ತುಮಕೂರು | ಸಹೋದ್ಯೋಗಿ ವರದಿಗಾರನಿಗೆ ಜಾತಿನಿಂದನೆ, ಹಲ್ಲೆ ಪಬ್ಲಿಕ್ ಟಿ.ವಿ ವರದಿಗಾರನ ವಿರುದ್ಧ ಎಫ್‌ಐಆರ್

Date:

ತುಮಕೂರು: ಸಹೋದ್ಯೋಗಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದರು ಎನ್ನಲಾದ ಪಬ್ಲಿಕ್ ಟಿ.ವಿ. ವರದಿಗಾರನ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. 

- Advertisement -

ಏ.21 ರಂದು ತುಮಕೂರು ನಗರದ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಇ.ಡಿ ದಾಳಿ ನಡೆದಿತ್ತು. ಈ ವೇಳೆ ಝೀ ಟಿ.ವಿ ಸುದ್ದಿ ವಾಹಿನಿಯ ವರದಿಗಾರ ಮಂಜುನಾಥ್ ಜಿ.ಎನ್ ಅವರು ವರದಿ ಮಾಡಲೆಂದು ಎಸ್‌ಎಸ್‌ಐಟಿಗೆ ಕಾಲೇಜಿಗೆ ತೆರಳಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಪಬ್ಲಿಕ್ ಟಿ.ವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಎಂಬಾತ  ಝೀ ಟಿ.ವಿ ವರದಿಗಾರ ಮಂಜುನಾಥ್ ಜಿ.ಎನ್ ಎಂಬುವವರ ಮೇಲೆ ಎರಗಿ ಪಬ್ಲಿಕ್ ಟಿ.ವಿ ಕಬ್ಬಿಣದ ಲೋಗೋ ಮೈಕಿನಿಂದ ಹಲ್ಲೆ ಮಾಡಿರುವುದು ಅಲ್ಲದೆ, ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಝೀ ನ್ಯೂಸ್ ವರದಿಗಾರ ಮಂಜುನಾಥ್ ಜಿ.ಎನ್ ಅವರಿಗೆ ಕುತ್ತಿಗೆಗೆ ಪೆಟ್ಟಾಗಿದ್ದು, ರಕ್ತಗಾಯಗಳಾಗಿವೆ. ಈ ವೇಳೆ ಸಹೋದ್ಯೋಗಿ ಮಿತ್ರರು ಮಂಜುನಾಥ್ ಜಿ.ಎನ್ ಅವರನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪಿ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....