ತುಮಕೂರು | ನ.9 ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : ಟಿ.ಸಿ. ಕಾಂತರಾಜು

Date:

 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಚುನಾವಣೆಯನ್ನು ನಗರದ ಪತ್ರಿಕಾ ಭವನದಲ್ಲಿ ನವೆಂಬರ್ 9ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಸಿ. ಕಾಂತರಾಜು  ತಿಳಿಸಿದ್ದಾರೆ.

- Advertisement -

ಗುರುವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ಹಾಗೂ ನಿಯಮಾನುಸಾರವಾಗಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

  ಜಿಲ್ಲಾ ಘಟಕ ತುಮಕೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣಾ ಪ್ರಕ್ರಿಯೆಯು ಅಕ್ಟೋಬರ್ 13ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವುದರಿಂದ ಆರಂಭಗೊAಡಿದ್ದು, ಅಕ್ಟೋಬರ್ 17ರವರೆಗೆ ಆಕ್ಷೇಪಣೆಗಳನ್ನು ಸ್ವೀಕರಿಸಲಾಯಿತು. ಬಳಿಕ ರಾಜ್ಯ ಚುನಾವಣಾಧಿಕಾರಿಗಳ ಮಾರ್ಗಸೂಚಿಯನ್ವಯ ಅಕ್ಟೋಬರ್ 18ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೇಳಿದರು.

ಅಕ್ಟೋಬರ್ 19 ರಿಂದ 27ರವರೆಗೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಅಕ್ಟೋಬರ್ 30ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದ್ದು, ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಘಟಕದಲ್ಲಿ ಒಟ್ಟು 388 ಮತದಾರರು ಇದ್ದು, ಇವರಲ್ಲಿ 14 ಸಹ ಸದಸ್ಯರು ಮತದಾನ ಅಥವಾ ಸ್ಪರ್ಧೆಯಲ್ಲಿ ಭಾಗವಹಿಸಲು ನಿಯಮದನ್ವಯ ಅವಕಾಶವಿಲ್ಲ. ಹೀಗಾಗಿ 374 ಮಂದಿ ಮತದಾರರು (ನಿಧನರಾದವರನ್ನು ಹೊರತುಪಡಿಸಿ) ಮತ ಚಲಾಯಿಸಲು ಅವಕಾಶ ಹೊಂದಿದ್ದಾರೆ ಎಂದು ತಿಳಿಸಿದರು.

ಮತದಾನ ಪ್ರಕ್ರಿಯೆಗಾಗಿ ಪತ್ರಿಕಾ ಭವನದಲ್ಲಿ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತದಾನ ಸಮಯದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಮತದಾರರು ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಿ ಚುನಾವಣಾ ಪ್ರಕ್ರಿಯೆ ಸುಗಮಗೊಳಿಸಲು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಮತದಾನ ಮುಗಿದ ತಕ್ಷಣ ಮತ ಎಣಿಕೆ ಕಾರ್ಯ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು

ಇದೇ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ವಿ.ಗೋವಿಂದರೆಡ್ಡಿ ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...