ತುಮಕೂರು | ಸುಳ್ಳು ದಾಖಲೆ ಸೃಷ್ಟಿ : ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ

Date:

Advertisements

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ ಉತ್ತರ ನೀಡಲು ತಡವರಿಸಿದ ಪ್ರಸಂಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ನಡೆಯಿತು.

ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಾಯುಕ್ತ ಪ್ರಕರಣಗಳ ತನಿಖೆ ಮತ್ತು ವಿಲೇವಾರಿ ಸಭೆಯಲ್ಲಿ ಈ ಪ್ರಸಂಗ ಜರುಗಿತು. ದೂರುದಾರರು ಮತ್ತು ಪ್ರತಿ ದೂರುದಾರರ ಸಮ್ಮುಖದಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ, ಪಿಡಿಓ ವಿನಾಯಕ ಅವರಿಗೆ ಎಚ್ಚರಿಕೆ ನೀಡಿದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸಾರ್ವಜನಿಕ ಸೇವೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವಂಚಿಸುವುದು ಅಪರಾಧ. ಇಂತಹ ಅಪರಾಧಗಳನ್ನು ಲೋಕಾಯುಕ್ತ ಸಹಿಸುವುದಿಲ್ಲ. ಸಾರ್ವಜನಿಕರನ್ನು ವಂಚಿಸುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

1000560149

ಕಾನೂನು ತೊಡಕಿಲ್ಲದ ಅರ್ಜಿಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕು. ಸಕಾರಣವಿಲ್ಲದೆ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸಬಾರದು. ಅಗತ್ಯ ದಾಖಲೆಗಳಿಲ್ಲದೆ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಟ್ಟಿರುವ ದೂರುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವೀಕೃತವಾಗಿವೆ. ನಿಯಮಗಳನ್ನು ಮೀರಿ ಇಷ್ಟ ಬಂದಂತೆ ಕರ್ತವ್ಯ ನಿರ್ವಹಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Advertisements
1000560081

ಮಧುಗಿರಿ ತಾಲ್ಲೂಕಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಅನುದಾನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಸಲ್ಲಿಕೆಯಾಗಿದ್ದ ದೂರನ್ನು ಪರಿಶೀಲಿಸಿದ ಅವರು ಸುವರ್ಣ ಸನಿವಾಸ ಪ್ರೌಢಶಾಲೆಯು ನೋಂದಣಿಯಾಗದೆ ಸರ್ಕಾರಿ ಅನುದಾನವನ್ನು ಬಳಸಿಕೊಳ್ಳುತ್ತಿದೆ. ಕೂಡಲೇ ಸಂಸ್ಥೆಯ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳನ್ನು ಬೇರೆ ಶಾಲೆಗೆ ದಾಖಲಿಸುವ ವ್ಯವಸ್ಥೆ ಮಾಡಬೇಕು ಎಂದು ಮಧುಗಿರಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಲೋಕಾಯುಕ್ತದ ವಿವಿಧ ಅಧಿಕಾರಿಗಳು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾ ನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X