ತುಮಕೂರು | ಏ.14ರಂದು ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ : ಸಚಿವ ಜಿ. ಪರಮೇಶ್ವರ

Date:

ತುಮಕೂರು ನಗರದ ಮಹಾನಗರ ಪಾಲಿಕೆ ಆವರಣ ಟೌನ್ ಹಾಲ್ ಐತಿಹಾಸಿಕ ಕಟ್ಟಡದ ಮುಂಭಾಗ ಏಪ್ರಿಲ್ 14ರಂದು ಡಾ. ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

- Advertisement -

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ಜಯಂತಿ ಕುರಿತು ಅಧಿಕಾರಿ ಹಾಗೂ ದಲಿತ ಮುಖಂಡರೊಂದಿಗೆ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ದಿನಾಚರಣೆಯಂದು ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯಿಂದ ಸುಮಾರು 60 ವರ್ಷಗಳ ದಲಿತ ಸಮುದಾಯದವರ ಬೇಡಿಕೆ ಈಡೇರಿದಂತಾಗುತ್ತದೆ. ಪ್ರತಿಮೆಯು 12 ಅಡಿ ಎತ್ತರ, 1000 ಕೆ.ಜಿ ತೂಕ ಹೊಂದಿದ್ದು, ತಯಾರಿಕೆಗೆ 39 ಲಕ್ಷ ರೂ. ವೆಚ್ಚವಾಗಿದೆ. ಪ್ರತಿಮೆಯನ್ನು ಸಿದ್ಧಾರ್ಥ ಸಂಸ್ಥೆಯಿಂದ ಕೊಡುಗೆಯಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1001203855

 ಚುನವಾಣೆ ನೀತಿ ಸಂಹಿತೆಯಿಂದ ಕಳೆದ ಮರ‍್ನಾಲ್ಕು ವರ್ಷಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಈ ಬಾರಿ ದಸರಾ ಹಬ್ಬದ ಮಾದರಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಗೋಷ್ಠಿಗಳನ್ನೊಳಗೊಂಡಂತೆ ಜಿಲ್ಲೆಯ ಶಕ್ತಿಯ ಸಂಕೇತವಾಗಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಅದೇ ಭಾವನೆ, ಉತ್ಸಾಹ, ಸಂಭ್ರಮದಲ್ಲಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ ಕೂಡ ಜರುಗಬೇಕು. ಇದು ಕೇವಲ ಕಾರ್ಯಕ್ರಮವಲ್ಲ, ಸಮಾಜಕ್ಕೆ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನಾತ್ಮಕ ಆದರ್ಶಗಳನ್ನು ನೆನಪಿಸುವ ಮಹತ್ವದ ಕ್ಷಣವಾಗಬೇಕು ಎಂದು ತಿಳಿಸಿದರು.  

ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ಪಡೆದುಕೊಳ್ಳಲಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅಂಬೇಡ್ಕರ್ ಪುತ್ಥಳಿಗಳನ್ನು ಸ್ಥಾಪಿಸಲಾಗಿದೆ. ಆದರೆ ತುಮಕೂರಿನಲ್ಲಿ ಕೈಗೂಡಿರಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಹಾಗೂ ಬಾಬು ಜಗಜೀವನ್ ರಾಮ್ ಪ್ರತಿಮೆ ಇಡಲು ಮುಂದಾದಾಗ ಕಾನೂನಾತ್ಮಕವಾಗಿ ಅನೇಕ ಅಡಚಣೆಗಳು ಬಂದಿವೆ. ಆದರೆ ಈಗ ಸಚಿವ ಸಂಪುಟದಿಂದ ಅನುಮೋದನೆ ದೊರೆತಿರುವುದರಿಂದ ಯಾರ ವಿರೋಧವೂ ಬರುವುದಿಲ್ಲವೆಂದು ತಿಳಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮವು ರಾಜ್ಯದ ಇತಿಹಾಸದಲ್ಲಿ ನೆನಪಿನಲ್ಲಿ ಉಳಿಯುವಂತಹ ಕಾರ್ಯಕ್ರಮವಾಗಬೇಕು. ಅಂಬೇಡ್ಕರ್ ಅವರ ಕುರಿತು ಮುಂದಿನ ಪೀಳಿಗೆಯವರಿಗೂ ಸಂದೇಶಗಳನ್ನು ತಲುಪಿಸಬೇಕು. ಅಂಬೇಡ್ಕರ್ ಪ್ರತಿಮೆ ಬಳಿ ಸಂವಿಧಾನ ಪೀಠಿಕೆಯ ಶಿಲೆಯನ್ನು ಸ್ಥಾಪಿಸಲಾಗುವುದು ಎಂದರು.

