ತುಮಕೂರು | ಬಿಎಸ್ಎಫ್ ಯೋಧ ಚಂಡೀಗಢದಲ್ಲಿ ನಿಧನ

Date:

ಪಂಜಾಬ್‌ನ ಪಠಾಣ್ ಕೋಟ್’ನಲ್ಲಿ ಬಿಎಸ್ಎಫ್ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿಎಸ್ಎಫ್ ಯೋಧ ಎಸ್ ಜಿ ಸುರೇಶ್ ಕುಮಾರ್(36) ಚಂಡೀಗಢದಲ್ಲಿ ನಿಧನರಾಗಿದ್ದಾರೆ.

- Advertisement -

ತಾಲೂಕಿನ ಶ್ರೀರಂಗಪುರ ನಿವಾಸಿಯಾಗಿದ್ದ ಎಸ್ ಜಿ ಸುರೇಶ್ ಕುಮಾರ್ ಪಂಜಾಬ್‌ನ ಪಠಾಣ್ ಕೋಟ್’ನಲ್ಲಿ ಬಿಎಸ್ಎಫ್ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪಾವಗಡ ತಾಲೂಕಿನ ಜಯರಾಮರೆಡ್ಡಿ ಹಾಗೂ ಸುನಂದಮ್ಮ ದಂಪತಿಯ ಹಿರಿಯ ಪುತ್ರ. ಮೃತರು ಇಬ್ಬರು ಮಕ್ಕಳು, ಪತ್ನಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಿಡ್ನಿ ವೈಫಲ್ಯ: ಸುರೇಶ್ ಕುಮಾರ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಚಂಡೀಗಢದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ಸುರೇಶ್ ಕುಮಾರ್ ಅವರು ಒಂದು ತಿಂಗಳ ಹಿಂದಷ್ಟೇ ಊರಿಗೆ ಬಂದು ಹೋಗಿದ್ದರು. ಪತ್ನಿಗೆ ಎರಡನೇ ಮಗುವಿನ ಹೆರಿಗೆ ಸಂದರ್ಭದಲ್ಲಿ ಬಂದು, ಹೆರಿಗೆ ಮುಗಿಸಿ ವಾಪಸಾಗಿದ್ದರು. ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕರ್ತವ್ಯದ ನಿಮಿತ್ತ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮಕ್ಕೆ ಭದ್ರತೆಗೆ ಬಂದಿದ್ದರು.

ಅನಾರೋಗ್ಯದ ನಿಮಿತ್ತ ಮೃತಪಟ್ಟಿರುವ ಬಿಎಸ್ಎಫ್ ಯೋಧ ಎಸ್ ಜಿ ಸುರೇಶ್ ಕುಮಾರ್ ಅವರ ಪಾರ್ಥೀವ ಶರೀರ ಸೋಮವಾರ ಮಧ್ಯರಾತ್ರಿ ತಮ್ಮ ಸ್ವಗ್ರಾಮಕ್ಕೆ ಬರಲಿದ್ದು, ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಭ್ರಷ್ಟಾಚಾರದ ವಿರುದ್ಧ ಆರ್‌ಟಿಐ ಅಸ್ತ್ರ : ಮಾರ್ಗದರ್ಶಿ ಕೈಪಿಡಿ ಬಿಡುಗಡೆ

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆ-2005...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...