ತುಮಕೂರು | ಎತ್ತಿನಹೊಳೆ ಯೋಜನೆ : ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಲು ಪರಮೇಶ್ವರ್ ಸೂಚನೆ

Date:

Advertisements

ತುಮಕೂರು ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ  ಸೂಚನೆ ನೀಡಿದರು. 

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಎತ್ತಿನಹೊಳೆ, ರೈಲ್ವೆ, ಹೇಮಾವತಿ, ಕೆಐಎಡಿಬಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2679 ಎಕರೆ ಭೂಸ್ವಾಧೀನವಾಗಿದ್ದು, ಯೋಜನೆಗೆ ಅವಶ್ಯವಿರುವ ಉಳಿದ 438 ಎಕರೆ ಭೂಮಿಯನ್ನು 4 ತಿಂಗಳೊಳಗಾಗಿ ಸ್ವಾಧೀನಪಡಿಸಿಕೊಂಡು ಎತ್ತಿನ ಹೊಳೆ ಯೋಜನೆಗೆ ಹಸ್ತಾಂತರಿಸಬೇಕೆಂದು ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಜಿ.ಎನ್. ಅವರಿಗೆ ಸೂಚನೆ ನೀಡಿದರು.

1001082705

ಲಭ್ಯವಿರುವ ಅನುದಾನವನ್ನು ಭೂಮಾಲೀಕರಿಗೆ ಪಾವತಿಸಿ ಎತ್ತಿನ ಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಅವರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. 

Advertisements

ಎತ್ತಿನ ಹೊಳೆ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಸಚಿವರಿಗೆ ಮಾಹಿತಿ ನೀಡುತ್ತಾ, ಯೋಜನೆಯಡಿ ಜಿಲ್ಲೆಯಲ್ಲಿ 150 ಕಿ.ಮೀ. ಗುರುತ್ವಾ ಕಾಲುವೆಯನ್ನು ಹೊಂದಿದ್ದು, ಇದರಲ್ಲಿ 115 ಕಿ.ಮೀ.ವರೆಗಿನ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಉಳಿದ 24 ಕಿ.ಮೀ.ನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ 3 ಕಡೆ ಅರಣ್ಯ ಪ್ರದೇಶದ ಸಮಸ್ಯೆಯಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಸರಿಪಡಿಸಲಾಗುವುದು ಎಂದು ತಿಳಿಸಿದರು. 

ನಂತರ ಮಾತನಾಡಿದ ಸಚಿವರು, ತುಮಕೂರು-ರಾಯದುರ್ಗ ಯೋಜನೆಗಾಗಿ 1361 ಎಕರೆ ಪ್ರದೇಶವನ್ನು ರೈಲ್ವೆ ಇಲಾಖೆಗೆ ಈಗಾಗಲೇ ಹಸ್ತಾಂತರಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ. ಬಾಕಿ ಇರುವ 35 ಎಕರೆ ಭೂಮಿಯನ್ನು 45 ದಿನಗಳೊಳಗಾಗಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು. 

1001082706

ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ ಸಭೆಗೆ ಮಾಹಿತಿ ನೀಡುತ್ತಾ, ಈಗಾಗಲೇ 770 ಎಕರೆ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಶಿರಾ ಮತ್ತು ತುಮಕೂರು ತಾಲ್ಲೂಕಿನಲ್ಲಿ ಮಾತ್ರ 61 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಭೂ ಮಾಲೀಕರಿಗೆ ಪರಿಹಾರ ನೀಡಲು 20 ಕೋಟಿ ಅನುದಾನದ ಅವಶ್ಯಕತೆಯಿದೆ ಎಂದು ತಿಳಿಸಿದರು. 

ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಬಾಕಿ ಇರುವ 576 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದಾಗ ಉತ್ತರಿಸಿದ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸಂದೇಶ್ ಮಾತನಾಡಿ, ಸ್ವಾಧೀನಪಡಿಸಿಕೊಂಡ 308 ಎಕರೆ ಭೂ ಮಾಲೀಕರಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿ ಹಂತದಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಗಾಗಿ ಶಿರಾ ತಾಲ್ಲೂಕಿನಲ್ಲಿ 28 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಸ್ವಾಧೀನಪಡಿಸಿಕೊಂಡ 280 ಎಕರೆ ಪ್ರದೇಶದ ಭೂ ಮಾಲೀಕರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು. 

1001082704

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯ ಯೋಜನೆಗಳು, ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. 

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ರೈಲ್ವೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X