ತುಮಕೂರು | ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಡಿವೈಎಸ್​ಪಿ

Date:

ದೂರು ನೀಡಲು ಪೊಲೀಸ್‌ ಠಾಣೆಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಡಿವೈಎಸ್‌ಪಿ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿದ್ದಾರೆ.

- Advertisement -

ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಈ ಕೃತ್ಯ ನಡೆದಿದೆ. ಮಧುಗಿರಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿನಿಧಿಸುವ ಕ್ಷೇತ್ರ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಅವರ ಜಿಲ್ಲಾ ವ್ಯಪ್ತಿಯಲ್ಲಿದೆ. ಇಬ್ಬರು ಸಚಿವರಿರುವ ಅದರಲ್ಲೂ ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿದ್ದು, ಸರ್ಕಾರದ ವಿರುದ್ಧವೂ ಅಸಮಾಧಾನ ವ್ಯಕ್ತಪವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪಾವಗಡ ತಾಲೂಕಿನ ಮಹಿಳೆ ಜಮೀನು ವ್ಯಾಜ್ಯದ ವಿಚಾರವಾಗಿ ದೂರು ನೀಡಲು ಮಧುಗಿರಿ ಡಿವೈಎಸ್‌ಪಿ ಕಚೇರಿಗೆ ಬಂದಿದ್ದರು. ಈ ವೇಳೆ, ಮಹಿಳೆಯನ್ನು ಯಾರು ಇಲ್ಲದ ಕೊಠಡಿಗೆ ಕರೆದಯ್ದು ಡಿವೈಎಸ್‌ಪಿ ರಾಮಚಂದ್ರಪ್ಪ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್‌ಪಿ ರಾಮಚಂದ್ರಪ್ಪನ ಕೃತ್ಯವನ್ನು ಮಹಿಳೆಯ ಜೊತೆ ಬಂದಿದ್ದ ಯುವಕ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಅಳಲು ತೋಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್‌ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...