ತುಮಕೂರು | ಜಗತ್ತು ಕಂಡ ಅದ್ಭುತ ಸಮಾಜ ಸುಧಾರಕ ಅಂಬೇಡ್ಕರ್: ಡಾ.ನಾಗಭೂಷಣ್ ಬಗ್ಗನಡು

Date:

ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಜಗತ್ತು ಕಂಡ ಅದ್ಭುತ ಸಮಾಜ ವಿಜ್ಞಾನಿ. ಬಹಳ ದೊಡ್ಡ ಸಮಾಜ ಸುಧಾರಕ  ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಅಭಿಪ್ರಾಪಟ್ಟರು.

- Advertisement -

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕೊಟ್ಟ ಗ್ರಾಮದಲ್ಲಿ ಅಂಬೇಡ್ಕರ್ ಯುವಕ ಸಂಘದಿಂದ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಕಾರ್ಮಿಕರ, ಶೋಷಿತರ, ರೈತರ, ಮಹಿಳೆಯರ ಪರವಾಗಿ ಇಡೀ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ದನಿ ಎತ್ತಿದವರು. ಅವರ ಪರವಾಗಿ ಹೋರಾಡಿದವರು ಅಂಬೇಡ್ಕರ್. ಅಲ್ಲಿಯವರೆಗೂ ಕಾರ್ಮಿಕರ, ಶೋಷಿತರ, ರೈತರ, ಮಹಿಳೆಯರ ಬಗ್ಗೆ ಮಾತನಾಡಿದವರು, ಬರೆದವರು ವಿರಳ ಅಂತಹ ಮಹಾನ್ ಚೇತನರ ಜಯಂತಿ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಹೋರಾಟಗಾರ ಕೊಟ್ಟ ಶಂಕರ್ ಮಾತನಾಡಿ ಶಿಕ್ಷಣ ಎಲ್ಲಾ ವಿಮೋಚನೆಗೆ ದಾರಿ, ನಾವು ಶಿಕ್ಷಣ ಪಡೆದು ಪ್ರಶ್ನೆ ಮಾಡುವುದನ್ನು ಕಲಿಯದಿದ್ದರೆ ಗುಲಾಮಗಿರಿಯನ್ನು ಅನುಭವಿಸಬೇಕಾಗುತ್ತದೆ. ಓದು ನಮ್ಮನ್ನು ಪ್ರಶ್ನೆ ಮಾಡುವುದನ್ನು ಕಲಿಸುತ್ತದೆ. ಇದನ್ನೇ ಅಂಬೇಡ್ಕರ್ ಅವರು ಹೇಳಿದ್ದು, ನಾವು ಅಂಬೇಡ್ಕರ್ ಅವರನ್ನು ಅವರ ಜಯಂತಿ ಆಚರಿಸುವ ಮೂಲಕ ತಿಳಿಯಬೇಕು. ಅವರು ವಿಚಾರಗಳನ್ನು ಜನರಿಗೆ ತಿಳಿಸಬೇಕು ಎಂದು  ಹೇಳಿದರು.

ಇಡೀ ದೇಶದಲ್ಲಿ ಸಂಪ್ರದಾಯಗಳ ಹೆಸರಿನಲ್ಲಿ ದಲಿತರನ್ನು ಶೋಷಣೆ ಮಾಡಲಾಗುತ್ತಿದೆ. ಆದ್ದರಿಂದ ದಲಿತ ಸಮುದಾಯ ಶಿಕ್ಷಣ ಕಲಿತು, ಸಂಘಟನೆಯಾಗಿ ಆ ಮುಖೇನ ಜಾಗೃತಿಯಾಗಬೇಕು. ಯಾವುದು ನ್ಯಾಯ, ಯಾವುದು ಅನ್ಯಾಯ, ಯಾವುದು ಮೌಢ್ಯ ಎಂಬುದನ್ನು ಶಿಕ್ಷಣ ತಿಳಿಸುತ್ತದೆ. ಎಲ್ಲಿ ಶಿಕ್ಷಣ ಇರುತ್ತದೆ ಅಲ್ಲಿ ಸ್ವಾಭಿಮಾನ ಇರುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಒಂದು ಜಾತಿಗೆ ಸೀಮಿತರಲ್ಲ. ಈ ದೇಶದ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಎಲ್ಲರಿಗೂ ಸಲ್ಲುವವರು ಅಂಬೇಡ್ಕರ್. ಇಂತಹ ಮಹಾನಾಯಕರ ಚಿಂತನೆಗಳು ದೇಶದ ಮನೆ ಮನೆಗೆ ತಲುಪಬೇಕು ಎಂದರು.

ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್ ಮಾತನಾಡಿ ಅಂಬೇಡ್ಕರ್ ಅವರು ಕೇವಲ ಭಾರತ ರತ್ನ ಅಷ್ಟೆ ಅಲ್ಲ. ಇಡೀ ಪ್ರಪಂಚಕ್ಕೆ ವಿಶ್ವರತ್ನರಾಗಿದ್ದಾರೆ. ಅವರು ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಕೊಡುಗೆ ನೀಡಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರು ಈ ಜಗತ್ತಿಗೆ ತಿಳಿ ಹೇಳಿದವರು. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲರಿಗೂ ತಿಳಿ ಹೇಳಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಿಎಸ್‌ಪಿ ಅಧ್ಯಕ್ಷ ಜೆ.ಎನ್.ರಾಜಸಿಂಹ, ಬರಹಗಾರರಾದ ಡಾ. ರವಿಕುಮಾರ್ ನೀಹಾ, ಸಂತೋಷ್ ಕೋಡಿಹಳ್ಳಿ, ಮಾಜಿ ನಗರಸಭಾ ಸದಸ್ಯ ಬಸವರಾಜು, ಕಲ್ಲುಕೋಟೆ ಲಿಂಗರಾಜು, ಸಣ್ಣಪ್ಪ, ಡಾ. ಮೂರ್ತಿ ತಿಮ್ಮನಹಳ್ಳಿ ಸೇರಿದಂತೆ ಹಲವರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ....