ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವಂತಹ ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಅಶೋಕ್ ಮೆಹ್ತಾ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಕೆ.ಬಿ ಲಿಂಗೇಗೌಡರವರು ಡಾ. ಅಶೋಕ್ ಮೆಹ್ತಾ ರವರಿಗೆ ಹೂಗುಚ್ಚವನ್ನು ನೀಡುವ ಮೂಲಕ ಅಭಿನಂದನೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾಲಯದ ಪರೀಕ್ಷಾಂಗ ನಿಯಂತ್ರಕರಾದ ಡಾ.ಗುರುಶಂಕರ್, ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಪ್ರವೀಣ್ ಕೊಡುವ, ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಆಡಳಿತ ವರ್ಗದವರು ಹಾಜರಿದ್ದರು.

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಶೋಕ್ ಮೆಹ್ತಾ ಅವರು (ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಕಾರ್ಯಕ್ರಮ) ಕಾರ್ಯಕ್ರಮದ ನಿರ್ದೇಶಕರಾಗಿ, ಎಸ್‌ಎಸ್‌ಐಟಿ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಮತ್ತು ತರಬೇತಿಯ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಸಾಹೇ ವಿವಿಯ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೋಧನೆ ಮತ್ತು ಆಡಳಿತ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ಅವರು ಹಲವಾರು ಅಂತಾರಾಷ್ಟ್ರೀಯ, ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇದರ ಜತೆಗೆ ಹಲವಾರು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಸಮ್ಮೇಳನಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಸಂಶೋಧನಾ ವಿಷಯಗಳನ್ನು ಮಂಡಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವ ಅವರು ಸಾಹೇ ವಿವಿಯಲ್ಲಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.