ಜನರ ಕಷ್ಟಗಳನ್ನು ಕಡಿಮೆ ಮಾಡುವುದು ಹೇಗೆ ಮತ್ತು ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡುತ್ತಿರುವಾಗಲೇ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಎನ್ನುವ ರೀತಿ ರೀಲ್ಸ್ ನೋಡುವುದರಲ್ಲಿ ಮಗ್ನರಾಗಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಗೂ ನಮಗೂ ಸಂಬಂಧವೇ ಇಲ್ಲ ಅನ್ನುವ ರೀತಿಯಲ್ಲಿ ಅಧಿಕಾರಿಗಳು ಸಭೆಯಲ್ಲಿ ರೀಲ್ಸ್ ನೋಡುವುದರಲ್ಲಿ ಮುಳುಗಿಹೋಗಿದ್ದರು.
ಕಂದಾಯ ಇಲಾಖೆ ಪ್ರಗತಿ ಸಾಧಿಸದ ಬಗ್ಗೆ ಸಚಿವರು ಸಿಡಿಮಿಡಿಗೊಂಡು ಮೇಲಾಧಿಕಾರಿಗಳನ್ನು ಬೈಯುತ್ತಿದ್ದರೆ ಕೆಲಸ ಮಾಡಬೇಕಾದ ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ಅಧಿಕಾರಿಗಳು ಮಾತ್ರ ರೀಲ್ಸ್ ನಿಂದ ಹೊರಗೆ ಬರದೇ ಸಂಪೂರ್ಣವಾಗಿ ಮುಳುಗಿ ಹೋಗಿರುವುದನ್ನು ಗಮನಿಸಿದ ಮಾಧ್ಯಮದವರು ವಿಡಿಯೋ ಮಾಡುತ್ತಿದ್ದನ್ನು ಗಮನಿಸಿದ ಮೇಲಾಧಿಕಾರಿಗಳು ಮೊಬೈಲ್ ನೋಡದಂತೆ ಎಚ್ಚರಿಕೆ ನೀಡಿದರು.
ತುಮಕೂರು ತಾಲ್ಲೂಕಿನ ಕಂದಾಯ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಸಭೆಯಿಂದ ಹೊರಗೆ ಉಳಿದರೆ ಸಭೆಯಲ್ಲಿದ್ದ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ.
ಇದಕ್ಕಿಂತ ದುರಂತ ಇನ್ನೊಂದಿಲ್ಲ,, ಕಂದಾಯ ಸಚಿವ ಸನ್ಮಾನ್ಯ ಶ್ರೀ ಕೃಷ್ಣ ಬೈರೇಗೌಡರಂತಹ ಈ ರೀತಿ ಆದರೆ ಉಳಿದ ಮಂತ್ರಿಗಳ ಸ್ಥಿತಿ ದೇವರೇ ಬಲ್ಲ.ದೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಮಾಡುತ್ತಾರೆ ಎಂಬುದು, ಅಧಿಕಾರಿಗಳಿಗೆ ಬೇಜವಾಬ್ದಾರಿ ಧೋರಣೆ ಒಳೇಯದಲ್ಲಾ,,,,,