಥರ ವಿರುದ್ಧ ಲೋಕಾಯುಕ್ತಕ್ಕೆ ಅರ್ಜಿ 

Date:

ಬೆಳಧರ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆ ಆಟದ ಮೈದಾನದ ಸುತ್ತ ಹಾಕಿರುವ ಬೇಲಿ ಮತ್ತು ಗಿಡಗಳನ್ನು ಧ್ವಂಸಗೊಳಿಸಿ ವಶಕ್ಕೆ ಪಡೆಯಲು ಪ್ರಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮೈದಾನ ವಶಕ್ಕೆ ಪಡೆಯಲು ಯತ್ನಿಸಿದವರು ಯಾವ ಕ್ರಮವನ್ನೂ ತೆಗೆದುದೊಳ್ಳದ ತುಮಕೂರು ತಾಲೂಕು ಶಿಕ್ಷಣಾಧಿಕಾರಿ, ತಹಶೀಲ್ದಾರ್ ಮತ್ತು ಕೋರ ಪೊಲೀಸ್ ಠಾಣೆಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನೈಜ ಹೋರಾಗರರ ವೇದಿಕೆ ಮುಖಂಡರು ಕರ್ನಾಟಕ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರ ಎಚ್ ಎಂ ವೆಂಕಟೇಶ್ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದು, “ತುಮಕೂರು ತಾಲೂಕು ಕೊರಟಗೆರೆ ತಾಲೂಕಿನ ಬೆಳೆಧರ ಗ್ರಾಮದ ಹಿರಿಯ ಪ್ರಾರ್ಥಮಿಕ ಪಾಠಶಾಲೆಯ ಆಟದ ಮೈದಾನದ ಸುತ್ತ ಹಾಕಿರುವ (ಪೆನ್ಸಿಂಗ್) ಬೇಲಿಯನ್ನು ಮತ್ತು ನೆಟ್ಟಿರುವ ಗಿಡಗಳನ್ನು ಧ್ವಂಸಗೊಳಿಸಿ ಸರ್ಕಾರಿ ಶಾಲೆಯ ಆಟದ ಮೈದಾನವನ್ನು ಕಬ್ಜಾ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ತಾಲೂಕು ಶಿಕ್ಷಣಾಧಿಕಾರಿ, ತಹಶೀಲ್ದಾರ್, ಕೋರ ಪೊಲೀಸ್ ಠಾಣೆಯ ಅಧಿಕಾರಿಗಳು ಈವರೆಗೂ ತಪ್ಪಿತಸ್ಥರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳದಿರುವುದರಿಂದ, ನೈಜ ಹೋರಾಟಗಾರರಿಂದ ಬಂದಿರುವ ಮನವಿಯನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಬೇಕು” ಎಂದು ಉಲ್ಲೇಖಿಸಿದ್ದಾರೆ.

