ತುಮಕೂರು | ಶೈಕ್ಷಣಿಕ ಹಂತದಲ್ಲಿಯೇ  ಜೀವನದ ಗುರಿ ನಿರ್ಧರಿಸಿ : ಎಂ.ಎಸ್ ರವಿಪ್ರಕಾಶ್

Date:

Advertisements

ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ತಮ್ಮ ಜೀವನದ ಗುರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಕಲಿತು ಮುನ್ನಡೆಯಿರಿ ಎಂದು ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಸ್ ರವಿಪ್ರಕಾಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾನಿಲಯದಲ್ಲಿ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾ ನಿಕ್ಸ್ ಇಂಜಿನಿಯರಿಂಗ್ ಹಾಗೂ ಜಿಟಿಟಿ ಫೌಂಡೇಷನ್ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ “ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ” ಎಂಬ ವಿಷಯದ ಕುರಿತು ಇಂದಿನಿಂದ ಆರಂಭಗೊಂಡ 30 ದಿನಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,  ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅಗತ್ಯವಿರುವ ತಂತ್ರಜ್ಞಾನವನ್ನು ಅರಿತುಕೊಂಡು ಮುನ್ನಡೆಯಬೇಕು ಆಗ ಮಾತ್ರ ನೀವು ಯಶಸ್ವಿಯಾಗುತ್ತೇವೆ. ಹಾಗಾಗಿ ವಿದ್ಯಾರ್ಥಿಗಳು ಪ್ರತಿನಿತ್ಯ ಕಲಿಯಬೇಕು.ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುಬೇಕು ಹಾಗೂ ಕೈಗಾರಿಕೆಗಳಿಗೆ ಬೇಕಾದ ಕೌಶಲವನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

1001107790

ಎಲೆಕ್ಟ್ರಿಕ್ ಅಂಡ್ ಎಲೆಕ್ಟ್ರಾನಿಕ್ಸ್  ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ರಾಜೇಶ್ ಕಾಮತ್ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ತರಬೇತಿ ಕಾರ್ಯಗಾರಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಭಾಗವಹಿಸಿ ಉತ್ತಮ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ನಿಮ್ಮಲ್ಲಿ ಏನೇ ಗೊಂದಲಗಳಿದ್ದರೂ ಸಂವಾದದ ಮೂಲಕ ಅಧ್ಯಾಪಕರೊಂದಿಗೆ ಚರ್ಚಿಸಿ ತಮ್ಮ ಗೊಂದಲವನ್ನು ಬಗೆಹರಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 

Advertisements

ತರಬೇತಿ ಕಾರ್ಯಗಾರ 30ದಿನಗಳ ಕಾಲ ನಡೆಯಲಿದ್ದು 70 ಮಂದಿ ವಿದ್ಯಾರ್ಥಿಗಳು ಭಾಗವಹಿಸಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಜಿಟಿಟಿ ಫೌಂಡೇಷನ್‌ನ ಮ್ಯಾನೇಜರ್ ಪವನ್‌ಕುಮಾರ್, ಎಲೆಕ್ಟ್ರಿಕ್  ಆಂಡ್ ಎಲೆಕ್ಟ್ರಾನಿಕ್ಸ್  ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರದೀಪ್, ಕಾರ್ಯಕ್ರಮದ ಸಂಯೋಜಕರಾದ, ಡಾ. ಯೋಗಾನಂದ್ ಬಿ.ಎಸ್, ಪ್ರಾಧ್ಯಾಪಕರಾದ ಡಾ.ಜಿ.ಎಸ್ ಶೇಷಾದ್ರಿ, ಸಹಾಯಕ ಪ್ರಧ್ಯಾಪಕರಾದ, ಲಿಖಿತ್ ಯು.ಎನ್, ಪ್ರಿಯಾಂಕ ಎಂ.ಎನ್, ಸೌಮ್ಯ ಕೆ.ಆರ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಹಾಜರಿದ್ದರು. 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X