ತುಮಕೂರು | ಕರ್ತವ್ಯಪಾಲನೆ ಮೂಲಕ ಸಂವಿಧಾನ ರಕ್ಷಕರಾಗಲು ವಿದ್ಯಾರ್ಥಿಗಳಿಗೆ ಕರೆ

Date:

  ಸಂವಿಧಾನ ರಕ್ಷಣೆಗೆ ವಿದ್ಯೆಯ ಜೊತೆಗೆ ಶಿಸ್ತು ರೂಢಿಸಿಕೊಳ್ಳಬೇಕು, ಜವಾಬ್ದಾರಿ ನಾಗರೀಕರಾಗಿ ದೇಶಕ್ಕೆ ಅನೇಕ ಕರ್ತವ್ಯಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಇತಿಹಾಸ ಪ್ರಾಧ್ಯಾಪಕ ಪ್ರೋ.ಶಿವರಾಜು  ತಿಳಿಸಿದರು

- Advertisement -

ತುಮಕೂರು ತಾಲೂಕಿನ ಹೆಬ್ಬೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜೀನಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚಣೆಯಲ್ಲಿ ಮಾತನಾಡಿದ ಅವರು,   ಸಂವಿಧಾನ ರಚನಾಸಮಿತಿ ಸುಮಾರು 2 ವರ್ಷ, 11 ತಿಂಗಳು ಹಾಗೂ 18 ದಿನಗಳ ನಿರಂತರ ಶ್ರಮ ಮತ್ತು ಅನೇಕ ಚರ್ಚೆ-ಸಂವಾದಗಳ ಫಲಶೃತಿ ನಮ್ಮ ಈ ಸಂವಿಧಾನ. ಇದರಿಂದ ನಮ್ಮೆಲ್ಲರ ಜೀವನ ಉತ್ತಮಗೊಳ್ಳುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...
1002420449

ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಮಧುಸೂಧನ.ಕೆ.ಪಿ ಮಾತನಾಡಿ ಸಂವಿಧಾನ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಘನತೆ ಮತ್ತು ಸ್ವಾಭಿಮಾನದ ಬದುಕನ್ನು ಒದಗಿಸಿದೆ, ಎಲ್ಲರ ವ್ಯಕ್ತಿತ್ವವು ಸರ್ವತೋಮುಕ ಬೆಳವಣಿಗೆಗೆ ಹಾಗೂ ಸಮಾಜದ ಮುಮ್ಮುಕ ಚಲನೆಗೆ ಸಂವಿಧಾನ ಕಾರಣವಾಗಿದೆ, ನಮ್ಮ ಸಂವಿಧಾನ ನಮ್ಮ ಸ್ವಾಭಿಮಾನ ಎಂದು ತಿಳಿದು ಅದನ್ನು ರಕ್ಷಿಸೋಣ ಎಂದರು

  ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಜಗದೀಶ್ ಎಂ.ಎಸ್ ಮಾತನಾಡಿ ಹಕ್ಕುಗಳನ್ನಷ್ಟೇ ಅನುಭವಿಸಿ ಕರ್ತವ್ಯಗಳನ್ನು ಕಡೆಗಣಿಸಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ದ್ವಿತೀಯ ಬಿ.ಎ ವಿದ್ಯಾರ್ಥಿಗಳು ಸಂವಿಧಾನ ರಚನಾ ಸಭೆಯ ಪ್ರಮುಖ ಚರ್ಚೆಗಳಾದ ಪ್ರಸ್ತಾವನೆ, ಮೂಲಭೂತ ಹಕ್ಕುಗಳು ಹಾಗೂ ಅಸ್ಪೃಶ್ಯತೆ ಆಚರಣೆ ನಿಶೇಧ ಗಳ ಕುರಿತು ಕಿರುನಾಟಕ ಪ್ರದರ್ಶನ ಮಾಡಿದರು ಹಾಗೂ ಎಲ್ಲರೂ ಸಂವಿಧಾನ ಪ್ರಸ್ತಾವನೆಯನ್ನು ಪಠಿಸಿದರು.

   ಕಾರ್ಯಕ್ರಮದಲ್ಲಿ ಕಾಲೇಜಿನ ಅಧೀಕ್ಷಕ ಭಾರತೀ ಸುತ, ಅತಿಥಿ ಉಪನ್ಯಾಸಕರಾದ ಡಾ.ಶ್ರೀನಿವಾಸ್‌, ಡಾ.ರಾಕೇಶ್‌, ರಾಮಪ್ರಕಾಶ್‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಮಾಲತಮ್ಮ ಜನ್ಮದಿನದ ನೆಪದಲ್ಲಿ ರಂಗಭೂಮಿಯ ಪರಂಪರೆಯ ಮೆಲುಕು

 ಹಿರಿಯ ರಂಗಕರ್ಮಿ ಜಿ.ವಿ. ಮಾಲತಮ್ಮ ಅವರ 102ನೇ ಜನ್ಮದಿನದ ಅಂಗವಾಗಿ ನಾಡಿನ...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...

ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ...

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು...