ತುಮಕೂರು | ಕಾಂಗ್ರೆಸ್ಸಿಗರು ಯೋಗ್ಯತೆಯಿಂದ ಅಧಿಕಾರ ಪಡೆದವರೇ ಹೊರತು ಜಾತಿಯ ಬಲದಿಂದಲ್ಲ: ಸಚಿವ ರಾಜಣ್ಣ

Date:

Advertisements

ಕಾಂಗ್ರೆಸ್ ಪಕ್ಷ ಯಾವತ್ತು ಜಾತಿ ಜನಸಂಖ್ಯೆಯನ್ನು ನೋಡಿ ಅಧಿಕಾರ ನೀಡಿಲ್ಲ. ದೇವರಾಜ ಅರಸು, ಧರ್ಮಸಿಂಗ್, ವೀರಪ್ಪಮೊಹಿಲಿ ಅವರುಗಳೆಲ್ಲಾ ಯೋಗ್ಯತೆಯಿಂದ ಅಧಿಕಾರ ಪಡೆದವರೇ ಹೊರತು ಜಾತಿಯ ಬಲದಿಂದಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ-ತುಮಕೂರು ಜಿಲ್ಲೆ ಇವರು ಆಯೋಜಿಸಿದ್ದ ಹಿಂದುಳಿದ ವರ್ಗಗಳ ಒಕ್ಕೂಟದ ದಶಮಾನೋತ್ಸವ ಕಾರ್ಯಕ್ರಮ ಹಾಗೂ ಕೆ.ಎನ್.ಆರ್.ಪ್ರಶಸ್ತಿ ಪ್ರಧಾನ ಸಮಾರಂಭ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ದಲಿತರು,ಹಿಂದುಳಿದ ವರ್ಗದವರು,ಅಲ್ಪಸಂಖ್ಯಾತರು ಎಲ್ಲರಿಗೂ ರಾಜಕೀಯ ಅಧಿಕಾರವನ್ನು ನೀಡಿದೆ.ಆದರೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇದು ಸಾಧ್ಯವೇ ಎಂದು ಪ್ರಶ್ನಿಸಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗುವ ಸಮಯದಲ್ಲಿ ಅವರು ಜನಪ್ರತಿನಿಧಿಯಲ್ಲ.ಅಂದಿನ ಎಐಸಿಸಿ ಕಾರ್ಯಕಾರಿ ಮಂಡಳಿ ಸದಸ್ಯರಾಗಿದ್ದ ಕೊಲ್ಲೂರು ಮಲ್ಲಪ್ಪ ಅವರ ಸಲಹೆಯಂತೆ ಶ್ರೀಮತಿ ಇಂದಿರಾಗಾಂಧಿ ಅವರು ಅರಸು ಅವರನ್ನು ಮುಖ್ಯಮಂತ್ರಿ ಮಾಡಿದರು.ಆದರೆ ಅವರು ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ,ಜೀತ ವಿಮುಕ್ತಿ ಸೇರಿದಂತೆ ಹಲವಾರು ಯೋಜನೆಗಳು ರಾಷ್ಟ್ರಮಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಸರು ತಂದುಕೊಟ್ಟವು.

Advertisements

ಹಾಗೆಯೇ ಬಂಗಾರಪ್ಪ ಅವರು ಸಹ ಜಾರಿಗೆ ತಂದ ವಿಶ್ವ,ಆರಾಧನಾ, ಆಶ್ರಯ, ಕನ್ನಡ ಮಾಧ್ಯಮ ಕೃಪಾಂಕ ಇವುಗಳು ಬಡವರ ಪರವಾಗಿ ಹೆಚ್ಚು ಜನಪ್ರಿಯತೆ ಪಡೆದವು.ಈ ಎಲ್ಲಾ ನಾಯಕರು ಜನರೊಂದಿಗೆ ಬೆರತು ಕೆಲಸ ಮಾಡಿದರು.ಜನರಿಂದ ಅಂತರ ಕಾಯ್ದು ಕೊಳ್ಳಲಿಲ್ಲ. ಜನರಿಂದ ದೂರ ಇದ್ದವ ಜನನಾಯಕನಾಗಲು ಸಾಧ್ಯವೇ ಇಲ್ಲ ಎಂದರು.

ಸಂಘಟನೆ ಎಂಬುದು ಒಂದು ನಿರಂತರ ಪ್ರಕ್ರಿಯೆ. ಹಾಗಾಗಿ ಎಲ್ಲಾ ಹಿಂದುಳಿದ ವರ್ಗಗಳ ದಾರ್ಶಾನಿಕ ಜಯಂತಿಗಳನ್ನು ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಗಸ್ಟ್ 20ರ ದೇವರಾಜು ಅರಸು ಜಯಂತಿಯಂದು ದಾರ್ಶನಿಕರ ದಿನವಾಗಿ ಆಚರಿಸುವುದರಿಂದ ಎಲ್ಲಾ ಹಿಂದುಳಿದ ವರ್ಗಗಳನ್ನು ಒಂದು ವೇದಿಕೆಯಲ್ಲಿ ತರಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ ಸಚಿವ ಕೆ.ಎನ್.ರಾಜಣ್ಣ, ಮೊದಲು ಹಿಂದುಳಿದ ವರ್ಗಗಳಲ್ಲಿ ಶೈಕ್ಷಣಿಕ ಪ್ರಜ್ಞೆಯ ಜೊತೆಗೆ, ರಾಜಕೀಯ ಪ್ರಜ್ಞೆಯನ್ನು ಮೂಡಿಸಲು ಇದರಿಂದ ಸಾಧ್ಯ ಎಂದರು.

