ತುಮಕೂರು | ಸಿಐಟಿಯು ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 3 ರಿಂದ ಆಹೋರಾತ್ರಿ ಧರಣಿ : ಸೈಯದ್ ಮುಜೀಬ್

Date:

ಸುಪ್ರಿಂ ಕೋರ್ಟಿನ ಆದೇಶದ ಅನ್ವಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ, ಕರ್ನಾಟಕ ಕಾರ್ಮಿಕರ ಸಮ್ಮೇಳನ ಆಯೋಜನೆ, ಸಮಾನ ಕೆಲಸಕ್ಕೆ ಸಮಾನ ವೇತನ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಮಾರ್ಚ್ 3ರಿಂದ 7ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದ್ದಾರೆ.

- Advertisement -

   ತುಮಕೂರು ನಗರದ ಜನ ಚಳವಳಿ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಹೋರಾತ್ರಿ ಧರಣಿಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾರ್ಚ್ 3ರಂದು ಗ್ರಾಮ ಪಂಚಾಯಿತಿ ಕಾರ್ಮಿಕರು, ಮಾರ್ಚ್ 4ರಂದು ಅಕ್ಷರ ದಾಸೋಹ ಕಾರ್ಮಿಕರು, ಮಾರ್ಚ್ 5ರಂದು ಕಟ್ಟಡ ನಿರ್ಮಾಣ ಕಾರ್ಮಿಕರು, ಮಾರ್ಚ್ 6ರಂದು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಖಾಯಂ ಹಾಗು ಗುತ್ತಿಗೆ ಕಾರ್ಮಿಕರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರು, ಸಾರಿಗೆ ಕಾರ್ಮಿಕರಾದ ಆಟೋ,ಟ್ಯಾಕ್ಸಿ ಚಾಲಕರು ಹೋರಾಟದಲ್ಲಿ ಭಾಗವಹಿಸುತ್ತಿದ್ದಾರೆ ಮತ್ತು ಮಾರ್ಚ್ 7ರಂದು ಅಂಗನವಾಡಿ ಕಾರ್ಮಿಕರು ಈ ಬೃಹತ್ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.ಸುಮಾರು 1ಲಕ್ಷಕ್ಕೂ ಅಧಿಕ ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತಿದ್ದು, ತುಮಕೂರು ಜಿಲ್ಲೆಯಿಂದ ಸುಮಾರು 5 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...
1001116420

ಕರ್ನಾಟಕ ರಾಜ್ಯದ ಕಾರ್ಮಿಕರ ಹಲವು ಪ್ರಮುಖ ಬೇಡಿಕೆಗಳು ದೀರ್ಘ ಕಾಲದಿಂದ ಇತ್ಯರ್ಥವಾಗದೇ ಉಳಿದಿದೆ. ಶ್ರಮಶಕ್ತಿಯ ಸಮರ್ಪಕ ನಿರ್ವಹಣೆ ಹಾಗು ಶ್ರಮಿಕರನ್ನು ಮಾರುಕಟ್ಟೆಯ ಚಟುವಟಿಕೆಗಳಲ್ಲಿ ಸಕ್ರೀಯ ಪಾಲುವಹಿಸುವಂತೆ ಮಾಡಲು ಅಗತ್ಯ ವಿತ್ತ ಕ್ರಮಗಳನ್ನು ರಾಜ್ಯ ಸರಕಾರ ತೆಗೆದುಕೊಳ್ಳುವ ಅಗತ್ಯವಿದೆ.ರಾಜ್ಯ ಸರಕಾರವು ಪ್ರಗತಿಶೀಲ ಹಾಗು ಬಹುಸಂಖ್ಯೆಯಲ್ಲಿನ ಶ್ರಮಜೀವಿಗಳನ್ನು ಒಳಗೊಳ್ಳುವ ಆರ್ಥಿಕ ನೀತಿಗಳನ್ನು ಜಾರಿಗೆ ತರುತ್ತದೆಂಬ ರಾಜ್ಯದ ಕಾರ್ಮಿಕರ ನಿರೀಕ್ಷೆಯು ಲೋಕಸಭಾ ಚುನಾವಣೆಗಳ ನಂತರದಲ್ಲಿ ರಾಜ್ಯ ಸರಕಾರ ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಹುಸಿಯಾಗುತ್ತಿದೆ ಎಂದರು.

ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ನೀಡಬೇಕಾದ ಆರ್ಥಿಕ ನೆರವನ್ನು ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರಕಾರವು ಯಾವುದೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಮತ್ತೊಂದೆಡೆ ರಾಜ್ಯದ ಆರ್ಥಿಕ ಸ್ಥಿತಿಗೆ ಅಪಾಯಕಾರಿಯಾಗುವ ರೀತಿಯಲ್ಲಿ ಸಾಲಗಳನ್ನು ಪಡೆಯಲು ಮುಂದಾಗುತ್ತಿದೆ.ಮೆಟ್ರೋ,ಬಸ್ ಪ್ರಯಾಣ ದರಗಳನ್ನು ಹೆಚ್ಚಿಸಲಾಗುತ್ತಿದೆ. ಕೇಂದ್ರ ಸರಕಾರದ ಮಾದರಿಯಲ್ಲೇ ಸಾರ್ವಜನಿಕ ಉದ್ದಿಮೆಗಳು ಹಾಗು ಆಸ್ತಿಗಳನ್ನು ‘ನಗದೀಕರಣ ಮಾಡಲು” ಹಾಗು ಖಾಸಗೀಕರಣ ಮಾಡಲು ಮುಂದಾಗುತ್ತಿದೆ. ಫಲವತ್ತಾದ ರೈತರ ಭೂಮಿಯನ್ನು ಒತ್ತಾಯ ಪೂರ್ವಕವಾಗಿ ಸ್ವಾಧೀನ ಮಾಡಿ ಕಾರ್ಪೊರೇಟ್ ಹಾಗು ಭೂಮಾಫಿ ಯಾಗಳ ವಶಕ್ಕೆ ಒಪ್ಪಿಸುವ ಭೂಸ್ವಾಧೀನ ನೀತಿಗಳನ್ನು ಮುಂದುವರಿಸುತ್ತಿದೆ ಎಂದು ಸೈಯದ್ ಮುಜೀಬ್ ಆರೋಪಿಸಿದರು.

