ಹೈ-ಟೆನ್ಷನ್ ವಿದ್ಯುತ್ ಟವರ್‌ಗೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಘಡ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗುಂಡ್ಲಹಳ್ಳಿ ಕೆರೆ ಬಳಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ನಿವಾಸಿ ನಾರಾಯಣಪ್ಪ(65) ಮೃತ ದುರ್ದೈವಿ.
ಅವರು ತಮ್ಮ ಜಮೀನಿನಲ್ಲೇ ಮನೆ ಕಟ್ಟಿಕೊಂಡು ವಾಸವಾಗಿದ್ದರು. ಇತ್ತೀಚೆಗೆ ಟೊಮೆಟೊ ಬೆಳೆದಿದ್ದ ಅವರು ಭಾರೀ ನಷ್ಟ ಅನುಭವಿಸಿದ್ದರು. ಕೈ ಸಾಲ ಸೇರಿದಂತೆ ಸುಮಾರು 5 ಲಕ್ಷ ರೂ. ಸಾಲ ಮಾಡಿದ್ದರು ಎಂದು ಹೇಳಲಾಗಿದೆ.
ಬೆಳೆ ನಷ್ಟ ಮತ್ತು ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.
ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.