ತುಮಕೂರು | ಶಿಥಿಲಗೊಂಡಿರುವ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳುವಂತೆ ಸಿಇಒ ಜಿ. ಪ್ರಭು ಸೂಚನೆ

Date:

Advertisements

ತುಮಕೂರು ಜಿಲ್ಲೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡ, ಆವರಣ ಗೋಡೆ, ಶೌಚಾಲಯ ಸೇರಿದಂತೆ ಶಿಥಿಲಗೊಂಡಿರುವ ಹಾಗೂ ಬಳಕೆಗೆ ಯೋಗ್ಯವಲ್ಲದ ಕಟ್ಟಡಗಳನ್ನು ತೆರವುಗೊಳಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ 2025-26ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ತಯಾರಿಕೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನ, ಲಿಂಕ್ ಡಾಕ್ಯುಮೆಂಟ್‌ಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. 

ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಪಾಲನಾ ಮತ್ತು ಪಶುವೈದ್ಯ ಸೇವೆ, ಕೃಷಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ ಇಲಾಖೆಗಳು ತಮ್ಮ ಇಲಾಖೆಗಳಲ್ಲಿ ಅವಶ್ಯವಿರುವ ಸಿವಿಲ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇ 9ರೊಳಗಾಗಿ ವಿವರವಾದ ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಬೇಕೆಂದು ಸೂಚಿಸಿದರಲ್ಲದೆ, ವಿವರವಾದ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಿ ಕಾಮಗಾರಿಯ ಅಂದಾಜು ಪಟ್ಟಿ ಹಾಗೂ ನಕ್ಷೆ ಸಿದ್ಧಪಡಿಸಿ ಮೇ 23ರೊಳಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕೆಂದು ನಿರ್ದೇಶಿಸಿದರು.

Advertisements

 ಇಲಾಖೆಗಳು ಕೈಗೊಳ್ಳುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳು ಏಕರೂಪದ ಅಂದಾಜು ಪಟ್ಟಿ ತಯಾರಿಸಬೇಕು. ದುರಸ್ತಿ ಅಗತ್ಯವಿರುವ ನೈಜ ಕಾಮಗಾರಿಗಳನ್ನು ಗುರುತಿಸಿ ಆದ್ಯತೆ ಮೇರೆಗೆ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಂಡು ಅನುಷ್ಟಾನಗೊಳಿಸಬೇಕು. ಸಿದ್ಧಪಡಿಸಿ ಸಲ್ಲಿಸಿದ ಕ್ರಿಯಾ ಯೋಜನೆಗಳಿಗೆ ಜೂನ್ ಮಾಹೆಯಲ್ಲಿ ಅನುಮೋದನೆ ನೀಡಲಾಗುವುದು ಎಂದರಲ್ಲದೆ, ಎಲ್ಲ ಇಲಾಖೆಗಳು ಸರ್ಕಾರದ ಆಸ್ತಿ ಸಂರಕ್ಷಣೆ ಮಾಡುವಲ್ಲಿ ಸೂಕ್ತ ಕ್ರಮ ವಹಿಸಬೇಕು ಎಂದು ಸೂಚಿಸಿದರು.

 ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X