ತುಮಕೂರು | ಜಾತಿ ಜನಗಣತಿ ಜಾರಿಗೆ ಒತ್ತಾಯಿಸಿ ಅ. 16ರಂದು ಬೃಹತ್ ಪ್ರತಿಭಟನೆ

Date:

Advertisements

ಆಕ್ಟೋಬರ್ 18 ರಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಚರ್ಚಿಸಿ,ಜಾರಿಗೆ ತರಬೇಕೆಂದು ಇತ್ತಾಯಿಸಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ರಾಮಚಂದ್ರಪ್ಪ ತಿಳಿಸಿದರು.

ತುಮಕೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 11 ವರ್ಷಗಳ ಹಿಂದೆ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ನ್ಯಾಯವಾದಿ ಕಾಂತರಾಜು ಅವರು ಸುಪ್ರಿಂಕೋರ್ಟಿನ ಗೈಡ್‌ಲೈನ್ಸ್ ಆಧಾರದಲ್ಲಿ ಸರಕಾರಿ ನೌಕರರನ್ನು ಬಳಸಿಕೊಂಡು ಕರ್ನಾಟಕದ ಜನರ ಸಾಮಾಜಿಕ, ಶೈಕ್ಷಣಿಕ, ಅರ್ಥಿಕ ಸಮೀಕ್ಷೆ ನಡೆಸಿದ್ದು, ಸರಕಾರ ಶೋಷಿತ ಸಮುದಾಯಗಳ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ಜಾರಿಗೆ ತರಲು ಈ ವರದಿ ಅತ್ಯಂತ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಸರಕಾರ ಕೂಡಲೇ ಒಪ್ಪಿ ಇದನ್ನು ಜಾರಿಗೆ ತರಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣಕ್ಕೆ ಯಾವ ಯಾವ ಸಮುದಾಯಗಳು ಅರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಯಾವ ಸ್ಥಿತಿಯಲ್ಲಿವೆ ಎಂಬ ಅಂಕಿ ಅಂಶಗಳು ಅತಿ ಮುಖ್ಯವಾಗಿದೆ.ಅಲ್ಲದೆ ಇದು ರಾಜಕೀಯ ಪ್ರಾತಿನಿದ್ಯಕ್ಕೂ ಅತಿ ಅವಶ್ಯಕವಾದ ವರದಿಯಾಗಿದೆ.ಆದರೆ ಜಾತಿಯ ಹೆಸರಿನಲ್ಲಿ ಅತಿ ಹೆಚ್ಚು ರಾಜಕೀಯ ಅಧಿಕಾರ ಪಡೆದಿರುವ ಕೆಲ ಜಾತಿಗಳ ಮುಖಂಡರು ಇದನ್ನು ವಿರೋಧಿಸುತ್ತಿರುವುದು ಸರಿಯಲ್ಲ.ಕೇಂದ್ರದ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು 11 ವರ್ಷಗಳ ಕಾರಣ ನೀಡಿ ಅಸಮಂಜಸ ಎಂಬ ವಾದ ಮಂಡಿಸುತ್ತಿದ್ದಾರೆ.ಆದರೆ 2019ರಲ್ಲಿ ಇವರೇ ಅಧಿಕಾರದಲ್ಲಿದ್ದಾಗ ಏಕೇ ಈ ವರದಿಯನ್ನು ಸ್ವೀಕರಿಸಲಿಲ್ಲ ಎಂಬುದು ಯಕ್ಷ ಪ್ರಶ್ನೆಯಾಗಿದೆ.ತಮ್ಮ ರಾಜಕೀಯ ಅಧಿಕಾರಕ್ಕಾಗಿ ಇನ್ನೊಂದು ಸಮುದಾಯದ ಹಕ್ಕನ್ನು ಕಸಿಯುವುದು ಸರಿಯಲ್ಲ ಎಂದು ರಾಮಚಂದ್ರಪ್ಪ ನುಡಿದರು.

