ತುಮಕೂರು ದಸರಾ ಜಾತ್ಯಾತೀತ, ಪಕ್ಷಾತೀತ ಉತ್ಸವ: ಡಾ. ಜಿ. ಪರಮೇಶ್ವರ

Date:

 ತುಮಕೂರು ದಸರಾ ಉತ್ಸವವು ಎಲ್ಲಾ ಧರ್ಮ, ಜಾತಿ, ಪಕ್ಷವೆಂಬ ಬೇಧ-ಭಾವವಿಲ್ಲದೇ ಸಡಗರದಿಂದ ಆಚರಿಸುವ ಹಬ್ಬವೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು.

- Advertisement -

ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿರುವ ಹಾಸ್ಯ ಚಕ್ರವರ್ತಿ ಶ್ರೀ ಟಿ.ಆರ್. ನರಸಿಂಹರಾಜು ಸಾಂಸ್ಕೃತಿಕ ದಸರಾ ವೈಭವ ವೇದಿಕೆಯಲ್ಲಿ ಸೋಮವಾರ ಏರ್ಪಡಿಸಿದ್ದ ಸಾಂಸ್ಕೃತಿಕ ದಸರಾ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಸರಾ ಉತ್ಸವವು ಸರ್ಕಾರಿ ಕಾರ್ಯಕ್ರಮಕ್ಕಷ್ಟೇ ಸೀಮಿತವಾಗದೆ ಎಲ್ಲರನ್ನೊಳಗೊಂಡ ಜನರ ಉತ್ಸವವಾಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ಕಳೆದ ವರ್ಷ ಪ್ರಪ್ರಥಮ ಬಾರಿಗೆ ಪ್ರಾರಂಭಿಸಲಾದ ತುಮಕೂರು ದಸರಾ ಉತ್ಸವವು ಜನಮನ್ನಣೆ ಪಡೆದು ಇಡೀ ರಾಜ್ಯದ ಗಮನ ಸೆಳೆದು ಇಂದಿನ ವೈಭವದ ದಸರಾ ಉತ್ಸವ ಆಚರಣೆಗೆ ಉತ್ತೇಜನ ನೀಡಿದೆ. ಯುವಜನತೆ ನಾಡ ಹಬ್ಬ ದಸರಾ ಉತ್ಸವವನ್ನು ಇದೇ ರೀತಿ ಮುಂದುವರೆಸಿಕೊಂಡು ಹೋಗಬೇಕೆಂದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.

ಇಂದಿನಿಂದ 11 ದಿನಗಳ ಕಾಲ ನಡೆಯಲಿರುವ ದಸರಾ ಉತ್ಸವವು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಅರಿವು ಬೆಳೆಸಲು ಪೂರಕವಾಗಿದೆ. ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆ, ವಿಜ್ಞಾನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಜೊತೆಗೆ, ಆಧುನಿಕ ಭಾರತಕ್ಕೆ ಪೂರಕವಾಗಿ ಮುಂದಿನ ಪೀಳಿಗೆಯನ್ನು ಸಜ್ಜುಗೊಳಿಸಬೇಕು. ಈ ನಿಟ್ಟಿನಲ್ಲಿ ದಸರಾ ಕಲಾ ಮತ್ತು ಜ್ಞಾನ ವೈಭವ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದರು.

1002088801

ಜಿಲ್ಲೆಯ ಸಂಗೀತ, ನಾಟಕ, ನೃತ್ಯ, ಸಾಹಿತ್ಯ, ಕಲೆ ಮತ್ತು ಕವಿಗೋಷ್ಠಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕ್ಷೇತ್ರದ ಕಲಾವಿದರಿಗೆ ವೇದಿಕೆ ಕಲ್ಪಿಸಲಾಗಿದ್ದು, ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾ ಉತ್ಸವದ ರಸದೌತಣವನ್ನು ಪ್ರತಿಯೊಬ್ಬರೂ ಸವಿಯಬೇಕು ಎಂದು ಹೇಳಿದರು.

 ದಸರಾ ಉತ್ಸವದ ಅಂಗವಾಗಿ ತ್ರಿವಿಧ ದಾಸೋಹಿ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಧಾರ್ಮಿಕ ಮಹಾ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳ ಜೊತೆಗೆ ಹೆಲಿಕಾಪ್ಟರ್ ರೈಡ್, ಫಲ-ಪುಷ್ಪ ಪ್ರದರ್ಶನ, ನಗರದ ಪ್ರಮುಖ ರಸ್ತೆಗಳಿಗೆ ದೀಪಾಲಂಕಾರ, ಉತ್ಸವವನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ಉಚಿತ ಅಂಬಾರಿ ಬಸ್ ಸೌಲಭ್ಯ, ಅಮಾನಿಕೆರೆಯಲ್ಲಿ ಬೋಟಿಂಗ್, ನೀರಿನ ಮೇಲೆ ರೆಸ್ಟೋರೆಂಟ್, ಸಂಗೀತ ರಸಸಂಜೆ, ಮೊದಲಾದ ವಿಶೇಷ ಅತ್ಯಾಕರ್ಷಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. 

ದಸರಾ ಉತ್ಸವ ಸಂದರ್ಭದಲ್ಲಿ ಪ್ರತಿದಿನ ಸ್ಥಳೀಯ ಹಾಗೂ ರಾಜ್ಯ ಮಟ್ಟದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಬಾರಿ ತುಮಕೂರು ದಸರಾ ವಿಶೇಷವಾಗಿ 240 ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಕೂಡ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

1002088828

ಜಿಲ್ಲೆಯ ಪರಂಪರೆ ಹಾಗೂ ಇತಿಹಾಸವನ್ನು ಜನತೆ ಮರೆಯಬಾರದೆಂಬ ನಿಟ್ಟಿನಲ್ಲಿ ತ್ರಿವಿಧ ದಾಸೋಹಿ ಶ್ರೀಶ್ರೀಶ್ರೀ ಡಾ: ಶಿವಕುಮಾರ ಸ್ವಾಮೀಜಿ, ಹಾಸ್ಯ ಚಕ್ರವರ್ತಿ ಶ್ರೀ ಟಿ.ಆರ್. ನರಸಿಂಹರಾಜು, ಶಿಕ್ಷಣ ಭೀಷ್ಮ ಡಾ: ಹೆಚ್.ಎಂ. ಗಂಗಾಧರಯ್ಯ, ಅಮರಶಿಲ್ಪಿ ಜಕಣಾಚಾರ್ಯ, ಡಾ: ಗುಬ್ಬಿ ವೀರಣ್ಣ, ಶ್ರೀ ಬೆಳ್ಳಾವೆ ನರಹರಿ ಶಾಸ್ತ್ರೀ, ಶ್ರೀ ತಿ.ನಂ. ಶ್ರೀಕಂಠಯ್ಯ, ಚಲನಚಿತ್ರ ನಟಿ ಮಂಜುಳಾ ಮುಂತಾದ ಖ್ಯಾತನಾಮರ ಹೆಸರಿನಲ್ಲಿ ವೇದಿಕೆಗಳು ಹಾಗೂ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ ಎಂದರು. 

ತುಮಕೂರು ದಸರಾ ಉತ್ಸವವು ಪ್ರತಿಯೊಬ್ಬರ ಹಬ್ಬ. ಜನಸಮುದಾಯದ ಹಬ್ಬ. ಪ್ರತಿಯೊಬ್ಬರೂ ಪಾಲ್ಗೊಂಡು ತುಮಕೂರು ದಸರಾ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಅವರು ಜನತೆಗೆ ಕರೆ ನೀಡಿದರು.

ಶ್ರೀ ಸಿದ್ದಗಂಗಾ ಮಠದ ಶ್ರೀಶ್ರೀಶ್ರೀ ಸಿದ್ದಲಿಂಗ ಮಹಾಸ್ವಾಮಿ, ಎಲೆರಾಂಪುರ ಶ್ರೀ ಕುಂಚಿಟಿಗರ ಮಹಾ ಸಂಸ್ಥಾನ ಮಠದ ಡಾ: ಹನುಮಂತನಾಥ ಮಹಾ ಸ್ವಾಮೀಜಿ, ನೊಣವಿನಕೆರೆ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದ ಡಾ: ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾ ಸ್ವಾಮಿ, ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಮಹಾ ಸ್ವಾಮಿ ಅವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. 

 ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸ್ವಾಗತಿಸಿದರು. ಜಿಲ್ಲಾಧಿಕಾರಿ ಶುಭಕಲ್ಯಾಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ ವಂದಿಸಿದರು. 

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಧರ್ಮಪತ್ನಿ ಕನ್ನಿಕಾ ಪರಮೇಶ್ವರ, ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಕೆ.ಎನ್. ರಾಜಣ್ಣ, ಜಿ.ಬಿ. ಜ್ಯೋತಿಗಣೇಶ್, ಬಿ. ಸುರೇಶ್‌ಗೌಡ, ಸಿ.ಬಿ. ಸುರೇಶ್‌ಬಾಬು, ಡಾ. ಹೆಚ್.ಡಿ. ರಂಗನಾಥ್, ಹೆಚ್.ವಿ. ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಹಾಗೂ ಚಿದಾನಂದ ಎಂ. ಗೌಡ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಿ. ಚಂದ್ರಶೇಖರ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ, ಬಡಪಾಯಿ ಜನರಿಗೆ ರೊಟ್ಟಿಯೂ ತುಟ್ಟಿ!

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ...

ಅಂಕೋಲಾ | ಬಾಳೆಗುಳಿ–ಮಾಸ್ತಿಕಟ್ಟಾ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಯಲ್ಲಾಪುರ–ಅಂಕೋಲಾ ರಾಷ್ಟ್ರೀಯ ಹೆದ್ದಾರಿ 52ರ ಬಾಳೆಗುಳಿ ಕ್ರಾಸ್‌ನಿಂದ ಮಾಸ್ತಿಕಟ್ಟಾವರೆಗಿನ ರಸ್ತೆ ಸಂಪೂರ್ಣ...

ಗುಬ್ಬಿ | ರೈತನ ಜಮೀನು ಹರಾಜಿಗೆ ವಿರೋಧ: ನ. 2ರಂದು ರೈತಸಂಘದ ಪ್ರತಿಭಟನೆ

 ಬರಗಾಲದಿಂದ ಬೆಳೆ ನಷ್ಟ ಹಾಗೂ ಕೊಳವೆಬಾವಿಗಳು ಬತ್ತಿರುವ ಸಂಕಷ್ಟದ ನಡುವೆಯೇ ಸಾಲ...

ತುಮಕೂರು | ಚಿರತೆ ಸೆರೆಗೆ ನಿರ್ಲಕ್ಷ್ಯ, ರೈತರ ಮೇಲೆ ಕೇಸ್‌ : ಅರಣ್ಯಾಧಿಕಾರಿಗಳ ಅಮಾನತಿಗೆ ಆಗ್ರಹ

ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ...