ತುಮಕೂರು | ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Date:

Advertisements

ಗಡಿ ಗ್ರಾಮವಾದ ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಭಾನುವಾರ ಸಂವಿಧಾನ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ರಾಗಪ್ಪ ಅಧ್ಯಕ್ಷತೆ ವಹಿಸಿದ್ದರು.

ಭಾರತದ ಸಂವಿಧಾನ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ, ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳ ಸಮತೆಯನ್ನು ದೊರೆಯುವಂತೆ ಮಾಡುವುದಕ್ಕಾಗಿ, ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲೆಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಿ, ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ರೀತಿಯಲ್ಲಿ 1949 ನವೆಂಬರ್ 26ರಂದು ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು, ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿದ್ದೇವೆ. ಅಲ್ಲದೇ ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ‌ಗದಗ | ಜನಪದರ ಬಾಯಲ್ಲಿ ಸಂವಿಧಾನ ಹೇಳುವಂತಾಗಬೇಕು: ವಿಶ್ರಾಂತ ನ್ಯಾ. ನಾಗಮೋಹನ್‌ ದಾಸ್

ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾಗೇಂದ್ರಪ್ಪ, ಶಾಲೆಯ ಶಿಕ್ಷಕಿಯರುಗಳಾದ ಮಹಮ್ಮದ್ ಉನ್ನೀಸ್, ರಾಧಮ್ಮ, ಚೇತನ್ ಕುಮಾರ, ಗ್ರಾಮಸ್ಥ ಶಂಕರಪ್ಪ ಹಾಗೂ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.

ವರದಿ: ಸಿಟಿಜನ್ ಜರ್ನಲಿಸ್ಟ್ ಕುಮಾರ ನಾಗಲಾಪುರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X