ತುಮಕೂರು | ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

Date:

Advertisements

ತುಮಕೂರಿನಲ್ಲಿ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು. 

ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಡೇಟಿಯಂ ಭೂಮಿಯು ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಲಾಯಿತು.

1000725402

ಬಳಿಕ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ, ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು.

Advertisements

ಸುಮಾರು ವರ್ಷಗಳಿಂದ ಕನಸಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತರಬೇತಿಗೆ ಅಡಿಗಲ್ಲು ಹಾಕಲಾಗಿದೆ. ಕೆಸ್‌ಸಿಎ ಎರಡು ವರ್ಷದಲ್ಲಿ ಸ್ಟೇಡಿಯಂ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದೆ ಎಂದು ಹೇಳಿದರು.

1000725403

ವಸಂತನರಸಾಪುರದಲ್ಲಿ 20 ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶಕ್ಕೆ ನೀಡಲಾಗಿದೆ‌. ಏಷ್ಯದಲ್ಲಿ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಎಲ್ಲ ರೀತಿಯ ಸಹಕಾರ ಕೊಟ್ಟಿದ್ದಾರೆ. ಫುಡ್ ಪಾರ್ಕಿಂಗ್ ಆರಂಭವಾಗಿದ್ದು, ಜಪಾನೀಸ್ ಟೌಪ್‌ಶಿಪ್‌ ನಿರ್ಮಾಣಕ್ಕೆ 500 ಎಕರೆ ನೀಡಲಾಗಿದೆ ಎಂದು ತಿಳಿಸಿದರು.

ಈ ಭಾಗದ ಜನರು ಕೈಗಾರಿಕಾ‌ ಪ್ರದೇಶಕ್ಕಾಗಿ ಭೂಮಿಯನ್ನು ಕಳೆದುಕೊಂಡಿದ್ದು, ಅವರಿಗೆ ಉದ್ಯೋಗ ಸಿಗುವಂತಾಗಬೇಕು. ಸ್ಥಳೀಯರಿಗೆ ಹೆಚ್ಚಿನ ಒತ್ತು ನೀಡಬೇಕು. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗು ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು.

1000725401

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎನ್.ರಾಜಣ್ಣ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.‌ ಕೆ.ಗೋವಿಂದರಾಜು, ಶಾಸಕರಾದ ಬಿ.ಸುರೇಶ್‌ಗೌಡ, ಜ್ಯೋತಿಗಣೇಶ್, ಸುರೇಶ್, ಶ್ರೀನಿವಾಸ್, ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಆರ್‌.ರಾಜೇಂದ್ರ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್, ಮಾಜಿ ಶಾಸಕ ಗೌರಿಶಂಕರ್, ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X