Advertisements
1000541666 1

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲು ಶೋಷಿತ ಸಮುದಾಯಗಳ ಪಾಲು ಹೆಚ್ಚಿದೆ.ಬೇರೆ ಸಮುದಾಯಗಳ ಒತ್ತಡಕ್ಕೆ ಮಣಿದು ನ್ಯಾ.ಕಾಂತರಾಜು ವರದಿ ಜಾರಿಗೆ ತರಲು ಹಿಂದೇಟು ಹಾಕಿದರೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಎಲ್ಲಾ ಸಚಿವರಿಗೂ ಘೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು,ವರದಿಯಲ್ಲಿ ಸುಮಾರು 75ಕ್ಕೂ ಹೆಚ್ಚು ಹೊಸ ಅಲೆಮಾರಿ,ಅರೆ ಅಲೆಮಾರಿ,ಬುಡಕಟ್ಟು ಜಾತಿಗಳು ಪತ್ತೆಯಾಗಿವೆ.ಮೂಲವಾಹಿನಿಯಿಂದ ಬಹುದೂರವೇ ಉಳಿದಿವೆ.ಇಂತಹ ಸಮುದಾಯಗಳಿಗೆ ಸರಕಾರದ ಸವಲತ್ತು ದೊರೆಯಬೇಕೆಂದರೆ ಅರ್ಥಿಕ,ಸಾಮಾಜಿಕ ಹಾಗೂ ಶೈಕ್ಷಣಿಕ ವರದಿ ಜಾರಿ ಅನಿವಾರ್ಯ.ಹಾಗಾಗಿ ಮುಖ್ಯಮಂತ್ರಿಗಳು ಒತ್ತಡಕ್ಕೆ ಮಣಿಯದೆ ಅಕ್ಟೋಬರ್ 18ರ ಕ್ಯಾಬಿನೆಟ್ ಸಭೆಯಲ್ಲಿ ವರದಿಯನ್ನು ಮಂಡಿಸಿ,ಜಾರಿಗೆ ತರಬೇಕು.ಈ ಬಗ್ಗೆ ಸರಕಾರದ ಮೇಲೆ ಒತ್ತಡ ತರಲು ಅಕ್ಟೋಬರ್ 16ರ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಸ್ಲಂ ಜನಾಂದೋಲನ ಕರ್ನಾಟಕದ ಎ.ನರಸಿಂಹಮೂರ್ತಿ ಮಾತನಾಡಿ,1931ರ ನಂತರ ದೇಶದಲ್ಲಿ ಜಾತಿ ಸಮೀಕ್ಷೆಗಳೇ ನಡೆದಿಲ್ಲ.ಇದು ಸರಕಾರ ದಮನಿತ ಸಮುದಾಯಗಳಿಗೆ ಕಾರ್ಯಕ್ರಮಗಳನ್ನು ರೂಪಿಸಲು ಸಾಕಷ್ಟು ಹಿನ್ನೆಡೆಗೆ ಕಾರಣವಾಗಿದೆ. ಹಾಗಾಗಿ ನ್ಯಾಯಾವಾದಿ ಕಾಂತರಾಜು ವರದಿಯನ್ನು ಸರಕಾರ ಒಪ್ಪಿಕೊಳ್ಳಲೇ ಬೇಕಿದೆ.ಈಗಾಗಲೇ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ವೇಳೆಯ ಕಾಂಗ್ರೆಸ್ ಪ್ರಾಣಾಳಿಕೆಯಲ್ಲಿ ಕಾಂತರಾಜು ವರದಿ ಮತ್ತು ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವ ಭರವಸೆ ನೀಡಿತ್ತು.ಆದರೆ ಇದುವರೆಗೂ ಸಾಧ್ಯವಾಗಿಲ್ಲ.ಸಂಪತ್ತು ಮತ್ತು ಭೂಮಿಯಲ್ಲಿ ದಲಿತರಿಗೆ ಸಮನಾದ ಪಾಲು ಸಿಕ್ಕಿಲ್ಲ. ಬಲಾಢ್ಯ ಜಾತಿಗಳು ಈ ವರದಿಯನ್ನು ವಿರೋಧಿಸುವ ಬದಲು,ಸಾರ್ವಜನಿಕ ಚರ್ಚೆ ವೇಳೆ ತಮ್ಮ ತರಕಾರು ಸಲ್ಲಿಸಲಿ.ಸರಕಾರ ಯಾವ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು.ಶೋಷಿತ ಸಮುದಾಯಗಳು ನಿಮ್ಮ ಜೊತೆಗೆ ಇದೆ ಎಂಬುದನ್ನು ಮುಖ್ಯಮಂತ್ರಿಗಳು ಅರಿತುಕೊಳ್ಳಬೇಕೆಂದರು.

ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ತುಮಕೂರು ಜಿಲ್ಲಾ ಸಂಚಾಲಕ ಕೆಂಪರಾಜು ಮಾತನಾಡಿ,ಅಕ್ಟೋಬರ್ 16 ರಂದು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನಡೆಯುವ ಪ್ರತಿಭಟನೆಗೆ ತುಮಕೂರು ಜಿಲ್ಲೆಯಿಂದ ಸುಮಾರು 2000 ಸಾವಿರ ಜನರು ತೆರಳಲಿದ್ದು,ಸರಕಾರದ ಮೇಲೆ ಒತ್ತಡ ತರುವ ಕೆಲಸ ಮಾಡುತ್ತೇವೆ.ಅರ್ಥಿಕ, ಸಾಮಾಜಿಕ ಶೈಕ್ಷಣಿಕ ವರದಿ ಅತಿ ಅಗತ್ಯವಾಗಿ ಬೇಕಾಗಿದೆ. ಹಾಗಾಗಿ ಈ ಹೋರಾಟವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ,ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕರಾದ ಆನಂತನಾಯ್ಕ್, ದಲಿತ ಮುಖಂಡರಾದ ಚೇಳೂರು ಶಿವನಂಜಪ್ಪ, ಮುರುಳಿ ಕುಂದೂರು,ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ನರಸಿಂಹಯ್ಯ,ಇರ್ಫಾನ್,ಎಡ್ವಿನ್,ಮಡಿವಾಳ ಸಮಾಜ ಶಾಂತಕುಮಾರ್,ಜಿಲ್ಲಾ ಕುರುಬರ ಸಂಘದ ಉಪಾಧ್ಯಕ್ಷ ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X