ತುಮಕೂರು | ದೆಹಲಿಯಲ್ಲಿ ನನ್ನ ವಿರುದ್ಧ ಮೂರು ಜನರಿಂದ ಪಿತೂರಿ : ಮಾಜಿ ಸಚಿವ ಕೆ ಎನ್ ರಾಜಣ್ಣ

Date:

“ಕಳೆದ ಬುಧವಾರ ಸಚಿವನಾಗಿದ್ದೆ, ಇಂದು ಮಾಜಿ ಸಚಿವನಾಗಿದ್ದೇನೆ, ಆದರೆ ನನಗೆ ಯಾವುದೂ ಬದಲಾವಣೆಯ ಅನುಭವವಾಗಿಲ್ಲ. ನನ್ನ ಮೇಲೆ ಜನರ ಇಟ್ಟಿರುವ ವಿಶ್ವಾಸ ಹಾಗೂ ಪ್ರೀತಿಯನ್ನು ನೋಡಿದರೆ ನನಗೆ ಸಂತೋಷವಾಗುತ್ತದೆ” ಎಂದು ಮಾಜಿ ಸಚಿವ ಕೆ. ಎನ್ ರಾಜಣ್ಣ ಹೇಳಿದರು

- Advertisement -

ಮಧುಗಿರಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ರಾಹುಲ್ ಗಾಂಧಿ ವೋಟ್ ಚೋರಿ ವಿಚಾರದಲ್ಲಿ ಜಾಗೃತಿ ಮೂಡಿಸುತ್ತಿರುವುದು ಒಳ್ಳೆಯ ಕೆಲಸ. ಹಳ್ಳಿಗಳಲ್ಲಿ ನಕಲಿ ವೋಟ್ ಹಾಕಲು ಅವಕಾಶವಿಲ್ಲ, ಆದರೆ ನಗರಗಳಲ್ಲಿ ಇದು ಹೆಚ್ಚಾಗಿದೆ. ಆರ್ ಎಸ್.ಎಸ್  ನವರು ಸಿಸ್ಟಮ್ಯಾಟಿಕ್ ಆಗಿ ನಡೆಸುತ್ತಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

 ಸಚಿವ ಸ್ಥಾನ ವಜಾ ವಿಚಾರ “ಇದು ಮುಖ್ಯಮಂತ್ರಿ ನಿರ್ಧಾರವಲ್ಲ, ಹೈ ಕಮಾಂಡ್ ನಿರ್ಧಾರ. ಮೂವರು ದೆಹಲಿಯಲ್ಲಿ ಪಿತೂರಿ ಮಾಡಿದ್ದಾರೆ. ಆದರೆ ನಾನು ಜನರ ಸೇವೆ ಮಾಡಲು ಬಳಸುತ್ತೇನೆ. ಸಮಯ ಬಂದಾಗ ಮತ್ತೆ ಸಚಿವ ಸ್ಥಾನ ಪಡೆಯುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

 “1998ರಲ್ಲಿ ವಿಧಾನ ಪರಿಷತ್‌ಗೆ ಅತಿ ಹೆಚ್ಚು ಬಹುಮತದಲ್ಲಿ ಗೆದ್ದಿದ್ದೆ. 2004ರಲ್ಲಿ ಟಿಕೆಟ್ ಸಿಗಲಿಲ್ಲ. ಮಧುಗಿರಿಯಲ್ಲಿ ಮೊದಲ ಬಾರಿ ಸೋಲು ಅನುಭವಿಸಿದ್ದೇನೆ, ಆದರೆ ಗೆಲುವು, ಸೋಲನ್ನು ಒಂದೇ ರೀತಿಯಾಗಿ ಸ್ವೀಕರಿಸಿದ್ದೇನೆ” ಎಂದು ನೆನಪಿಸಿಕೊಂಡರು.

 “ನಾನು ಸುಳ್ಳು ಹೇಳುವುದಿಲ್ಲ. ಅಧಿಕಾರಕ್ಕಿಂತ ಜನರ ಪ್ರೀತಿ ಮುಖ್ಯ. ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡುತ್ತಿದ್ದಾರೆ, ಅದರಿಂದ ಖುಷಿ ಇದೆ” ಎಂದರು.

ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನದಲ್ಲಿದ್ದೇನೆ ಎಂಬುದು ಸಹ ಅವರು ಬಹಿರಂಗಪಡಿಸಿದರು. ದೆಹಲಿಗೆ ತೆರಳಿ ಬಂದ ಬಳಿಕ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...