ತುಮಕೂರು | ಡಿ.2ರಂದು ಮುಖ್ಯಮಂತ್ರಿ ಆಗಮನ; ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗೆ ಸಿದ್ಧತೆ

Date:

  ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಡಿಸೆಂಬರ್ 2ರಂದು ಆಗಮಿಸುತ್ತಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸವಲತ್ತುಗಳ ವಿತರಣೆಗೆ ಸಕಲ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

  ತುಮಕೂರು ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳಲ್ಲಿ ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ವರದಿ ಸಲ್ಲಿಸಬೇಕು ಹಾಗೂ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಕೆಲಸಗಳು ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಲಿರುವ ಕಾಮಗಾರಿ, ಶಂಕುಸ್ಥಾಪನೆ ನೆರವೇರಿಸಲಿರುವ ಕಾಮಗಾರಿ ಹಾಗೂ ಇಲಾಖೆಗಳಿಂದ ವಿತರಿಸಲಾಗುವ ಸವಲತ್ತುಗಳ ವಿವರವನ್ನು ದೃಢೀಕರಿಸಿ ನಿಖರ ಮಾಹಿತಿಯನ್ನು ಸಲ್ಲಿಸಬೇಕು. ಸವಲತ್ತು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ, ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರುವ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...