ತುಮಕೂರು | ಹೃದಯದ ಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ : ಡಾ. ತಮಿಮ್ ಅಹಮದ್

Date:

Advertisements

 ಗ್ರಾಮೀಣ ಪ್ರದೇಶದ ಸಾಮಾನ್ಯ ಜನರಿಗೆ ಹೃದಯ ಸಂಬಂಧಿತ ಕಾಯಿಲೆಗಳ ಬಗ್ಗೆ ಅರಿವಿಲ್ಲದೆ ಸಾವನ್ನಪ್ಪುತ್ತಿದ್ದಾರೆ ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಆಸ್ಪತ್ರೆ ಕಾಡಿಯಾಕ್ ಸೆಂಟರ್ ಖ್ಯಾತ ಹೃದ್ರೋಗ ತಜ್ಞ ಡಾ. ತಮಿಮ್ ಅಹಮದ್ ಅಭಿಪ್ರಾಯಪಟ್ಟರು.

 ತುಮಕೂರು ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್‌ನ ಡಾ. ಜಿ.ಪಿ ನೆಕ್ಸಸ್ ಸಭಾಂಗಣದಲ್ಲಿ ನಿನ್ನೆ ಇಂಟರ್ನಲ್ ಕ್ವಾಲಿಟಿ ಅಶುರೆನ್ಸ್ ಸೆಲ್ ಏರ್ಪಡಿಸಲಾಗಿದ್ದ ಡಾ. ಹೆಚ್.ಎಂ ಗಂಗಾಧಾರಯ್ಯ ಸ್ಮರಣಾರ್ಥ ಉಪನ್ಯಾಸ ಮಾಲಿಕೆಯಲ್ಲಿ ಸಾಮಾನ್ಯ ಹೃದಯ ರೋಗಗಳ ಚಿಕಿತ್ಸೆ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಡಾ.ತಮೀಮ್ ಅಹಮ್ಮದ್ ಮಾತನಾಡಿದರು. 

 ಸಾಮಾನ್ಯ ಜನರು ಹೃದಯ ರೋಗ ಸಂಬಂಧಿಸಿದ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಪರದಾಡುತ್ತಿರುತ್ತಾರೆ. ಇಂತಹ ಸಂದಿಗ್ದ ಸ್ಥಿತಿಯಲ್ಲಿ ಅವರಿಗೆ ಸಹಾಯ ಮಾಡಬೇಕೆಂಬುದು ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆಯ ಹೆಬ್ಬಯಕೆಯಾಗಿದೆ. ಜನ ಸಾಮನ್ಯರಿಗೆ ಸಿದ್ಧಾರ್ಥ ಕಾಡಿಯಾಕ್ ಸೆಂಟರ್ ಧನ್ವಂತರಿ ಚಿಕಿತ್ಸೆಯಾಗಿ ಪರಿಣಮಿಸಿದೆ. ಮನುಷ್ಯ ಇಂದು ಬದಲಾಗುತ್ತಿರುವ ಆಧುನಿಕ ಜೀವನ ಶೈಲಿಗೆ ಒಗ್ಗಿ ಕೊಳ್ಳುತ್ತಿದ್ದು ಸಣ್ಣ ಸಣ್ಣ ವಯಸ್ಸಿನ ಮಕ್ಕಳಿಗೂ, ವಯಸ್ಕರಿಗೆ ಹೃದಯ ಸಂಬಂಧಿತ ಕಾಯಿಲೆಗಳು ಕಾಡುತ್ತಿವೆ. ಇದಕ್ಕಾಗಿ ನಮ್ಮಲ್ಲಿ ಪರಿಹಾರಗಳಿದೆ. ಹಾರ್ಟ್ ಅಟ್ಯಾಕ್ ಬರುವ ಮುನ್ನ ಅನೇಕ ಮುನ್ಸೂಚನೆಗಳು ಕಾಣಬರುತ್ತವೆ. ಇದರಿಂದ ಎಚ್ಚರಿಕೆ ವಹಿಸಿ ವೈದ್ಯರ ಭೇಟಿ ಮಾಡಿ ಸೂಕ್ತ ಪರಿಹಾರ ಪಡೆದುಕೊಳ್ಳುವುದು ಅವಶ್ಯಕತೆ ಎಂದು ಕಿವಿ ಮಾತು ಹೇಳಿದರು.

