ತುಮಕೂರು | ಸಂಭ್ರಮದ ದಸರಾ ಉತ್ಸವ : ಉತ್ಸಾಹದಿಂದ ಪಾಲ್ಗೊಳ್ಳಲು ಸಾರ್ವಜನಿಕರಲ್ಲಿ ಸಿಇಓ ಮನವಿ

Date:

ತುಮಕೂರು ಜಿಲ್ಲೆಯಲ್ಲಿ ಸಂಭ್ರಮದ ದಸರಾ ಉತ್ಸವದ ಭಾಗವಾಗಿ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹಾಸ್ಯ ಚಕ್ರವರ್ತಿ ಟಿ.ಆರ್. ನರಸಿಂಹರಾಜು ವೇದಿಕೆಯಲ್ಲಿ ಅಕ್ಟೋಬರ್ 10ರವರೆಗೂ ನಡೆಯಲಿರುವ ಯುವ ದಸರಾ ಕಾರ್ಯಕ್ರಮದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಭಾನುವಾರ ಚಾಲನೆ ನೀಡಲಾಗಿದ್ದು, ಅಕ್ಟೋಬರ್ 10ರವರೆಗೂ ಪ್ರತಿ ದಿನ ಸಂಜೆ 5 ಗಂಟೆಯಿಂದ ಜರುಗಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಗಳ ಸವಿಯನ್ನು ಸವಿಯಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮನವಿ ಮಾಡಿದರು.

- Advertisement -

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ದಸರಾ ಪ್ರಯುಕ್ತ ಮಹಿಳಾ ದಸರಾ ಕಾರ್ಯಕ್ರಮದಡಿ ನಗರದ ಎನ್‌ಸಿಸಿ ಕಚೇರಿಯಿಂದ ಮಹಾತ್ಮಗಾಂಧಿ ಕ್ರೀಡಾಂಗಣದವರೆಗೂ ಏರ್ಪಡಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು ಬಿಡಿಸಿದ ಬಣ್ಣದ ಚಿತ್ತಾರಗಳು ನೋಡುಗರ ಕಣ್ಮನ ಸೆಳೆದವು. ದಸರಾ ಸಂದರ್ಭದಲ್ಲಿ ಇಂದಿನಿಂದ ನಗರದ ಅಮಾನಿಕೆರೆಯಲ್ಲಿ ದೋಣಿ ವಿಹಾರ ಆರಂಭಗೊಳ್ಳಲಿದ್ದು, ನಿರಂತರವಾಗಿ ನಡೆಯಲಿದೆ. ಸಾರ್ವಜನಿಕರು ದೋಣಿ ವಿಹಾರದ ಪ್ರಯೋಜನ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವೈಭವಯುತ ದಸರಾ ಕಾರ್ಯಕ್ರಮವನ್ನು ನಂದಿಧ್ವಜ ಪೂಜೆಯೊಂದಿಗೆ ಚಾಲನೆ ನೀಡಿದ್ದು, ಹಾಸ್ಯ ಚಕ್ರವರ್ತಿ ಟಿ.ಆರ್. ನರಸಿಂಹರಾಜು ವೇದಿಕೆಯಲ್ಲಿ ನಡೆಯಲಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಪ್ರತೀ ದಿನ ಸಂಜೆ 5 ರಿಂದ 10 ಗಂಟೆಯವರೆಗೂ 5 ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರು ಕುಟುಂಬದೊಂದಿಗೆ ಆಗಮಿಸಿ ಜಿಲ್ಲೆಯ ಸ್ಥಳೀಯ ಕಲಾ ವೈಭವನ್ನು ಕಣ್ತುಂಬಿಕೊಳ್ಳಬೇಕೆಂದು ಮನವಿ ಮಾಡಿದರು.

ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲೆಯ ವನ್ಯಸಂಪತ್ತು ಕುರಿತು ಅರಣ್ಯ ಇಲಾಖೆಯಿಂದ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಜನರ ಸಂತಸ, ಆರೋಗ್ಯ, ಸಮೃದ್ಧಿಗಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಧಾರ್ಮಿಕ ಮಂಟಪದಲ್ಲಿ ತಾಯಿ ಚಾಮುಂಡಿ ದೇವಿಗೆ ವಿವಿಧ ಅಲಂಕಾರ, ನಿತ್ಯ ಪೂಜೆ ಸಲ್ಲಿಸಲಾಗುವುದಲ್ಲದೆ, ಇಡೀ ನಗರ ಝಗಮಗಿಸುವಂತೆ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದ್ದು, ನಮ್ಮ ಕಲೆ, ಸಂಸ್ಕೃತಿ ಉಳಿಸಿ-ಬೆಳಸುವ ನಿಟ್ಟಿನಲ್ಲಿ ಎಲ್ಲರೂ ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...