ವಿಧಾನಪರಿಷತ್ ಸದಸ್ಯ ವೇಣುಗೋಪಾಲ್ ಮಾತನಾಡಿ, ಕೊಟ್ಟ ಮಾತಿಗೆ ತಪ್ಪದ, ಇಟ್ಟ ಹೆಜ್ಜೆಯನ್ನು ಹಿಂದಿಡದ, ನೇರ, ನಿಷ್ಟೂರ ನಡೆಯ ಕೆ.ಎನ್.ರಾಜಣ್ಣ ಹಿಂದುಳಿದ ವರ್ಗಗಳಿಗೆ ಹೊಸ ಆಶಾಕಿರಣವಾಗಿದ್ದಾರೆ. ಬಿಹಾರ ಸರ್ಕಾರಕ್ಕಿಂತ ಮೊದಲೇ 2016ರಲ್ಲಿ ಸಿದ್ದರಾಮಯ್ಯ ಅವರು ಕಾಂತರಾಜು ಆಯೋಗ ರಚಿಸಿ, ಅರ್ಥಿಕ, ಸಾಮಾಜಿಕ ಸಮೀಕ್ಷೆ ನಡೆಸಿದ್ದರೂ ಇದುವರೆಗೂ ಸರ್ಕಾರ ವರದಿ ಸ್ವೀಕರಿಸಿಲ್ಲ.

ಸರ್ಕಾರ ಕೂಡಲೇ ಕಾಂತರಾಜು ವರದಿಯನ್ನು ಸ್ವೀಕರಿಸಿ, ಸಾರ್ವಜನಿಕ ಅಭಿಪ್ರಾಯಕ್ಕೆ ಬಿಡಬೇಕು. ಸಂಸದ ಆನಂತಕುಮಾರ್ ಹೆಗಡೆ ಹೇಳಿಕೆ ನೋವುಂಟು ಮಾಡಿದ್ದು,ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಕೇಸು ದಾಖಲಿಸುವಂತೆ ಸಲಹೆ ನೀಡಿದರು.

ಪತ್ರಕರ್ತ ಎಸ್. ನಾಗಣ್ಣ ಮಾತನಾಡಿ, ರಾಜಕೀಯವಾಗಿ, ಅರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬಹಳ ಹಿಂದುಳಿದಿರುವ, ಹಿಂದುಳಿದ ಸಮುದಾಯಗಳು ಕೆ.ಎನ್. ರಾಜಣ್ಣ ಅವರ ಆಶಯದಂತೆ ಒಗ್ಗೂಡಿ ಒಂದು ವೇದಿಕೆಗೆ ಸೇರುತ್ತಿರುವುದು ಒಳ್ಳೆಯ ಬೆಳೆವಣಿಗೆ ಎಂದರು.

ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧನಿಯಕುಮಾರ್ ಮಾತನಾಡಿ, ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಬೆನ್ನೆಲುಬಾಗಿ ನಿಂತು, ರಾಜಕೀಯವಾಗಿ, ಅರ್ಥಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಸಚಿವರಾದ ಕೆ.ಎನ್. ರಾಜಣ್ಣ ಮಾಡುತಿದ್ದಾರೆ. ಅಂತಹವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿ, ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ದಿಗೆ ಶ್ರಮಿಸಿದವರಿಗೆ ನೀಡಿ ಗೌರವಿಸಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಸುಮಾರು 32ಜನ ವಿವಿಧ ಸಮುದಾಯದ ಮುಖಂಡರುಗಳಿಗೆ ಕೆ.ಎನ್. ರಾಜಣ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಒಕ್ಕೂಟದ ಗೌರವಾಧ್ಯಕ್ಷ ಟಿ.ಎನ್. ಮಧುಕರ್ ಹಿಂದುಳಿದ ವರ್ಗಗಳ ಒಕ್ಕೂಟದ ಹಕ್ಕೋತ್ತಾಯ ಮನವಿಯನ್ನು ಸಲ್ಲಿಸಿದರು.

ವೇದಿಕೆಯಲ್ಲಿ ವಿವಿಧ ಸಮಾಜದ ಮುಖಂಡರು ಹಾಜರಿದ್ದರು. ಆಡಿಟರ್ ಆಂಜನಪ್ಪ, ಡಾ. ಪಾಪಣ್ಣ, ಗುರುಪ್ರಸಾದ್, ಪಿ.ಮೂರ್ತಿ, ವೆಂಕಟಸ್ವಾಮಿ, ಚಿ.ನಿ.ಪುರಷೋತ್ತಮ್, ಡಿ.ಎಂ.ಸತೀಶ್, ಎಂ.ಜಿ. ಶ್ರೀನಿವಾಸಮೂರ್ತಿ, ಎ.ಡಿ. ಬಲರಾಮಯ್ಯ, ಕೊಟ್ಟ ಶಂಕರ್, ಪಿ.ಎನ್. ರಾಮಯ್ಯ, ಮೈಲಪ್ಪ, ಡಾ.ಕೆ.ವಿ. ಕೃಷ್ಣಮೂರ್ತಿ, ಮಲ್ಲಸಂದ್ರ ಶಿವಣ್ಣ, ಶಾಂತಕುಮಾರ್, ಮಂಜೇಶ್, ರೂಪೇಶ್ ಕೃಷ್ಣಯ್ಯ, ನಯಾಜ್ ಅಹಮದ್, ಗುರು.ಡಿ, ರಾಜು, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X