Advertisements
1001748504

 ಕಾರ್ಡಿಯಾಕ್ ಸೆಂಟರ್ ನಲ್ಲಿ ಅತ್ಯಾಧುನಿಕ ಚಿಕಿತ್ಸಾ ವಿಧಾನಗಳನ್ನು ಕಂಡುಕೊಳ್ಳಲಾಗಿದ್ದು ರಾಜ್ಯದ ವಿವಿಧ ಮೂಲೆಗಳಲ್ಲಿ ಹೃದಯ ಸಂಬಂಧಿತ ಕಾಯಿಲೆಗೆ ದೊರೆಯುವ ಚಿಕಿತ್ಸೆ ಗಿಂತ ಉತ್ತಮ ಪಟ್ಟು ಚಿಕಿತ್ಸೆ ಇಲ್ಲಿ ನೀಡಲಾಗುತ್ತಿದ್ದು ನಮ್ಮಲ್ಲಿ ಹೃದಯದ ಬೈಪಾಸ್ ಶಸ್ತ್ರ ಚಿಕಿತ್ಸೆ ಒಳಗಾದವರು ಕೇವಲ 15 ನಿಮಿಷದಲ್ಲಿ ಗುಣಮುಖರಾಗಿ ಹೊರ ಹೊಮ್ಮುತ್ತಾರೆ. ಈ ವಿಚಾರ ಈಗಾಗಲೇ ರಾಜ್ಯದ ಮೂಲೆ ಮೂಲೆಗಳಲ್ಲಿ ಚರ್ಚೆಯಲ್ಲಿದೆ ಇಂತಹ ಸಂಶೋಧನಾತ್ಮಕ ಚಿಕಿತ್ಸಾ ವಿಧಾನಗಳನ್ನು ಕಂಡುಕೊಂಡಿರುವುದು ನಮ್ಮ ಪುಣ್ಯವೆಂದು ಭಾವಿಸಿದ್ದೇನೆ. ಈ ಚಿಕಿತ್ಸಾ ವಿಧಾನ ಜನಸಾಮಾನ್ಯರಿಗೆ ದೊರೆತಾಗ ಅದು ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

 ಎಸ್ಎಸ್ಐಟಿ ಪ್ರಾಂಶುಪಾಲ ಡಾ ರವಿಪ್ರಕಾಶ್ ಮಾತನಾಡಿ, ಹೃದಯ ಸಂಬಂಧಿತ ವಿಚಾರವಾಗಿ ಅನೇಕ ಮಾಹಿತಿಗಳನ್ನು ಡಾ. ತಮ್ಮಿಮ್ ಅಹಮ್ಮದ್ ಅವರು ತಿಳಿಸಿಕೊಟ್ಟಿದ್ದು ಇದರಿಂದ ಪ್ರಾಧ್ಯಪಕರಿಗೆ ಉಪಯುಕ್ತ ಮಾಹಿತಿ ದೊರಕಿದೆ ಎಂದರು.  

 ಕಾರ್ಯಗಾರದಲ್ಲಿ ವಿವಿಧ ವಿಭಾಗದ ಅಧ್ಯಾಪಕರು ಹೃದಯ ಸಂಬಂಧಿತ ಕಾಯಿಲೆಗೆ ಬಗ್ಗೆ ಕೇಳಿದ ಪ್ರಶ್ನೆಗೆ ಡಾ. ತಮಿಮ್ ಅಹಮ್ಮದ್ ಅವರು ಉತ್ತರಿಸಿ ಪರಿಹಾರ ನೀಡಿದರು.

 ಇದೇ ಸಂದರ್ಭದಲ್ಲಿ ಡೀನ್ ಡಾ ರೇಣುಕಾಲತಾ, ಕಾಲೇಜಿನ ಆಂತರಿಕ ಗುಣಮಟ್ಟ ಕೋಶದ ಡಾ. ರವಿರಾಮ್, ಎನ್ ಎಸ್ ಎಸ್ ವಿಭಾಗದ ಡಾ.ರವಿಕಿರಣ್ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X