ತುಮಕೂರು | ಹೊಸ ವರ್ಷಾಚರಣೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

Date:

Advertisements

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31ರ ಬೆಳಿಗ್ಗೆ 8 ಗಂಟೆಯಿಂದ 2024ರ ಜನವರಿ 2ರ ಬೆಳಿಗ್ಗೆ 8ಗಂಟೆಯವರೆಗೆ ಈ ನಿರ್ಬಂಧ ಇರಲಿದೆ. ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಬೆಟ್ಟಕ್ಕೆ 2024ರ ಹೊಸ ವರ್ಷಾಚರಣೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು ಭೇಟಿ ನೀಡಲಿದ್ದು, ಸಂಭ್ರಮಾಚರಣೆ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಸಂಭವಗಳು ಇರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.

ಸಾರ್ವಜನಿಕರು ಮದ್ಯಪಾನ ಮಾಡಿ ಹಾಗೂ ಜಾಲಿರೈಡ್ ನೆಪದಲ್ಲಿ ವಾಹನಗಳನ್ನು ಚಾಲನೆ ಮಾಡುವುದರಿಂದ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶಗಳು ಸುರಕ್ಷಿತ ಅರಣ್ಯ ಆವೃತ ಪ್ರದೇಶಗಳಾಗಿದ್ದು, ಪ್ರವಾಸಿಗರ ಮೇಲೆ ಕಾಡು ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇರುತ್ತದೆ.

Advertisements

ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ನಾಮದ ಚಿಲುಮೆ, ಬಸದಿ ಬೆಟ್ಟ, ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿ ಗುಂಪು ಘರ್ಷಣೆಗಳಾಗಿ ಕಾನೂನು ಹಾಗೂ ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವವಿರುವುದರಿಂದ ಈ ನಿರ್ಬಂಧವನ್ನು ಹೇರಲಾಗಿದೆ. ಆದರೆ, ನಿರ್ಬಂಧಿತ ಅವಧಿಯಲ್ಲಿ ಮೇಲ್ಕಾಣಿಸಿದ ಮಾರ್ಗವಾಗಿ ದೈನಂದಿನ ಚಟುವಟಿಕೆಗಳಿಗೆ ತೆರಳುವ ಸ್ಥಳೀಯರು ಸದರಿ ಮಾರ್ಗ ಮಧ್ಯೆ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸದಂತೆ ತೆರಳಲು ಅನುಮತಿ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X