ತುಮಕೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಆಶ್ವಿಜ ಅವರೊಂದಿಗೆ ಮುಖ್ಯಮಂತ್ರಿಗಳ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು, ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಅಮರ ಶಿಲ್ಪಿ ಜಕಣಾಚಾರಿ ಮುಖ್ಯ ವೇದಿಕೆಯಲ್ಲಿ ಅಕ್ಟೋಬರ್ 11 ಮತ್ತು 12ರಂದು ಜರುಗುವ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಅವರು ಮಾಹಿತಿ ನೀಡಿದರು.
