ತುಮಕೂರು ದಸರಾ | ರಂಗಭೂಮಿಗೆ ಪ್ರೋತ್ಸಾಹ ಇಂದಿನ ಅಗತ್ಯ : ಡಾ. ಜಿ. ಪರಮೇಶ್ವರ ಅಭಿಮತ

Date:

Advertisements

 ನಾಟಕವೇ ಸಂಸ್ಕೃತಿ, ಸಮಾಜದ ಪ್ರತಿಬಿಂಬ. ನಾಟಕಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.

ಸೋಮವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಿರ್ಮಿಸಿರುವ ಮಾಸ್ಟರ್ ಹಿರಣ್ಣಯ್ಯ ರಂಗ ವೇದಿಕೆಯಲ್ಲಿ ನಡೆದ ರಂಗ ದಸರಾ ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುಬ್ಬಿ ವೀರಣ್ಣ ಕಲಾಮಂದಿರವು ಅನೇಕ ಕಲಾವಿದರಿಗೆ ಜನ್ಮ ನೀಡಿರುವ ಮಂದಿರ. ಮಾಧ್ಯಮಗಳಿಲ್ಲದ ಕಾಲದಲ್ಲಿ ನಾಟಕಗಳು ಸಮಾಜದ ಕನ್ನಡಿ ಆಗಿದ್ದವು. ಚಿತ್ರಮಂದಿರಗಳ ಪ್ರಭಾವದಿಂದ ನಾಟಕ ಮಂದಿರಗಳು ಕುಂಠಿತವಾಗಿದ್ದರೂ, ಕಲೆಯ ಜೀವಂತಿಕೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ನಾಟಕ ರಸಸ್ವಾದನೆ ಮಾಡಲು ದಸರಾ ಉತ್ಸವದ ಅಂಗವಾಗಿ ರಂಗಮಂದಿರಗಳಲ್ಲಿ ವಿಶೇಷ ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಗುಬ್ಬಿ ವೀರಣ್ಣ ಅವರ ನೇತೃತ್ವದಲ್ಲಿ ಅನೇಕ ಕಲಾಭಿಮಾನಿಗಳು ಹಾಗೂ ಕಲಾವಿದರು ಬೆಳೆದಿದ್ದಾರೆ. ಶ್ರೇಷ್ಠ ನಾಟಕ ರತ್ನಗಳನ್ನು ದೇಶಕ್ಕೆ ಪರಿಚಯಿಸುವಲ್ಲಿ ತುಮಕೂರು ಜಿಲ್ಲೆಯ ಪಾತ್ರ ಹಿರಿದಿದೆ. ಅದಕ್ಕಾಗಿ ದಸರಾ ಉತ್ಸವದ 9 ದಿನಗಳಲ್ಲಿ 15 ನಾಟಕ ಪ್ರದರ್ಶನಗಳ ಮೂಲಕ ರಂಗಭೂಮಿಗೆ ಬಲ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿರಾ ಶಾಸಕ ಹಾಗೂ ಕರ್ನಾಟಕ ಸರ್ಕಾರ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ತುಮುಲ್ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಪ್ರಭುದೇವ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ ಆಶ್ವಿಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

ಇದೇ ಸಂದರ್ಭದಲ್ಲಿ ಡಾ. ಗುಬ್ಬಿ ವೀರಣ್ಣ ಹಾಗೂ ಮಾಸ್ಟರ್ ಹಿರಣ್ಣಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. 

ಮೆಗಾ ಇಂಜಿನಿಯರಿಂಗ್  ಇನ್ಫಾಂಸ್ಟಕ್ಚರ್  ಕಂಪನಿಯವರು ದಸರಾ ಉತ್ಸವದ ಕಾರ್ಯಕ್ರಮಕ್ಕೆ 50 ಲಕ್ಷ ರೂ.ಗಳನ್ನು ದೇಣಿಗೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X