ತುಮಕೂರು | ಜಾತ್ರಾ ಮಹೋತ್ಸವದಲ್ಲಿ ಕೆಂಡ ಹಾಯುವ ವೇಳೆ ಭಕ್ತರ ಕಾಲುಗಳಿಗೆ ಗಾಯ

Date:

ಜಾತ್ರಾ ಮಹೋತ್ಸವದಲ್ಲಿ ಕೆಂಡ ಹಾಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ನೂಕು ನುಗ್ಗಲು ಆರಂಭವಾದ ಹಿನ್ನೆಲೆಯಲ್ಲಿ ಹಲವಾರು ಭಕ್ತರ ಕಾಲುಗಳು ಸುಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದ ರಾಮಲಿಂಗೇಶ್ವರ ಹಾಗೂ ಚೌಡೇಶ್ವರಿ ದೇವಿ ಜಾತ್ರೆಯ ಮಹೋತ್ಸವದಲ್ಲಿ ಕೆಂಡ ಹಾಯುವ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 30 ಜನಗಳಿಗೆ ಸುಟ್ಟ ಗಾಯಗಳಾಗಿವೆ.

ಬೇಡರಹಳ್ಳಿ ಗ್ರಾಮದ ಕೀರ್ತಿ ದೇವರಾಜ್, ಕಲ್ಲೂರು ಗ್ರಾಮದ ಮಂಜುನಾಥ್ ಸೇರಿದಂತೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೂಡಲೇ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲವು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆರೆಡೆಗೆ ವರ್ಗಾಯಿಸಲಾಗಿದೆ.

ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ತಹಶೀಲ್ದಾರ್ ವೈ ಎಂ ರೇಣುಕುಮಾರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಸಾಂತ್ವನ ನೀಡಿದ್ದಾರೆ. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿದ್ಯುತ್ ಇಲ್ಲದೆ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲಿ ಪೋಸ್ಟ್‌ಮಾರ್ಟಮ್ ಮಾಡಿದ ವೈದ್ಯರು

“ರಾಮಲಿಂಗೇಶ್ವರ ಹಾಗೂ ಚೌಡೇಶ್ವರಿ ದೇವಿ ಜಾತ್ರೆಯ ಮಹೋತ್ಸವ ನಡೆದು ಸುಮಾರು 35 ವರ್ಷಗಳಾಗಿತ್ತು. ಹಾಗಾಗಿ ಈ ಬಾರಿ ಸುತ್ತಮುತ್ತಲ ಭಕ್ತರು ಸೇರಿದಂತೆ 50,000ಕ್ಕೂ ಅಧಿಕ ಮಂದಿ ಸೇರಿದ್ದರು. ಜಾತ್ರಾ ಮಹೋತ್ಸವದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಇರುವುದೇ ಈ ಅನಾಹುತಕ್ಕೆ ಕಾರಣವಾಗಿದ್ದು, ತಳ್ಳಾಟ ನೂಕಾಟ ಆರಂಭವಾಗಿ ಈ ಘಟನೆ ನಡೆದಿದೆ” ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ತಮ್ಮ ಹಕ್ಕುಗಳಿಗಾಗಿ ಲಿಂಗತ್ವ ಅಲ್ಪಸಂಖ್ಯಾತರ ಹೋರಾಟ

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಗೌರವಯುತ ಜೀವನ ನಡೆಸಲು ತಮಗೆ ಲಿಂಗತ್ವ ಅಲ್ಪಸಂಖ್ಯಾತರ...

ಕಲಬುರಗಿ | ಅಕ್ರಮ ಸಾಗಾಟ; 9 ಲೀಟರ್ ಮದ್ಯ, 45 ಲಕ್ಷ ರೂ. ಮೌಲ್ಯದ ಬಸ್ ವಶ

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್‌ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ...

ಯಾದಗಿರಿ | ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥ

ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ...

ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ....