ತುಮಕೂರು | ಒಳ ಮೀಸಲಾತಿ ಜಾರಿ ಮಾಡದ ಬಿಜೆಪಿ ಸೋಲಿಸಲು ಮಾದಿಗ ಸಮುದಾಯಕ್ಕೆ ಕರೆ ಕೊಟ್ಟ ಅಂಬಣ್ಣ ಅರೋಲಿಕರ್

Date:

30 ವರ್ಷಗಳ ಸುದೀರ್ಘವಾದ ಒಳಮೀಸಲಾತಿ ಹೋರಾಟಕ್ಕೆ ಮಣಿದ ಕಾಂಗ್ರೆಸ್‌ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತಿದ್ದಂತೆ ಬಿಜೆಪಿ, ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಜಾರಿ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು, ಆದರೆ ಮಾಡದೆ ಮೋಸ ಮಾಡಿತು ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್  ಹೇಳಿದರು.

- Advertisement -

ತುಮಕೂರಿನ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ನಡೆದ ದಲಿತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಶ್ವಾಸನೆ ನೀಡಿದ ಮೋದಿ, ಇಂದು ಒಳಮೀಸಲಾತಿಯನ್ನು ಕೋಮಾದಲ್ಲಿರಿಸಿದ್ದಾರೆ. ಇಡಬ್ಲ್ಯೂಎಸ್ ಶೇ. 10ರಷ್ಟು ಮೀಸಲಾತಿಯನ್ನು ಒಂದೇ ದಿನದಲ್ಲಿ ಜಾರಿಗೊಳಿಸಿದ ಮೋದಿ ಸರ್ಕಾರ ಒಳಮೀಸಲಾತಿಯನ್ನು 10 ವರ್ಷಗಳಾದರೂ ಜಾರಿಗೊಳಿಸಲಿಲ್ಲ. ಆದ್ದರಿಂದ ಇಷ್ಟು ದಿಟ್ಟ ನಿರ್ಲಕ್ಷ್ಯ ವಹಿಸಿರುವ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಮಾದಿಗ ಸಮುದಾಯ ಸೋಲಿಸಬೇಕೆಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯಾದ್ಯಂತ ಆರ್‌ಎಸ್‌ಎಸ್, ಬಿಜೆಪಿ ಪ್ರಾಯೋಜಿತ ಮಾದಿಗ ಮುನ್ನಡೆ ನೆಲಕಚ್ಚಿದೆ. ಹೋರಾಟವನ್ನು ದಿಕ್ಕು ತಪ್ಪಿಸಲು ಬಿಜೆಪಿ ಮುಂದಾಗಿದ್ದನ್ನು ಗಮನಿಸಿದ ಮಾದಿಗ ಸಮುದಾಯ ಪಾಲ್ಗೊಳ್ಳದೆ ನೆಲಕಚ್ಚಿಸಿದೆ. 2018ರಲ್ಲಿ ಇದೇ ರೀತಿ ಕಾಂಗ್ರೆಸ್‌ ಒಳಮೀಸಲಾತಿಯನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಸೋತಿದ್ದನ್ನು ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. 2023ರಲ್ಲಿ ಮಾದಿಗ ಸಮುದಾಯ ಕಾಂಗ್ರೆಸ್‌ ಜೊತೆಗೆ ನಿಂತಿದ್ದಕ್ಕೆ 136  ಸ್ಥಾನ ಗೆಲುವು ಸಾಧಿಸಲು ಸಾಧ್ಯವಾಗಿದೆ. ಕೋಮುವಾದಿ, ಮನುವಾದಿ, ಸನಾತನವಾದಿ ಸಿದ್ದಾಂತವನ್ನು ಈ ಚುನಾವಣೆಯಲ್ಲಿ ನಾವು ಸೋಲಿಸಬೇಕಾಗಿದೆ ಎಂದು ಬಸವರಾಜ್ ಕೌತಾಳ್ ಹೇಳಿದರು.

ಡಾ. ಬಸವರಾಜ್ ಮಾತನಾಡಿ ಸಂವಿಧಾನದ ಸಮಬಾಳು ಸಮಪಾಲು ಆಶಯದಲ್ಲಿ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳನ್ನು ನೀಡಿದ್ದಾರೆ. ಈ ಗ್ಯಾರಂಟಿಗಳನ್ನು ಪ್ರಶ್ನಿಸಿ ಬಿಜೆಪಿ ಕೋರ್ಟ್ ಮೋರೆ ಹೋಗಿದೆ. ಇಂತಹ ಗೋಮುಖ ವ್ಯಾಘ್ರಗಳಿಗೆ ಈ ಚುನಾವಣೆಯಲ್ಲಿ ಬುದ್ದಿ ಕಲಿಸಬೇಕು. ದಲಿತರು ಈ ಲೋಕಸಭೆ ಚುನಾವಣೆಯನ್ನು ಸವಾಲಾಗಿ ತೆಗೆದುಕೊಳ್ಳದಿದ್ದರೆ, ಸಂವಿಧಾನ ಬದಲಾವಣೆ ಶತಸಿದ್ದವಾಗುತ್ತದೆ. ಮುಂದಿನ ಅಪಾಯಗಳ ತಡೆಗಾಗಿ ಜನಚಳುವಳಿಗಳು ಗಟ್ಟಿಯಾಗಬೇಕೆಂದರು.

ಸಭೆಯಲ್ಲಿ ಕೆ.ದೊರೈರಾಜ್, ಡಾ.ಅರುಂಧತಿ, ಎ.ನರಸಿಂಹಮೂರ್ತಿ, ಕೊಟ್ಟಶಂಕರ್, ರಂಗಧಾಮಯ್ಯ, ನರಸೀಯಪ್ಪ, ಪಿ.ಎನ್ ರಾಮಯ್ಯ, ಅನುಪಮಾ, ಪೂರ್ಣಿಮಾ, ಸುಧಾ, ಅರುಣ್, ಟಿ.ಸಿ. ರಾಮಯ್ಯ, ಕೃಷ್ಣಮೂರ್ತಿ, ತಿರುಮಲಯ್ಯ, ಮೋಹನ್, ವೆಂಕಟೇಶ್, ಕಾಶಿರಾಜ್, ರಾಜ, ಲಕ್ಷ್ಮಿಕಾಂತ್ ಮುಂತಾದವರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...