“ಸರ್ಕಾರಿ ಶಾಲೆಯ ಸ್ವತ್ತುಗಳ ರಕ್ಷಣೆ ಮಾಡಬೇಕು. ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆತರುವ ಅಭಿಯಾನವನ್ನು ಮಾಡಬೇಕೆಂದು ಶಿಕ್ಷಣ ಇಲಾಖೆ ಸುತ್ತೋಲೆಗಳನ್ನು ಹೊರಡಿಸುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ಸಮರ್ಪಕ ಕಾರ್ಯ ನಿರ್ವಹಿಸಬೇಕು. ಬಹುಶಃ 1976ರಲ್ಲಿ ಬೆಳೆಧರ ಹಿರಿಯ ಪ್ರಾರ್ಥಮಿಕ ಪಾಠಶಾಲೆಗೆ ಆಟದ ಮೈದಾನವನ್ನು ಸರ್ಕಾರ ಮಂಜೂರು ಮಾಡಿದ್ದು, ಈವರೆಗೂ ಅಧಿಕಾರಿಗಳು ಅದಕ್ಕೆ ಕಾಂಪೌಂಡ್ ಹಾಕಿ ರಕ್ಷಣೆ ಮಾಡದೇ ಇರುವುದರಿಂದ ತುಮಕೂರಿನ ಕಾಳಜಿ ಫೌಂಡೇಶನ್ ಹೋರಾಟಗಾರರು ಪರಿಶ್ರಮದಿಂದ ಕೋರ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರೊಂದಿಗೆ ಮುಳ್ಳು ತಂತಿ ಬೇಲಿಯನ್ನು ಆಟದ ಮೈದಾನದ ಸುತ್ತ ನಿರ್ಮಿಸಿ ಗಿಡಗಳನ್ನು ನೆಟ್ಟಿದ್ದರು.
ಆದರೆ ಈ ಆಟದ ಮೈದಾನವನ್ನು ಕಬ್ಜಾ ಮಾಡುವ ಉದ್ದೇಶದಿಂದ ರಾತ್ರೋರಾತ್ರಿ ಬುಲ್ಡೋಜರ್‌ಗಳನ್ನು ತಂದು ಬೇಲಿ ಮತ್ತು ಗಿಡಗಳನ್ನು ದ್ವಂಸ ಮಾಡಿದ್ದಾರೆ. ಇಂತಹವರ ವಿರುದ್ಧ ಶಿಕ್ಷಣ ಇಲಾಖೆಯ ಬಿಇೊ, ತುಮಕೂರು ತಹಶೀಲ್ದಾರ್, ಕೋರ ಪೊಲೀಸ್ ಠಾಣೆ ಅಧಿಕಾರಿಗಳು ಧ್ವಂಸಗೊಳಿಸಿದವರ ಮೇಲೆ ಯಾವುದೇ ಕಾನೂನು ಕ್ರಮಗಳನ್ನು ಜರುಗಿಸಿಲ್ಲ. ಇದರಿಂದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪರೀಕ್ಷಾ ಹಂತದಲ್ಲಿ ತುಂಬಾ ತೊಂದರೆ ಉಂಟಾಗಿದೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸರ್ಕಾರಿ ಶಾಲೆಯ ಆಟದ ಮೈದಾನವನ್ನು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸದುಪಯೋಗ ಮಾಡಿಸಿಕೊಳ್ಳುವಲ್ಲಿ ಮುಖ್ಯ ಪಾತ್ರ ವಹಿಸಬೇಕಾಗಿದ್ದ ಅಧಿಕಾರಿಗಳು ನಿಸ್ಸಹಾಯಕರಂತೆ ಕಾಣುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ವಜ್ಞನ ತ್ರಿಪದಿಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪ : ಶಿವಕುಮಾರ ಶೀಲವಂತ

“ಆಟದ ಮೈದಾನವನ್ನು ವಶಪಡಿಸಿಕೊಳ್ಳಲು ಪಟ್ಟಭದ್ರ ಹಿತಾಸಕ್ತಿಗಳು ಬುಲ್ಡೋಜರ್‌ಗಳನ್ನು ತೆಗೆದುಕೊಂಡು ಬಂದು ಕಬ್ಜಾ ಮಾಡುತ್ತಿರುವವರ ವಿರುದ್ಧ ಯಾವುದೇ ಕಾನೂನು ಕ್ರಮಗಳನ್ನು ಜರುಗಿಸದೆ ಕೋರ ಪೊಲೀಸ್ ಠಾಣೆಯ ಅಧಿಕಾರಿಗಳು, ತುಮಕೂರು ತಹಶೀಲ್ದಾರ್ ಮತ್ತು ತಾಲೂಕು ಶಿಕ್ಷಣಾಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ” ಎಂದು ಆರೋಪಿಸಿದರು.

“ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ತಾವುಗಳು ಸದರಿ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...

ಚಾಮರಾಜನಗರ | ಆಶ್ರಯ ಮನೆ ಕೊಡಿಸುತ್ತೇನೆಂದು ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ಗ್ರಾಮ ಪಂಚಾಯತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಪಂಚಾಯತಿ...