ತುಮಕೂರು | ಜಿಲ್ಲಾಸ್ಪತ್ರೆಯಲ್ಲಿ ರಾಶಿ ರಾಶಿ ಕಸದ ಮೂಟೆ : ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ತರಾಟೆ

Date:

Advertisements

ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಸ್ಗರ್ ಬೇಗ್ ಅವರಿಗೆ ಎಚ್ಚರಿಕೆ ನೀಡಿದ ಬೆಳವಣಿಗೆ ಕೂಡ ನಡೆಯಿತು.

ತುಮಕೂರು ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಡೆಂಘೀ ಚಿಕಿತ್ಸಾ ವಿಭಾಗ, ನವಜಾತ ಶಿಶು ವಿಭಾಗ, ಹೆರಿಗೆ ಕೊಠಡಿ, ಮಹಿಳಾ ವಿಭಾಗ, ಪ್ರಸವಪೂರ್ವ ಆರೈಕೆ ಕೊಠಡಿ, ಆರ್‌ಒಪಿ ಕೊಠಡಿ, ಡಾಟಾ ಎಂಟ್ರಿ ಆಪರೇಟರ್ ಕೊಠಡಿ, ಮತ್ತಿತರ ವಿಭಾಗಗಳಿಗೆ ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲನೆ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡದ್ದನ್ನು ಕಂಡು ಆಸ್ಪತ್ರೆ ಸಿಬ್ಬಂದಿ, ವೈದ್ಯಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

Advertisements

ಡಾಟಾ ಎಂಟ್ರಿ ಆಪರೇಟರ್ ಕೊಠಡಿಯಂತೂ ಕೆಟ್ಟ ವಾಸನೆ ಮತ್ತು ಕತ್ತಲೆಯಿಂದ ಕೂಡಿದೆ. ಸಿಬ್ಬಂದಿಗಳ ಕೊಠಡಿಗಳಲ್ಲೇ ಶುಚಿಯಾಗಿಲ್ಲ. ರೋಗಿಗಳ ವಾರ್ಡುಗಳನ್ನು ಇನ್ನೆಷ್ಟರ ಮಟ್ಟಿಗೆ ಸ್ವಚ್ಛವಾಗಿಡುತ್ತೀರಾ? ಪ್ರತೀ ದಿನ ಸ್ವಚ್ಛಗೊಳಿಸುವುದಿಲ್ಲವೇ? ಸಂಜೆಯೊಳಗೆ ಜಿಲ್ಲಾಸ್ಪತ್ರೆ ಎಲ್ಲ ವಾರ್ಡು, ಶೌಚಾಲಯ, ಆಸ್ಪತ್ರೆ ಸುತ್ತ-ಮುತ್ತ ಸ್ವಚ್ಛತೆ ಮಾಡದಿದ್ದಲ್ಲಿ ಸೇವೆಯಿಂದ ವಜಾ ಮಾಡಲಾಗುವುದೆಂದು ಗ್ರೂಪ್ ಡಿ ನೌಕರರ ಮೇಲೆ ಸಿಡಿಮಿಡಿಗೊಂಡರು.

ತುಮಕೂರು ಜಿಲ್ಲಾಧಿಕಾರಿ1

ಮಕ್ಕಳ ವಿಭಾಗದಲ್ಲಿದ್ದ ತ್ಯಾಜ್ಯ ವಸ್ತುಗಳನ್ನು ತಮ್ಮ ಸಮ್ಮುಖದಲ್ಲೇ ತೆರವು ಮಾಡಲು ಸೂಚಿಸಿದ ಅವರು ತ್ಯಾಜ್ಯ ತೆರವು ಸಂದರ್ಭದಲ್ಲಿ ಗುಂಪು-ಗುಂಪಾಗಿ ಸೊಳ್ಳೆಗಳು, ಇಲಿಗಳು ಹೊರಬಂದಿದ್ದನ್ನು ಕಂಡ ಜಿಲ್ಲಾಧಿಕಾರಿಗಳು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಬಿಟ್ಟು ಇಲಿ, ಸೊಳ್ಳೆಯನ್ನು ಸಾಕಿದ್ದೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದಿಂದ ಅನುದಾನ ಲಭ್ಯವಿದ್ದರೂ ನಿರ್ವಹಣೆ ಸಮರ್ಪಕವಾಗಿ ಮಾಡುತ್ತಿಲ್ಲ. ರೋಗಿಗಳಿಗೆ ಖಾಸಗಿಗಿಂತ ಉತ್ತಮ ವಾತಾವರಣ, ನೈರ್ಮಲ್ಯ, ಚಿಕಿತ್ಸೆ ಸರ್ಕಾರಿ ಆಸ್ಪತ್ರೆಯಲ್ಲಿ ದೊರೆಯುವಂತಾಗಬೇಕೆಂದು ಖಡಕ್ ಸೂಚನೆ ನೀಡಿದರು.