1001116420 1

ಸಿಐಟಿಯು ಜಿಲ್ಲಾ ಖಜಾಂಚಿ ಎ.ಲೋಕೇಶ್ ಮಾತನಾಡಿ, ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಕಾರ್ಮಿಕ ಕಾನೂನುಗಳಲ್ಲಿ ಜಾರಿ ಮಾಡಿದ ಮಾರಕ ತಿದ್ದುಪಡಿಗಳನ್ನು ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರವು ಮುಂದುವರಿಸುತ್ತಿದೆ.ಕೃಷಿ ಕ್ಷೇತ್ರದಲ್ಲಿಯು ಎಪಿಎಂಸಿ ಕಾಯಿದೆಗಳಲ್ಲಿ ಬಿಜಿಪಿ ಸರಕಾರವು ಜಾರಿಗೆ ತಂದಿದ್ದ ರೈತವಿರೋಧಿ ತಿದ್ದುಪಡಿಗಳನ್ನು ಕಾಂಗ್ರೆಸ್ ಸರಕಾರವು ಹಿಂಪಡೆಯದೆ ಜನರಿಗೆ ನೀಡಿದೆ ಭರವಸೆಗಳನ್ನು ಹುಸಿ ಮಾಡಿದೆ.ಈ ಹಿನ್ನೆಲೆಯಲ್ಲಿ ಎಲ್ಲಾ ದುಡಿಯುವ ಜನರ ಹಕ್ಕುಗಳನ್ನು ನಾಶಮಾಡುವ ಬಂಡವಾಳ ವರ್ಗಗಳ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಅದಲ್ಲದೇ ಸಂಘಟಿತ, ಅಸಂಘಟಿತ, ಪತ್ರಿಕಾ ಉದ್ಯಮ, ಗುತ್ತಿಗೆ ಹಾಗು ಖಾಯಮೇತರ ಕಾರ್ಮಿಕರ ವಿವಿಧ ಬೇಡಿಕೆಗಳು, ಸರಕಾರಿ ಯೋಜನೆಗಳಲ್ಲಿ ಕೆಲಸ ಮಾಡುವ ಅಂಗನವಾಡಿ, ಬಿಸಿಯೂಟ ಕಾರ್ಮಿಕರ ಬೇಡಿಕೆಗಳು, ರೈತರಿಗೆ ಬೆಂಬಲ ಬೆಲೆ ಸೇರಿದಂತೆ ಕೃಷಿರಂಗದ ಬೇಡಿಕೆಗಳು, ಶಿಕ್ಷಣವನ್ನು ಖಾಸಗೀಕರಣ ಮಾಡುವ ಮೂಲಕ ದುಬಾರಿ ಮಾಡುವ ಹೊಸ ಶಿಕ್ಷಣ ನೀತಿಗಳ ವಿರೋಧಿಸುವ ಹಾಗು ಜನಪರ ಶಿಕ್ಷಣ ನೀತಿಗಳ ಜಾರಿಯ ಬೇಡಿಕೆಗಳನ್ನು ಒಳಗೊಂಡಂತೆ 37 ಬೇಡಿಕೆಗಳನ್ನು ಮುಂದಿಟ್ಟು ಈ ಅಹೋರಾತ್ರಿ ಧರಣಿಯನ್ನು ನಡೆಸಲಾಗುತ್ತಿದೆ ಎಂದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಜಿ.ಕಮಲ ಮಾತನಾಡಿ,2022ರಿಂದ ಜಾರಿಯಾಗಬೇಕಾದ ಪೂರ್ಣ ವಿಮರ್ಶಿತ ಕನಿಷ್ಠ ವೇತನದ ಜಾರಿಯು ವಿಳಂಬವಾಗುತ್ತಿದೆ. ಅವೈಜ್ಞಾನಿಕವಾಗಿ ಹಾಗು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ತತ್ವಗಳನ್ನು ಉಲ್ಲಂಘಿಸಿ 2022ರಲ್ಲಿ ಘೋಷಿಸಲಾಗಿದ್ದ ಕನಿಷ್ಠ ವೇತನ ಪ್ರಕಟಣೆಗಳನ್ನು ರಾಜ್ಯದ ಪ್ರಮುಖ ಕಾರ್ಮಿಕ ಸಂಘಟನೆಗಳು ವಿರೋಧಿಸಿವೆ.ಕೂಡಲೆ ಕನಿಷ್ಠ ವೇತನವನ್ನು ಘೋಷಿಸಲು ಸರಕಾರವು ಕ್ರಮವಹಿಸಬೇಕು.ಬಿಜೆಪಿ ನೇತ್ರತ್ವದ ರಾಜ್ಯ ಸರಕಾರವು ಕೆಲಸದ ವೇಳೆಯನ್ನು ವಿಸ್ತರಿಸುವ, ಮಹಿಳಾ ಕಾರ್ಮಿಕರನ್ನು ರಾತ್ರಿ ಪಾಳಿಯಲ್ಲಿ ದುಡಿಸಲು ಅವಕಾಶಕೊಡುವ ಕಾನೂನು ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂಬ ಬೇಡಿಕೆಗಳನ್ನಿಟ್ಟುಕೊಂಡು ನಡೆಯುತ್ತಿರುವ ಹೋರಾಟದಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಅಂಗನವಾಡಿ ನೌಕರರ ಸಂಘದ ಗುಲ್ಜಾರ್ ಭಾನು, ಅಕ್ಷರ ದಾಸೋಹ ನೌಕರರ ಸಂಘಟನೆಯ ನಾಗರತ್ನ, ಹಮಾಲಿಗಳ ಸಂಘದ ನಾಗರಾಜು, ಮುನ್ಸಿಪಲ್ ಕಾರ್ಮಿಕರ ಸಂಘಟನೆಯ ಎನ್.ಕೆ.ಸುಬ್ರಮಣ್ಯ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...