ತುಮಕೂರು | ಡಿ.2ರಂದು ಮುಖ್ಯಮಂತ್ರಿಗಳ ಬೃಹತ್ ಕಾರ್ಯಕ್ರಮ : 1259 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ

Date:

ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ  ತಿಳಿಸಿದರು.

- Advertisement -

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 2ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1000713954

ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸುಮಾರು 938 ಕೋಟಿ ರೂ. ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 66 ನೂತನ ಕಾಮಗಾರಿಗಳ ಉದ್ಘಾಟನೆ, ವಿವಿಧ ಇಲಾಖೆಗಳ 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಕಂದಾಯ ಇಲಾಖೆಯಿಂದ ಇ-ಸ್ವತ್ತು, ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಕೃಷಿ ಇಲಾಖೆಯಿಂದ ಫಲಾನುಭವಿ ರೈತರಿಗೆ ಟ್ರಾಕ್ಟಾರ್ , ಡೀಸೆಲ್ ಇಂಜಿನ್, ಪಿವಿಸಿ ಪೈಪ್, ತುಂತುರು ನೀರಾವರಿಯ ಕಿಟ್, ತೋಟಗಾರಿಕೆ ಇಲಾಖೆಯಲ್ಲಿ ಹನಿ ನೀರಾವರಿ, ಪವರ್ ಫೀಡರ್ಸ್, ರೇಷ್ಮೆ ಇಲಾಖೆಯ 2100 ಫಲಾನುಭವಿಗಳಿಗೆ ಸೋಂಕು ನಿವರಣಾ ಕಿಟ್, ಡಿ. ದೇವರಾಜು ಅರಸು ನಿಗಮದಿಂದ ಮಹಿಳೆಯರಿಗೆ 200 ಹೊಲಿಗೆ ಯಂತ್ರ, ಟ್ಯಾಕ್ಸಿ, ಕಾರ್ಮಿಕ ಇಲಾಖೆಯಿಂದ ವೆಲ್ಡಿಂಗ್ ಟೂಲ್ ಕಿಟ್ ಸೇರಿದಂತೆ ಜಿಲ್ಲಾಡಳಿತ ಗುರುತಿಸಿರುವ 1.50 ಲಕ್ಷ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ಹಂಚಿಕೆ ಮಾಡಲಾಗುವುದು. ಅರ್ಹ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ 2000 ಹಕ್ಕು ಪತ್ರಗಳನ್ನು ವಿತರಿಸಲಾಗುವುದು. ಎಂದು ಮಾಹಿತಿ ನೀಡಿದರು.

ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ ಎಂಬ ಸಂದೇಶ ಜನಸಮೂಹಕ್ಕೆ ರವಾನೆಯಾಗಬೇಕು. ಸರ್ಕಾರದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ಈ ಕಾರ್ಯಕ್ರಮ ಉತ್ತರವಾಗಲಿದೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ಸಂಜೀವಿನಿ ಕಾರ್ಯಕ್ರಮದಡಿ ಮಹಿಳಾ ಸ್ವಸಹಾಯ ಸಂಘಗಳ 40,000 ಮಹಿಳೆಯರಿಗೆ 40 ಕೋಟಿ ರೂ. ಗಳ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ತಿಳಿಸಿದರು. 

ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕೆಎಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. 

1000713951

ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ತುಮಕೂರು ತಾಲ್ಲೂಕು ಬೆಳ್ಳಾವಿ ಹೋಬಳಿ ಪಿ.ಗೊಲ್ಲಹಳ್ಳಿ ಗ್ರಾಮದಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಹಸ್ತಾಂತರಿಸಲಾಗಿದ್ದು, 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಕ್ರಿಕೆಟ್ ಕ್ರೀಡಾಂಗಣ ಕಾಮಗಾರಿಯು 2 ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಜಾತಿವಾರು ದತ್ತಾಂಶ ಸಂಗ್ರಹಿಸಲು ನಾಗಮೋಹನ್ ದಾಸ್ ಸಮಿತಿ ರಚಿಸಲಾಗಿದ್ದು, ಸಮಿತಿ ವರದಿ ಬಂದ ನಂತರ ವಿಳಂಬ ಮಾಡದೆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ತಪ್ಪದೆ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳನ್ನಾಗಿ ನೇಮಕ ಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಯಿಸಿದ ಸಚಿವರು, ರಾಜ್ಯದಲ್ಲಿ ಈವರೆಗೂ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾಗಿ ರಾಜ್ಯಪಾಲರು ಕಾರ್ಯನಿರ್ವಹಿಸುತ್ತಿದ್ದರು. ಗುಜರಾತ್‌ನಲ್ಲಿ ಮುಖ್ಯ ಮಂತ್ರಿಗಳನ್ನು ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳನ್ನಾಗಿ ನೇಮಕ ಮಾಡಲಾಗಿದ್ದು, ರಾಜ್ಯದಲ್ಲಿಯೂ ಸಹ ಇನ್ನೂ ಮುಂದೆ ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...