ತುಮಕೂರು | ಪ್ರಜಾಪ್ರಭುತ್ವ ನಾಶಕ್ಕೆ ಬಿಜೆಪಿ ಪಿತೂರಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ

Date:

Advertisements

ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ ಮೂಲಕ ಟೌನ್ ಹಾಲ್‌ವರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮಾತನಾಡಿ, ಸಂಸತ್ತಿನ ಮೇಲೆ ನಡೆದ ದಾಳಿಯ ಕುರಿತು ವಿರೋಧ ಪಕ್ಷಗಳ ಪ್ರಶ್ನೆಗೆ ಪ್ರಧಾನಿ ಮತ್ತು ಗೃಹಸಚಿವರು ಉತ್ತರಿಸುವಂತೆ ಒತ್ತಾಯಿಸಿದ ವಿರೋಧ ಪಕ್ಷದ ಸುಮಾರು 146 ಸಂಸದರನ್ನು ಒಂದು ಅಧಿವೇಶನ ಪೂರ್ಣ ಅಮಾನತ್ತು ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ.

Advertisements

ಇದೊಂದು ರೀತಿಯಲ್ಲಿ ವಿರೋಧ ಪಕ್ಷಗಳೇ ಇಲ್ಲದಂತೆ ಮಾಡುವ ಸರ್ವಾಧಿಕಾರಿ ಧೋರಣೆಯಾಗಿದ್ದು, ಇದರ ವಿರುದ್ದ ರಾಷ್ಟçದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿದೆ. ಸಂಸತ್ತು ಎಂಬುದು ಇಡೀ ರಾಷ್ಟ್ರದ ಆಸ್ತಿ. ಆದರೆ, ಬಿಜೆಪಿ ಪಕ್ಷ ತನ್ನ ಸ್ವರ್ಯಾಜಿತ ಆಸ್ತಿ ಎಂಬಂತೆ ನಡೆದುಕೊಳ್ಳುತ್ತಿದೆ. ಇದರ ಹಿಂದೆ ಬಿಜೆಪಿ ಪಕ್ಷ ತನಗೆ ಬೇಕಾದ ಕಾಯ್ದೆಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿ ಪಾಸು ಮಾಡುವ ಹಿಡನ್ ಅಜೆಂಡಾ ಅಡಗಿದೆ. ಇದರ ವಿರುದ್ಧ ದೇಶದ ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಿ ಪ್ರತಿಭಟಿಸುವ ಅಗತ್ಯ ಇದೆ ಎಂದರು.

ಕೆಪಿಸಿಸಿ ವೈದ್ಯಕೀಯ ಘಟಕದ ಉಪಾಧ್ಯಕ್ಷೆ ಡಾ. ಫರ್ಜಾನ ಬೇಗಂ ಮಾತನಾಡಿ, ಸಂಸತ್ತು ಎಂಬುದು ಭಾರತೀಯರ ದೇವಾಲಯವಿದ್ದಂತೆ. ಅಂತಹ ಕೇಂದ್ರದ ಮೇಲೆ ದಾಳಿಯಾದಾಗ ಅದಕ್ಕೆ ಕಾರಣಗಳು ಮತ್ತು ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಗೃಹಸಚಿವ ಅಮಿತ್ ಶಾ ಮತ್ತು ಪ್ರಧಾನಮಂತ್ರಿ ಉತ್ತರ ನೀಡಬೇಕೆಂಬ ಅಪೇಕ್ಷೆ ಇಡೀ ದೇಶದ ಜನರದ್ದಾಗಿದೆ .ಹಾಗಾಗಿ ಜನರ ಪ್ರತಿನಿಧಿಗಳಾದ ಸಂಸದರು ಉತ್ತರಿಸುವಂತೆ ಸದನದಲ್ಲಿ ಪ್ರಶ್ನಿಸಿದ್ದಾರೆ. ಅದನ್ನು ಹೊರತುಪಡಿಸಿ ಸಂಸದರ ಮೇಲೆ ಯಾವುದೇ ಗುರುತರ ಆರೋಪಗಳಿಲ್ಲ. ಆದರೂ ಇಡೀ ಪ್ರಪಂಚದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೇ ಅತಿ ಹೆಚ್ಚು ಸಂಸದರನ್ನು ಅಮಾನತ್ತುಗೊಳಸಿರುವುದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಮಾಜಿ ಅಧ್ಯಕ್ಷ ಆರ್. ರಾಮಕೃಷ್ಣ, ಮಹೇಶ್, ಫಯಾಜ್, ಗಿರೀಶ್,  ಲೋಕೇಶ್, ಮುಖಂಡರಾದ ನಯಾಜ್ ಅಹಮದ್, ನಿಂಗರಾಜು.ಬಿ.ಜಿ, ವಾಲೆಚಂದ್ರಯ್ಯ, ಪುಟ್ಟರಾಜು, ಸುಜಾತ, ನಾಗಮಣಿ, ಭಾಗ್ಯ, ಸವಿತಾ, ಗೀತಾ, ಜ್ವಾಲಾಮಾಲಾ ರಾಜಣ್ಣ, ಕೆಂಪಣ್ಣ, ಶೆಟ್ಟಾಳಯ್ಯ, ಮೆಹಬೂಬ್ ಪಾಷ, ಶಿವಾಜಿ, ನರಸಿಂಹಯ್ಯ, ಕುಂಚ್ಚಂಗಿ ರಮೇಶ್, ಕೆಂಪರಾಜು, ಎಚ್.ಸಿ. ಹನುಮಂತಯ್ಯ, ರೇವಣ್ಣಸಿದ್ದಯ್ಯ, ನ್ಯಾತೇಗೌಡ, ರಾಘವೇಂದ್ರಸ್ವಾಮಿ, ಸಿ. ಭಾನುಪ್ರಕಾಶ್, ನಯಾಜ್ ಅಹಮದ್, ಅಸ್ಲಾಂ ಪಾಷ, ಇನಾಯತ್, ನಟರಾಜು, ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X