ತುಮಕೂರು | ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

Date:

Advertisements

 ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಇ-ಶ್ರಮ್ ನೋಂದಣಿ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರ ನೋಂದಣಿ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಇಂದು ಚಾಲನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರನ್ನು ವಿವಿಧ ಯೋಜನೆಗಳಡಿ ನೋಂದಾಯಿಸುವ ಸಲುವಾಗಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಮಾಲರು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಟೈಲರ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಬೀಡಿ ಕಾರ್ಮಿಕರು ಮತ್ತಿತರ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುವುದು. ಈ ಸ್ಮಾರ್ಟ್ ಕಾರ್ಡ್ ಹೊಂದಿದ ಅಸಂಘಟಿತ ಕಾರ್ಮಿಕರು ಮರಣ ಹೊಂದಿದಲ್ಲಿ ಅವರ ನಾಮ ನಿರ್ದೇಶಿತರಿಗೆ 1 ಲಕ್ಷ ರೂ.ಗಳ ಪರಿಹಾರ ಹಾಗೂ 50 ಸಾವಿರ ರೂ.ಗಳವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ಸೌಲಭ್ಯ ದೊರೆಯಲಿದ್ದು, ಕಾರ್ಮಿಕರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. 

1001398536

ಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಇ-ಶ್ರಮ್ ನೋಂದಣಿ ಅಗತ್ಯ. ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ಧಪಡಿಸಲು ಅಭಿವೃದ್ಧಿಪಡಿಸಿರುವ ಇ-ಶ್ರಮ್ ಪೋರ್ಟಲ್‌ನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸದವರು, ಚಾಲಕರು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಒಟ್ಟು 379 ವರ್ಗಗಳ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ನೋಂದಣಿ ಉಚಿತವಾಗಿದ್ದು, ಯಶಸ್ವಿ ನೋಂದಣಿ ನಂತರ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ವಿತರಿಸಲಾಗುವುದು. ಈ ಗುರುತಿನ ಚೀಟಿಯು ದೇಶದಾದ್ಯಂತ ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಇ-ಶ್ರಮ್ ಯೋಜನೆಗೆ ನೋಂದಾಯಿಸಿಕೊಂಡ ಕಾರ್ಮಿಕರು 1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು. 

Advertisements

 ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರು ನೋಂದಣಿಯಾದಲ್ಲಿ ಅಪಘಾತ ಪರಿಹಾರ ಸೌಲಭ್ಯ, ನೈಸರ್ಗಿಕ ಮರಣ ಪರಿಹಾರ ಹಾಗೂ ಅಂತ್ಯಸAಸ್ಕಾರ ವೆಚ್ಚ, ಫಲಾನುಭವಿಗಳ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ, ಹೆರಿಗೆ ಭತ್ಯೆ ಮತ್ತಿತರ ಸೌಲಭ್ಯಗಳು ದೊರೆಯಲಿವೆ. ಚಾಲಕ, ನಿರ್ವಾಹಕ, ಕ್ಲೀನರ್,  ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ,  ಬುಕ್ಕಿಂಗ್ ಗುಮಾಸ್ತ, ನಗದು ಗುಮಾಸ್ತ, ಡಿಪೋ ಗುಮಾಸ್ತ, ಸಮಯ ಪಾಲಕ, ಕಾವಲುಗಾರ ಅಥವಾ ಪರಿಚಾಲಕ, ಮೋಟಾರು ಗ್ಯಾರೇಜಿನಲ್ಲಿ ಟೈರ್ ಜೋಡಿಸುವ, ಮತ್ತಿತರ ಕೆಲಸ ನಿರ್ವಹಿಸುವ ಕಾರ್ಮಿಕರು ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ ಎಂದು ತಿಳಿಸಿದರು. 

1001398537

ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಕಾರ್ಮಿಕರು ತಕ್ಷಣವೇ ತಮ್ಮ ಭಾವಚಿತ್ರ, ಮೊಬೈಲ್ ಸಂಖ್ಯೆ, ಆಧಾರ್ ಮತ್ತು ಬ್ಯಾಂಕ್ ಖಾತೆ ವಿವರ, ಪಡಿತರ ಚೀಟಿ ಮತ್ತಿತರ ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಬೇಕು ಎಂದು ಮನವಿ ಮಾಡಿದರು. 

ಅಸಂಘಟಿತ ಕಾರ್ಮಿಕರ ನೋಂದಣಿ ಕಾರ್ಯವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಹಮ್ಮಿಕೊಳ್ಳಲು ದಿನಾಂಕ ನಿಗಧಿಪಡಿಸಬೇಕು. ಮುಂದಿನ 15 ದಿನಗಳಲ್ಲಿ 10,000 ಕಾರ್ಮಿಕರನ್ನು ನೋಂದಣಿ ಗುರಿ ತಲುಪಬೇಕು. ನೋಂದಣಿ ಮಾಡಿಸಲು ನೋಂದಣಿ ಕೇಂದ್ರಕ್ಕೆ ಆಗಮಿಸುವ ಕಾರ್ಮಿಕರಿಗೆ ನೆರಳಿನ ವ್ಯವಸ್ಥೆ, ಆಸನ ವ್ಯವಸ್ಥೆ ಮಾಡಬೇಕು. ಪ್ರತಿ ದಿನ ನೋಂದಣಿ ಮಾಹಿತಿ ಕುರಿತು ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ನೀಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ ಅವರಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಕಾರ್ಮಿಕ ಇಲಾಖೆಯ ನೋಂದಣಾ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು. 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X