ತುಮಕೂರು | ಮಯೂರ ನಗರದ ರಾಜಗಾಲುವೆಯಲ್ಲಿ ಕೆಮಿಕಲ್ ವಾಸನೆ ತಡೆಗೆ ಡಿ.ಸಿ. ಶುಭ ಕಲ್ಯಾಣ್ ಖಡಕ್ ಸೂಚನೆ

Date:

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ನಗರದ ಗಂಗಸಂದ್ರದ ಮಯೂರ ನಗರದ ವಾರ್ಡ್ ಸಂಖ್ಯೆ 11ರ ರಾಜಗಾಲುವೆಯಲ್ಲಿ ಹರಡುತ್ತಿರುವ ವಿಪರೀತ ರಾಸಾಯನಿಕ ವಾಸನೆ ಹಾಗೂ ಮರಳೂರು ಭಾಗದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಮಯೂರ ನಗರದ ರಾಜಗಾಲುವೆಯಿಂದ ಬರುತ್ತಿರುವ ತೀವ್ರತರದ ಕೆಮಿಕಲ್ ವಾಸನೆಯು ಸ್ಥಳೀಯ ನಿವಾಸಿಗಳ ನೆಮ್ಮದಿ ಕೆಡಿಸಿದೆ. ಈ ವಾಸನೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ರಾಜಗಾಲುವೆಗೆ ಕೆಮಿಕಲ್ ಮಿಶ್ರಿತ ನೀರು ಎಲ್ಲಿಂದ ಹರಿದು ಬರುತ್ತಿದೆ? ಯುಜಿಡಿ ಸಂಪರ್ಕದ ಮೂಲಕವೇ ಇದು ಸೇರುತ್ತಿದೆಯೇ ಅಥವಾ ಯಾರಾದರೂ ಬೇಕೆಂದೇ ರಾಸಾಯನಿಕ ತ್ಯಾಜ್ಯವನ್ನು ಹರಿಸುತ್ತಿದ್ದಾರೆಯೇ ಎಂಬುದನ್ನು ತಕ್ಷಣವೇ ಪತ್ತೆ ಹಚ್ಚಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಸರಕ್ಕೆ ಹಾನಿ ಉಂಟುಮಾಡುವ ಮತ್ತು ಸಾರ್ವಜನಿಕರ ಜೀವಕ್ಕೆ ಧಕ್ಕೆ ತರುವ ರೀತಿಯಲ್ಲಿ ರಾಜಗಾಲುವೆಗೆ ಕೆಮಿಕಲ್ ಹರಿಸುವವರ ವಿರುದ್ಧ ಕಾನೂನು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು ಕಾಲುವೆಯ ಸುತ್ತಮುತ್ತ ಅತಿಯಾಗಿ ಬೆಳೆದಿರುವ ಗಿಡಗಂಟೆಗಳು ಹಾಗೂ ರಾಜಗಾಲುವೆಯ ಹೂಳನ್ನು ಕೂಡಲೇ ತೆರವುಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ನಗರದ ಮರಳೂರಿನ ವಾರ್ಡ್ ಸಂಖ್ಯೆ 28ಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಗಳನ್ನು ಆಲಿಸಿದ ಅವರು, ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳುವುದು ಆದ್ಯತೆಯಾಗಬೇಕು ಎಂದರು.

ಸ್ಥಳೀಯವಾಗಿ ಕಂಡು ಬಂದಿರುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ, ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸ್ಥಳದಲ್ಲೇ ನಿರ್ದೇಶನ ನೀಡಿದರು. ಹಾಗೆಯೇ ಅಣ್ಣೆ ತೋಟದ ನಿವಾಸಿ ಅಂಗವಿಕಲತೆಯಿಂದ ಬಳಲುತ್ತಿರುವ ಶ್ರೀನಿವಾಸ್ ಅವರ ರಸ್ತೆ ಸಮಸ್ಯೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಯೋಗಾನಂದ, ಇಂಜಿನಿಯರ್ ವಿನಯ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...