1001203857

ನೆನೆಗುದಿಗೆ ಬಿದ್ದಿರುವ ಬಾಬು ಜಗಜೀವನ್ ರಾಮ್ ಅವರ ಭವನ ನಿರ್ಮಾಣದ ಸಮಸ್ಯೆಯನ್ನು ಬಗೆಹರಿಸಲಾಗುವುದು. ಈ ಬಗ್ಗೆ ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು. ಬಾಬು ಜಗಜೀವನ್ ರಾಮ್ ಪ್ರತಿಮೆಯನ್ನೂ ಸಹ ಸಿದ್ಧಾರ್ಥ ಸಂಸ್ಥೆ ವತಿಯಿಂದಲೇ ನಿರ್ಮಿಸಿಕೊಡಲಾಗುವುದೆಂದು ತಿಳಿಸಿದರಲ್ಲದೆ ಮುಂದಿನ ದಿನಗಳಲ್ಲಿ 3 ತಿಂಗಳಿಗೊಮ್ಮೆ ಪರಿಶಿಷ್ಟ ಸಮುದಾಯಗಳೊಂದಿಗೆ ಕುಂದು-ಕೊರತೆ ಸಭೆಯನ್ನು ನಾನೇ ಖುದ್ದಾಗಿ ನಡೆಸುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡರು ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ನಾಡ ಹಬ್ಬದ ಮಾದರಿಯಲ್ಲಿ ಆಚರಿಸಬೇಕು. ದಲಿತ ಸಮುದಾಯದ ಕಲಾ ತಂಡಗಳೊಂದಿಗೆ ನಗರದಲ್ಲಿ ಮೆರವಣಿಗೆ ಹೊರಡಿಸಬೇಕು ಎಂದು ಸಲಹೆ ನೀಡಿದರು.

ಒಳ ಮೀಸಲಾತಿಯನ್ನು ಜಾರಿ ಮಾಡಿಯೇ ತೀರುತ್ತೇವೆ

ಅಧಿಕೃತವಾದ ಜನಸಂಖ್ಯೆಯ ಆಧಾರದ ಮೇಲೆ ಒಳಮೀಸಲಾತಿ ಜಾರಿ ಮಾಡಬೇಕು. ಆದರೆ 2011ರ ನಂತರ ಜನ ಗಣತಿ ನಡೆದಿಲ್ಲ. ಸದಾಶಿವ ಆಯೋಗದ ವರದಿ ಆಧರಿಸಿ ಒಳಮೀಸಲಾತಿ ಜಾರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಬಗ್ಗೆ ಕ್ಯಾಬಿನೆಟ್‌ನಲ್ಲಿ ಹತ್ತಾರು ಬಾರಿ ಚರ್ಚಿಸಲಾಗಿದೆ ಎಂದರಲ್ಲದೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವುದು ಅಂತಿಮ ಹಂತಕ್ಕೆ ಬಂದಿದೆ. ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ಯಾವುದೇ ರೀತಿಯ ಆತಂಕಪಡುವುದು ಬೇಡ ಎಂದು ತಿಳಿಸಿದರಲ್ಲದೆ ಒಳ ಮೀಸಲಾತಿ ಜಾರಿಗಾಗಿ ನಡೆಯುವ ಪ್ರತಿಭಟನೆ ವೇಳೆ ಯಾರ ಬಗ್ಗೆಯೂ ಲಘುವಾಗಿ ಮಾತನಾಡಬಾರದು ಎಂದು ಮುಖಂಡರಲ್ಲಿ ಸಚಿವರು ಮನವಿ ಮಾಡಿದರು. 

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭಾಕಲ್ಯಾಣ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ದಲಿತ ಸಂಘಟನೆಯ ವಿವಿಧ ಮುಖಂಡರು ಸಭೆಯಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...