ತುಮಕೂರು | ಬಿಜೆಪಿ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಪರವಿದೆ: ಶಾಸಕ ಎಸ್.ಆರ್ ಶ್ರೀನಿವಾಸ್

Date:

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಾರ್ಪೊರೇಟ್ ಕಂಪನಿ ಪರವಿದೆ. ಸಾಮಾನ್ಯರಿಗೆ ಸುಳ್ಳು ಆಶ್ವಾಸನೆಯನ್ನು ನೀಡಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು, ಕಾರ್ಪೋರೇಟ್‌ಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಎಸ್.ಆರ್ ಶ್ರೀನಿವಾಸ್ ವಾಗ್ದಾಳಿ ನಡೆಸಿದರು.

- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಇತಿಹಾಸ ಪ್ರಸಿದ್ಧ ಮಣ್ಣಮ್ಮ ದೇವಾಲಯಕ್ಕೆ ಕಾರ್ಯಕರ್ತರೊಂದಿಗೆ ತೆರಳಿ ಪೂಜೆ ಸಲ್ಲಿಸಿ ಲೋಕಸಭಾ ಚುನಾವಣೆಯ ಮನೆ ಮನೆ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಿಜೆಪಿ ಸರ್ಕಾರವು ಸುಳ್ಳು ಆಶ್ವಾಸನೆಯನ್ನು ನೀಡುವ ಸರ್ಕಾರವಾಗಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಉಳ್ಳವರ ಪರ ಸರ್ಕಾರವಾಗಿದೆ ಎಂದು ಟೀಕಿಸಿದರು.

ದೇಶದ ಸಮಸ್ತ ರೈತರು ಬೆಳೆದ ಬೆಳೆಗಳಿಗೆ, ಹಾಲು, ಮೊಸರಿನ  ದರದ ಮೇಲೆ, ಕೃಷಿ, ಯಂತ್ರೋಪಕರಣಗಳಲ್ಲಿ, ಬಿತ್ತನೆ ಬೀಜಗಳಲ್ಲಿ, ರಾಸಾಯನಿಕ ಗೊಬ್ಬರಗಳ ಮೇಲೆ ಹಾಗೂ ಮಾರುಕಟ್ಟೆಯಲ್ಲಿ ಹೆಚ್ಚಿನ ತೆರಿಗೆಯನ್ನು ವಿಧಿಸಿದೆ.

ಮೋದಿಯ ಸರ್ಕಾರವು ಅದಾನಿ, ಅಂಬಾನಿ, ದೇಶದ ಪ್ರಮುಖ ಉದ್ಯಮಿಗಳ ಸಾಲವನ್ನು ಮನ್ನಾ ಮಾಡಿದೆ. ಕೆಲವರ ಸಾಲ ಮನ್ನಾ ಮಾಡಿ ವಿದೇಶಕ್ಕೆ ಪಲಾಯನ ಮಾಡಲು ಅನುವು ಮಾಡಿದೆ. ಅಭಿವೃದ್ದಿ ವಿಚಾರದಲ್ಲಿ ಮೋದಿಯ ಸರ್ಕಾರದ 10 ವರ್ಷ ಆಡಳಿತ ಶೂನ್ಯ ಸಾಧನೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸರ್ಕಾರವು  5 ಗ್ಯಾರಂಟಿ ಯೋಜನೆಗಳನ್ನು ನೀಡಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಗ್ರಾಮೀಣ ಭಾಗದ ತಾಯಂದಿರ ಮೇಲೆ ಕೆಟ್ಟ ಆರೋಪ ಮಾಡಿರುವುದು ಖಂಡನೀಯವಾಗಿದೆ ಎಂದ ಅವರು, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಡವರ, ಶೋಷಿತರ, ದಲಿತರ, ಹಾಗೂ ಹಿಂದುಳಿದ ವರ್ಗದವರ ಪರವಾದ ಸರ್ಕಾರವಾಗಿದೆ. ಈ ಬಾರಿ ಕಾಂಗ್ರೆಸ್ ಪಕ್ಷವನ್ನು ದೇಶದ ಜನತೆಯು ಕೈ ಬಲಪಡಿಸುವ ಕೆಲಸ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಶಂಕರನಂದ್ ಮಾತನಾಡಿ, ಕಾಂಗ್ರೆಸ್ ಪಕ್ಷವು ಜನಪರ ಸರ್ಕಾರವಾಗಿದೆ. ಬಿಜೆಪಿ ಸರ್ಕಾರದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ ಎಂದು ಬಹಿರಂಗವಾಗಿ ಮಾಧ್ಯಮದಲ್ಲಿ ತಿಳಿಸಿದ್ದಾರೆ. ಬಿಜೆಪಿ ಸರ್ಕಾರವು ಹಣವಿದ್ದವರಿಗೆ ಟಿಕೆಟ್ ನೀಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಹಣವನ್ನು ಇಟ್ಟುಕೊಂಡು ಚುನಾವಣೆ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷವು ಬಡವರ ಜನಪರ ಕಾರ್ಯಕ್ರಮಗಳನ್ನು ಇಟ್ಟುಕೊಂಡು ಚುನಾವಣೆ ನಡೆಸುತ್ತಿದ್ದಾರೆ ಎಂದರು.

ಕಳೆದ ವಿಧಾನಸಭೆಯಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್‌ರವರು ಗೆಲುವು ಸಾಧಿಸಿದರೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 1008 ತೆಂಗಿನಕಾಯಿ ಒಡೆಯುವ ಹರಕೆಯನ್ನು ಮಾಡಿಕೊಂಡಿದ್ದರು. ಇದೇ ಸಂದರ್ಭದಲ್ಲಿ 1008 ತೆಂಗಿನಕಾಯಿ ಒಡೆಯುವ ಹರಕೆಯನ್ನು  ಪೂರ್ಣಗೊಳಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಕೆ.ಆರ್. ವೆಂಕಟೇಶ್, ಕೆ.ಆರ್. ತಾತಯ್ಯ, ಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೈಲಾರಯ್ಯ, ಗುರು ರೇಣುಕಾರಾಧ್ಯ, ರಮೇಶ್, ಶಶಿಕಿರಣ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಭಾಗ್ಯಮ್ಮ, ಮುಖಂಡರಾದ ಸಣ್ಣ ರಂಗಯ್ಯ, ಯತೀಶ್, ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಇಂಡಿ |‌ ಜೋಡೆತ್ತು ಕೃಷಿಕರ ಪ್ರತಿಭಟನೆ; ಅಹವಾಲು ಆಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು...

ಹಾವೇರಿ | ಕಬ್ಬು ಬೆಳೆಗಾರರು ಹುಬ್ಬಳ್ಳಿಗೆ ಪಾದಯಾತ್ರೆ; ಕೇಂದ್ರ ಸಚಿವರ ಅಣಕು ಶವಯಾತ್ರೆ

ಕಬ್ಬಿಗೆ ಪ್ರತಿ ಟನ್‌ಗೆ ₹5500 ನೀಡಬೇಕು. ಎಮ್.ಎಸ್.ಪಿ. ದರ 31ರೂ ಇದ್ದದ್ದು,...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...