ತುಮಕೂರು | ಸಾಂಸ್ಕೃತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ : ಅಶೋಕ್ ಮೆಹ್ತ

Date:

Advertisements

ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ. ಅಶೋಕ್ ಮೆಹ್ತ ಅಭಿಪ್ರಾಯಪಟ್ಟರು. 

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆದ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರ ಆಯೋಜಿಸಿರುವ “ಇನ್‌ಸ್ಪಿರೋ “ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೈಕ್ಷಣಿಕ ಜೀವನದ ಜೊತೆ ಜೊತೆಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಹೆಚ್ಚಾಗಿ ಆತ್ಮ ವಿಶ್ವಾಸ ಮೂಡುತ್ತದೆ ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

1001609261

ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸಂಜೀವ್ ಕುಮಾರ್ ಮಾತನಾಡಿ, ಇನ್‌ಸ್ಪಿರೋ ಅನ್ನೋದು ಹಲವಾರು ನೆನಪಿನ ಕ್ಷಣಗಳಿಗೆ ಸಾಕ್ಷಿಯಾಗಿದೆ. ಇಂತಹ ಸಾಂಸ್ಕೃತಿಕ ವೇದಿಕೆಗಳು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಕ್ರಿಯಾತ್ಮಕ ಆಲೋಚನೆಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಇಂತಹ ಸಾಂಸ್ಕೃತಿಕ ಸಮಾರಂಭಗಳು ಉತ್ತಮ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು. 

Advertisements

ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಮಮತ.ಜಿ ಮಾತನಾಡಿ, ನಿರ್ವಹಣಾ ವಿಭಾಗ ಪ್ರಾರಂಭವಾಗಿದ್ದು 2006ರಲ್ಲಿ ಅಲ್ಲಿಂದ ಇಲ್ಲಿಯವರೆಗೂ ನಮ್ಮ ಕಾರ್ಯ ಪ್ರವೃತ್ತಿಯಲ್ಲಿ ಕ್ರಿಯಾತ್ಮಕವಾಗಿ ಸಾಗುತ್ತಿದ್ದೇವೆ. ಈ “ಇನ್‌ಸ್ಪಿರೋ “ ಕಾರ್ಯಕ್ರಮವನ್ನು ನಾವು ಸತತವಾಗಿ 16 ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದು ಈ ವರ್ಷವೂ ಬಹಳ ಸಡಗರದಿಂದ ನಡೆಸುತ್ತಿದ್ದೇವೆ ಇದಕ್ಕೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕವರ್ಗದವರು ಆಸಕ್ತಿಯಿಂದ ಭಾಗವಹಿಸಿದ್ದಾರೆ ಎಂದು ಶುಭ ಹಾರೈಸಿದರು. 

 ಕಾರ್ಯಕ್ರಮದಲ್ಲಿ ಅಕಾಡೆಮೆಕ್ ಡೀನ್ ಡಾ. ರೇಣುಕಾಲತಾ, ಎಸ್.ಎಸ್.ಎಫ್.ಜಿ.ಸಿ ಪ್ರಾಂಶುಪಾಲರಾದ ಡಾ.ಹೇಮಲತಾ , ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಡಾ. ಸುಷ್ಮಾ, ಹಾಗೂ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು , ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X