ಅನುಪಯುಕ್ತ ವೈದ್ಯಕೀಯ ಸಲಕರಣೆಗಳನ್ನು ವೈಜ್ಞಾನಿಕವಾಗಿ ಕೂಡಲೇ ವಿಲೇವಾರಿ ಮಾಡಬೇಕು. ಆಸ್ಪತ್ರೆ ಹೊರಾಂಗಣದಲ್ಲಿ ಬೆಳೆದಿರುವ ಹುಲ್ಲು, ಕಳೆಗಿಡಗಳನ್ನು ತೆರವುಗೊಳಿಸಬೇಕು. ಜಿಲ್ಲಾಸ್ಪತ್ರೆಯು ಸೊಳ್ಳೆ, ಇಲಿಗಳ ತಾಣವಾಗದೆ ಗಾಯಾಳು ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ತಾಣವಾಗಿ ಮಾರ್ಪಾಡಾಗಬೇಕೆಂದು ಆಸ್ಪತ್ರೆ ಅಧಿಕಾರಿ-ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಡಾ. ಸಂತೋಷ್, ಡಿಎಂಓ ಡಾ. ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಗೆ ಹೇಮಾವತಿ ನೀರು : ಸಾರ್ವಜನಿಕರು ಎಚ್ಚರಿಕೆಯಿಂದಿರಲು ಡಿಸಿ ಮನವಿ

ಹೇಮಾವತಿ ಜಲಾಶಯದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಕೆರೆ ಕೆಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಗೆ ತುಮಕೂರು ಶಾಖಾ ಕಾಲುವೆಗೆ ನೀರು ಹರಿದಿದ್ದು, ತಿಪಟೂರು ತಾಲೂಕು ಗಂಗನಘಟ್ಟವನ್ನು ತಲುಪಿದೆ.

ಜಲಾಶಯದ ಒಳಹರಿವಿನ ಪ್ರಮಾಣ ಯಾವುದೇ ಸಮಯದಲ್ಲಾದರೂ ಏರಿಕೆಯಾಗುವ ಸಂಭವವಿದ್ದು, ಹೆಚ್ಚುವರಿ ನೀರನ್ನು ನಾಲೆಗೆ ಬಿಡುವುದರಿಂದ ಸಾರ್ವಜನಿಕರು ನಾಲೆಯ ಅಕ್ಕ-ಪಕ್ಕ ಸುಳಿದಾಡಬಾರದು ಹಾಗೂ ಈಜಲು, ಜಾನುವಾರುಗಳಿಗೆ ನೀರು ಕುಡಿಸಲು, ಬಟ್ಟೆ ಒಗೆಯಲು, ಮತ್ತಿತರ ಕಾರಣಗಳಿಗಾಗಿ ನಾಲೆ ಬಳಿಗೆ ಹೋಗಬಾರದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

ಜಿಲ್ಲೆಯ ಹೇಮಾವತಿ ಯೋಜನಾ ವ್ಯಾಪ್ತಿಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ನೀರು ಪೋಲಾಗದಂತೆ ತುರ್ತು ಕ್ರಮಗಳನ್ನು ಕೈಗೊಂಡು ಸಾರ್ವಜನಿಕರು ಮತ್ತು ರೈತರಿಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸೂಕ್ತ ತಿಳುವಳಿಕೆ ನೀಡಬೇಕು. ಸುಗಮ ನೀರು ನಿರ್ವಹಣೆ ಸಂಬಂಧ ಯೋಜನಾ ವ್ಯಾಪ್ತಿಯ ಜನರು ಹಾಗೂ ಅಚ್ಚುಕಟ್ಟುದಾರರು ಇಲಾಖಾಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X