ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

Date:

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 14  ಸ್ಥಾನದಲ್ಲೂ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರ ಬೆಂಬಲಿಗರು ಆಯ್ಕೆಯಾಗಿದ್ದಾರೆ. 7  ನೇ ಬಾರಿಗೆ ಮಾಜಿ ಸಚಿವ ಕೆ ಎನ್ ರಾಜಣ್ಣ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವುದು ಪಿಕ್ಸ್ ಆಗಿದೆ.

- Advertisement -

ತೀವ್ರ ಕುತೂಹಲ ಮೂಡಿಸಿದ್ದ, ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡ‌ಳಿತ ಮಂ‌ಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 8 ನಿರ್ದೇಶಕರ ಅವಿರೋಧ ಆಯ್ಕೆ ಹೊರತುಪಡಿಸಿ ಉಳಿದ 6 ನಿರ್ದೇಶಕರ ಸ್ಥಾನಗಳಿಗೆ ಬೆಳಿಗ್ಗೆ 9 ಗಂಟೆಯಿಂದ ಬಿರುಸಿನ ಮತದಾನ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಡಿಸಿಸಿ ಬ್ಯಾಂಕ್‌ನ 14 ನಿರ್ದೇಶಕರ ಸ್ಥಾನಗಳ ಪೈಕಿ ಎ ಕೆಟಗರಿಯ ನಾಲ್ವರು, ಬಿ ಸಿ ‌ಡಿ ಹಾಗೂ ಡಿ1 ಕೆಟಗರಿಯ ತಲಾ 1 ನಿರ್ದೇಶಕ ಸ್ಥಾನ ಸೇರಿ ಒಟ್ಟು 8 ಮಂದಿ ನಿರ್ದೇಶಕರ ಅವಿರೋಧ ಆಯ್ಕೆಯಾಗಿದೆ. ಉಳಿದ ಪ್ರಾಥಮಿಕ ಕೃಷಿ ಉತ್ತಿನ ಸಹಕಾರ ಸಂಘದ ಎ ಕೆಟಗರಿಯ ಉಳಿದ 6 ತಾಲ್ಲೂಕುಗಳಾದ ಕುಣಿಗಲ್, ತಿಪಟೂರು, ಪಾವಗಡ, ಚಿಕ್ಕನಾಯಕನಹಳ್ಳಿ, ಗುಬ್ಬಿ ಹಾಗೂ ಸಿರಾ ತಾಲ್ಲೂಕುಗಳ ತಲಾ 1 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯಿತು.

1001951120

ತುಮಕೂರು ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ 6 ಸ್ಥಾನಗಳಿಗೆ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸಿ ಚುನಾವಣೆ ನಡೆಸಲಾಯಿತು. 6 ತಾಲ್ಲೂಕುಗಳ ಮತದಾರರು ಡಿಸಿಸಿ ಬ್ಯಾಂಕ್‌ಗೆ ಆಗಮಿಸಿ ಉತ್ಸಾಹದಿಂದಲೇ ಮತದಾನ ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 23 ಮಂದಿ ಮತದಾರರು, ಗುಬ್ಬಿ ತಾಲ್ಲೂಕು 21, ಕುಣಿಗಲ್ 18, ಪಾವಗಡ 20, ತಿಪಟೂರು 18, ಸಿರಾ 29 ಸಹಕಾರಿ ಸಂಘದ ಪ್ರತಿನಿಧಿಗಳಾಗಿರುವ ಮತದಾರರು ಡಿಸಿಸಿ ಬ್ಯಾಂಕ್‌ನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸಿದರು.

ಚುನಾವಣೆ ನಡೆದ ಡಿಸಿಸಿ ಬ್ಯಾಂಕ್ ಮತಗಟ್ಟೆ ಕೇಂದ್ರದ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಿಂದ ದೂರದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಬೆಂಬಲಿಗರು, ಸಹಕಾರ ಸಂಘಗಳ ಪ್ರತಿನಿಧಿಗಳು ಜಮಾಯಿಸಿದ್ದರು.ಅವಿರೋಧ ಆಯ್ಕೆಯಾದವರು

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎ ಕೆಟಗರಿ ವರ್ಗ ಕ್ಷೇತ್ರ ವ್ಯಾಪ್ತಿಯ ತುಮಕೂರು ತಾಲ್ಲೂಕಿನಿಂದ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ, ತುರುವೇಕೆರೆಯಿಂದ ಎಂ. ಸಿದ್ದಲಿಂಗಪ್ಪ, ಮಧುಗಿರಿಯಿಂದ ಜಿ.ಜೆ. ರಾಜಣ್ಣ, ಕೊರಟಗೆರೆಯಿಂದ ಎನ್. ಹನುಮಾನ್, ಬಿ. ವರ್ಗದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಪಟ್ಟಣ ಸಹಕಾರ ಬ್ಯಾಂಕ್‌ಗಳು, ವ್ಯವಸಾಯೇತರ ಪತ್ತಿನ ಸಹಕಾರ ಸಂಘದ ಕ್ಷೇತ್ರದಿಂದ ಎಸ್. ಲಕ್ಷ್ಮೀನಾರಾಯಣ, ಡಿ ವರ್ಗದ ಹಾಲು ಉತ್ಪಾದಕರ ಸಹಕಾರ ಸಂಘದ ಕ್ಷೇತ್ರದಿಂದ ಬಿ. ನಾಗೇಶ್‌ಬಾಬು ಹಾಗೂ ಡಿ1 ವರ್ಗದ ಮಹಿಳಾ ಸಂಘಗಳ ಕ್ಷೇತ್ರದಿಂದ ಮಾಲತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...