ತುಮಕೂರು | ಮುಸ್ಲಿಮರ ಹಕ್ಕುಗಳ ಕಸಿದುಕೊಳ್ಳಬೇಡಿ : ತಾಜುದ್ದೀನ್ ಶರೀಫ್

Date:

Advertisements

 ಸಂಸತ್‌‌ನಲ್ಲಿ ವಕ್ಫ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಆರೋಪಿಸಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಅವಮಾನಿಸಲು, ಅವರ ಹಕ್ಕುಗಳನ್ನು ಕಿತ್ತುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ಭಾರತೀಯ ಸಮಾಜವನ್ನು ವಿಭಜಿಸುವ ಗುರಿ ಹೊಂದಿದ್ದರಿಂದ 2024ರ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕದೆ ರದ್ದುಗೊಳಿಸುವಂತೆ ಒತ್ತಾಯಿಸಿದರು.

ಇಸ್ಲಾಂ ಕಾನೂನಿನ್ವಯ ವಕ್ಫ್ ಎಂದರೆ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ದೇವರ ಹೆಸರಿನಲ್ಲಿ ಅರ್ಪಿಸಲಾದ ಆಸ್ತಿಯಾಗಿದೆ. ವಕ್ಫ್ ಆದಾಯವನ್ನು ಮಸೀದಿಗಳ ನಿರ್ವಹಣೆ, ಸಮುದಾಯದ ಬಡ ಜನರ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಹೇಳಿದ್ದರು. ಮುಸ್ಲಿಂ ಮಹಿಳೆಯರ ಮತ್ತು ಬಡ ಮುಸಲ್ಮಾನರಿಗಾಗಿ ಈ ತಿದ್ದುಪಡಿ ಎನ್ನುವರ ಪಾರ್ಟಿಯಲ್ಲಿ ಒಂದು ಮಹಿಳೆ ಸಂಸದೆ ಇಲ್ಲ ಬಡ ಮುಸಲ್ಮಾನರಿಗೆ ಜಾತ್ರೆ, ದೇವಸ್ಥಾನ, ಅಂಗಡಿ ಮುಗ್ಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ವಿರೋಧಿಸುವವರು ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಮಾತನಾಡುತ್ತಿರುವುದು ಯಾವ ಹುನ್ನಾರ ಎಂದು ತಿಳಿಯಬೇಕು ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

Advertisements

ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಸೂಚಿ ಭಾಗವಾಗಿದೆ. ದೇಶದ ಸುಮಾರು 20 ಕೋಟಿ ಮುಸ್ಲಿಮರು ವಕ್ಫ್ ತಿದ್ದುಪಡಿ ವಿಧೇಯಕ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಾಗ ಅವರ ಅಹವಾಲು ಆಲಿಸದೆ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಿರುವುದು ಪ್ರಜಾಪ್ರಭುತ್ವಕ್ಕೆ ಎಸಗಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X