ತುಮಕೂರು | ವಿದ್ಯಾರ್ಹತೆಯೊಂದಿಗೆ ವೃತ್ತಿ ಕೌಶಲ್ಯಗಳನ್ನೂ ಬೆಳೆಸಿಕೊಳ್ಳಿ : ಜಿಲ್ಲಾಧಿಕಾರಿ

Date:

 ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲೇ ವಿದ್ಯಾರ್ಹತೆಯೊಂದಿಗೆ ವಿವಿಧ ವ್ಲತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಡಾ.ಪಿ. ಸದಾನಂದಮಯ್ಯ ಬ್ಲಾಕ್‌ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ತುಮಕೂರು ವಿಶ್ವವಿದ್ಯಾನಿಲಯದ ಉದ್ಯೋಗ ಕೋಶ, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ 125ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡಿದ್ದು, ಈಗಾಗಲೇ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಆಫ್‌ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಸ್ಥಳಕ್ಕೆ ಆಗಮಿಸಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಈ ಮೇಳದಲ್ಲಿ ಉದ್ಯೋಗ ಸಿಗುವಂತಾಗಲಿ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಇಂತಹ ಮೇಳಗಳನ್ನು ನಿಯಮಿತವಾಗಿ ಆಯೋಜಿಸಲಾಗುತ್ತಿದ್ದು, ಕೌಶಲ್ಯಗಳಿದ್ದರೂ ಉದ್ಯೋಗ ಪಡೆಯುವ ದಾರಿಗಳು ತಿಳಿಯದೆ ಹಲವರು ಅಸಹಾಯಕರಾಗಿರುತ್ತಾರೆ. ಇಂತಹ ಉದ್ಯೋಗ ಮೇಳಗಳು ಅವರಿಗೆ ದೊಡ್ಡ ವೇದಿಕೆಯಾಗಿ ಪರಿಣಮಿಸುತ್ತದೆ ಎಂದು ಹೇಳಿದರು.

ನಿರುದ್ಯೋಗದಿಂದ ಕೆಲವು ಯುವಕರು ನಿಸ್ಸಹಾಯಕರಾಗಿ ದಾರಿ ತಪ್ಪುವ ಸಾಧ್ಯತೆಗಳು ಹೆಚ್ಚಿರುವುದರಿಂದ, ಆರಂಭದಲ್ಲಿ ಕಡಿಮೆ ಸಂಬಳವಾಗಿದ್ದರೂ ಪರವಾಗಿಲ್ಲ. ಯಾವುದಾದರೂ ಕೆಲಸದಲ್ಲಿ ತೊಡಗಿಕೊಂಡು ಅನುಭವ ಪಡೆಯುತ್ತಾ ಹಂತ-ಹಂತವಾಗಿ ಸಂಬಳವೂ ಹೆಚ್ಚುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಕಿಶೋರ್​, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಪ್ರಾಧ್ಯಾಪಕ ಪರಶುರಾಮ ಕೆ.ಜಿ. ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...