ತುಮಕೂರು | ಡಿಜಿಟಲ್ ಅಪರಾಧ ಕಡಿವಾಣಕ್ಕೆ ಶೀಘ್ರವೇ ಸೈಬರ್ ಸೆಕ್ಯೂರಿಟಿ ಸೆಂಟರ್ ; ಡಾ.ಜಿ.ಪರಮೇಶ್ವರ್

Date:

ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮಟ್ಟದಲ್ಲಿ ಅನೇಕ ಚರ್ಚೆ, ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 25,000 ಸೈಬರ್ ಪ್ರಕರಣಗಳು ದಾಖಲಾಗುತ್ತಿವೆ. ಇದರಲ್ಲಿ ಶೇ.20 ರಷ್ಟು ಪ್ರಕರಣ ಪತ್ತೆ ಹಚ್ಚಲು ಸಾಧ್ಯವಾಗುತ್ತಿದೆ. ಇನ್ನುಳಿದ ಪ್ರಕರಣ ಪತ್ತೆ ಹಾಕಲು ಸಂಶೋಧನಾತ್ಮಕವಾಗಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಅದರ ಜೊತೆಗೆ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಡಿಯಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯೂರಿಟಿ ಸೆಂಟರ್‌ನ್ನು ತುಮಕೂರಿನಲ್ಲಿ ತೆರೆಯಲು ತಯಾರಿ ನಡೆಸಲಾಗಿದೆ ಎಂದು ಗೃಹ ಸಚಿವರು ಹಾಗೂ ಸಾಹೇ ವಿವಿ ಕುಲಾಧಿಪತಿ  ಡಾ. ಜಿ ಪರಮೇಶ್ವರ್  ಹೇಳಿದರು.

- Advertisement -

ತುಮಕೂರು ನಗರದ ಕುಣಿಗಲ್‌ರಸ್ತೆಯ ಎಸ್‌ಎಸ್‌ಐಟಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ಆರಂಭಿಸಲಾದ ಪರಂ ಶುದ್ಧ ಕುಡಿಯುವ ನೀರಿನ ಘಟಕವನ್ನು ಭಾನುವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಹಿಂದೆ ಗೃಹ ಸಚಿವನಾಗಿದ್ದ ಕಾಲಘಟ್ಟದಲ್ಲಿ ಇದರ ಸ್ಥಾಪನೆಗೆ ಸರ್ಕಾರ ಮಟ್ಟದಲ್ಲಿಚಿಂತನೆ ನಡೆಸಲಾಗಿತ್ತು. ಈಗ ಪೊಲೀಸ್ ಇಲಾಖೆ ಸೇರಿದಂತೆ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಸೈಬರ್ ಸೆಕ್ಯೂರಿಟಿ ವಿಭಾಗದ ಜೊತೆಗೆ ಸೇರಿ ಸೆಂಟರ್ ಆಫ್‌ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯೂರಿಟಿ ಸೆಂಟರ್ ಸದ್ಯವೇ ಆರಂಭಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1001090474

ಸೈಬರ್ ಸೆಕ್ಯೂರಿಟಿ ಕೋರ್ಸ್ ನ ವಿದ್ಯಾರ್ಥಿಗಳಿಗೂ ಪೂರಕವಾಗುವಂತೆ ಚೆನ್ನೈನ ಕಂಪನಿಯೊಂದರ ಸಹಯೋಗದೊಂದಿಗೆ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯೂರಿಟಿ ಕೇಂದ್ರ ಶೀಘ್ರವಾಗಿ ಉದ್ಘಾಟನೆ ಗೊಳ್ಳಲಿದ್ದು, ಶೈಕ್ಷಣಿಕ ಚಟುವಟಿಕೆ ಜೊತೆಗೆ ಸಾರ್ವಜನಿಕರಿಗೆ ಆಗುವ ಡಿಜಿಟಲ್ ವ್ಯವಹಾರದ ಮೋಸ, ವಂಚೆನೆ ಪ್ರಕರಣಗಳನ್ನು ಬೇಗ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. 

ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಲ್ಯಾಬ್ ಸ್ಥಾಪನೆಗೆ ಒತ್ತು

ಪ್ರಪಂಚದ ಮೂಲೆ ಮೂಲೆಯ ನಾನಾ ದೇಶಗಳಲ್ಲಿ ಅಂಗ ಸಂಸ್ಥೆಗಳನ್ನು ಹೊಂದಿರುವ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂಬ ಮಾತು ಪ್ರಚಲಿತದಲ್ಲಿದ್ದು, ಇದಕ್ಕೆ ಪೂರಕವೆಂಬಂತೆ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇರುವ ಆರ್ಟಿಫಿಶಿಯಲ್ ಇಂಟಲಿಜೆನ್ಸ್, ಡೇಟಾ ಸೈನ್ಸ್ ಮತ್ತು ಸೈಬರ್ ಸೆಕ್ಯೂರಿಟಿಯಂತಹ ವಿನೂತನ ತಂತ್ರಜ್ಞಾನದ ನೂತನಕೋರ್ಸ್ಗಳನ್ನು ಈಗಾಗಲೇ ಆರಂಭಿಸಿದ್ದು ಶೈಕ್ಷಣಿಕ ಚಟುವಟಿಕೆಗಳಿಗೆ ಅನುಗುಣವಾಗಿ ಅಗತ್ಯ ಮೂಲ ಸೌಕರ್ಯಗಳನ್ನು ನೀಡಲಾಗುವುದು. ಸಮಾಜದ ಮುಖ್ಯ ವಾಹಿನಿಯಾಗಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕೊರ್ಸ್ನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕವಾಗಿ ಟಾಪ್‌ಎಂಡ್ ಸೌಲಭ್ಯಗಳನ್ನು ನೀಡಿ ಅವರು ವಿಶ್ವಮಟ್ಟದ ಸ್ವರ್ಧಾತ್ಮಕವಾಗಿ ಸಜ್ಜುಗೊಳಿಸುವ ಗರುತರ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಪರಮೇಶ್ವರ ನುಡಿದರು.

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ:

 ಸ್ಥಳೀಯವಾಗಿ ಶುದ್ಧವಾದ ನೀರನ್ನು ಒದಗಿಸುವ ಸಲುವಾಗಿ ಹಾಗೂ ಸಿವಿಲ್ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಹಾಗೂ ಸಂಶೋಧನಾನ್ಮಕ ಕೆಲಸಗಳಿಗೆ ಪೂರಕವಾಗದ ಪರಂ ಕುಡಿವ ನೀರಿನ ಘಟಕ ಲೋಕಾರ್ಪಣೆಗೊಂಡಿದ್ದು, ಅತ್ಯಾಧುನಿಕ ತಂತ್ರಜ್ಞಾನದಿAದ ಮಿನಿರಲ್ ಒಳಗೊಂಡAತಹ ಪರಂ ಶುದ್ಧ ಕುಡಿಯುವ ನೀರಿನ ಕೇಂದ್ರವನ್ನು ವ್ಯಾಪಾರದ ಉದ್ದೇಶದಿಂದ ಸ್ಥಾಪಿಸಲಾಗಿಲ್ಲ. ಸ್ಥಳೀಯವಾಗಿ ಉತ್ತಮವಾದ ಶುದ್ಧಕುಡಿಯುವ ನೀರನ್ನು ಒದಗಿಸುವ ಸಲುವಾಗಿ ಸ್ಥಾಪನೆ ಮಾಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸಿದ್ದಾರ್ಥ ಶಿಕ್ಷಣ ಸಂಸ್ಥೆಯು ಮುಂದೆ ಇಂತಹ ಇನ್ನೂ ಅನೇಕ ಜನಪಯೋಗಿ ಕಾರ್ಯಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡಸಿದೆ ಎಂದು ಡಾ.ಜಿ ಪರಮೇಶ್ವರ್ ಅವರು ತಿಳಿಸಿದರು.

1001090479

ಇದೇ ವೇಳೆ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿಭಾಗಗಳ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಹವಾ ನಿಯಂತ್ರಿತ ನೂತನ ಅತ್ಯಾಧುನಿಕ ಸುಸಜ್ಜಿತ ಸಭಾಂಗಣಕ್ಕೆ ಸಚಿವರಾದ ಡಾ.ಜಿ.ಪರಮೇಶ್ವರ  ಚಾಲನೆ ನೀಡಿದರು.

ಇದೇ  ಸಂದರ್ಭದಲ್ಲಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸದಸ್ಯರಾದ  ಕನ್ನಿಕಾ ಪರಮೇಶ್ವರಿ, ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ರಿಜಿಸ್ಟಾರ್‌ ಅಶೋಕ್ ಮೆಹ್ತಾ, ಸಾಹೇ ವಿವಿ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ ವೀರಯ್ಯ, ಎಸ್‌ಎಸ್‌ಐಟಿ ಪ್ರಾಂಶುಪಾಲರಾದ ಡಾ. ಎಂ.ಎಸ್. ರವಿಪ್ರಕಾಶ್, ಎಸ್ಟೇಟ್ ಮ್ಯಾನೇಜರ್ ಡಾ.ಜಿ.ಡಿ.ಶಿವರಾಜು, ಮೆಡಿಕಲ್ ಕಾಲೇಜಿನ ಸಾನಿಕೊಪ್ಪ, ಉಪಪ್ರಾಂಶುಪಾಲರಾದ ಡಾ ಪ್ರಭಾಕರ್, ಎಸ್‌ಎಸ್‌ಎಸ್‌ಇ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಲ್ ಸಂಜೀವ್ ಕುಮಾರ್, ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಜಿ ಪ್ರಭು ಸೇರಿದಂತೆ ವಿವಿಧ ವಿಭಾಗಗಳು ಮುಖ್ಯಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...