ತುಮಕೂರು | ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ

Date:

Advertisements

 ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಪರಿಶೀಲಿಸಿದರು. 

 ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿ ನೂತನ ಕಟ್ಟಡ ವಿನ್ಯಾಸದ ನೀಲನಕ್ಷೆ ಪರಿಶೀಲಿಸಿದ ನಂತರ ಅಧಿಕಾರಿಗಳೊಂದಿಗೆ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಚರ್ಚಿಸಿದ ಅವರು, ಪ್ರಸ್ತುತ ಇರುವ ಜಿಲ್ಲಾಸ್ಪತ್ರೆಯ ಕಟ್ಟಡವು 78 ವರ್ಷ ಹಳೆಯದಾಗಿದ್ದು, ಆಧುನೀಕರಿಸಲು ಸಾಧ್ಯವಿಲ್ಲ. ಕಟ್ಟಡದ ಹಲವು ಭಾಗಗಳು ಶಿಥಿಲಗೊಳ್ಳುತ್ತಿವೆ. ಅಲ್ಲದೆ ಹಳೆಯ ಕಟ್ಟಡದ ಮೇಲೆ ಮೇಲಂತಸ್ತುಗಳ ನಿರ್ಮಾಣ ಸಾಧ್ಯವಿಲ್ಲದೆ ಇರುವುದರಿಂದ ನೂತನವಾಗಿ ಸುಸಜ್ಜಿತ ಹಾಗೂ ಆಧುನಿಕವಾದ 300 ಹಾಸಿಗೆಗಳ ಕಟ್ಟಡವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಕಟ್ಟಡ ಕಾಮಗಾರಿಯನ್ನು ಗಣಿಬಾಧಿತ ಪ್ರದೇಶಗಳ ಸಮಗ್ರ ಪುನಃಶ್ಚೇತನ ಯೋಜನೆಯಡಿ ಕೈಗೊಳ್ಳಲಾಗುವುದು. ಕಾಮಗಾರಿ ಕೈಗೊಳ್ಳುವ ಮುನ್ನ ಬೇರೆ ಜಿಲ್ಲೆಯಲ್ಲಿ ಆಧುನಿಕವಾಗಿ ನಿರ್ಮಿಸಿರುವ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರಲ್ಲದೆ, ಕಟ್ಟಡವನ್ನು ಜಿ+4 ಅಂತಸ್ತುಗಳನ್ನೊಳಗೊಂಡಂತೆ ಆಧುನಿಕವಾಗಿ ವಿನ್ಯಾಸಗೊಳಿಸಬೇಕು ಎಂದು ಸೂಚನೆ ನೀಡಿದರು. 

Advertisements

ಸಾರ್ವಜನಿಕರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಲು ನವೀನ ಸೌಲಭ್ಯಗಳಿಂದ ಕೂಡಿದ ಆಸ್ಪತ್ರೆ ಕಟ್ಟಡದ ನಿರ್ಮಾಣ ಅತೀ ಅಗತ್ಯವಾಗಿದೆ. ವಿನ್ಯಾಸದಲ್ಲಿ ಸುಲಭ ಪ್ರವೇಶ, ತುರ್ತು ಸೇವೆಗಳ ವೇಗ, ಸ್ವಚ್ಛತೆ ಹಾಗೂ ಸ್ಮಾರ್ಟ್ ತಂತ್ರಜ್ಞಾನಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು. 

ಇದಕ್ಕೂ ಮುನ್ನ ಆಸ್ಪತ್ರೆಯ ಟ್ರಾಮಾಕೇರ್ ಸೆಂಟರ್, ಮಕ್ಕಳ ವಾರ್ಡ್, ಹೆರಿಗೆ ವಾರ್ಡ್, ತೀವ್ರ ನಿಗಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ, ತೀವ್ರ ನಿಗಾ ಘಟಕದಲ್ಲಿ ರೋಗಿಗಳನ್ನು ದಾಖಲು ಮಾಡಿಕೊಂಡ ವಹಿಯನ್ನು ಪರಿಶೀಲಿಸಿದರು. 

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಅಸ್ಗರ್ ಬೇಗ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಆರೋಗ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರು, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X