ತುಮಕೂರು | ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

Advertisements

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವಿದ್ದಂತೆ. ಈ ಹಬ್ಬದಲ್ಲಿ ಪ್ರತಿಯೊಬ್ಬರೂ ತಪ್ಪದೆ ಭಾಗವಹಿಸಿ ಮತದಾನ ಮಾಡಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ 2024ರ ಲೋಕಸಭಾ ಚುನಾವಣೆ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವ ಉದ್ಘಾಟಿಸಿ ಮಾತನಾಡಿದರು.

“ಮತ ಚಲಾಯಿಸುವ ಮೂಲಕವೇ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸಲು ಸಾಧ್ಯ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನ ಮಾಡಬೇಕು” ಎಂದು ತಿಳಿಸಿದರು.

Advertisements

“ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಎಲ್ಲರೂ ಮತದಾನ ಮಾಡುವಂತೆ ತಿಳಿಸಬೇಕು. ಯಾವುದೇ ಆಮಿಷಕ್ಕೆ ಬಲಿಯಾಗದೆ, ಮತ ಚಲಾಯಿಸುವ ಮೂಲಕ ದೇಶದ ಅಭವೃದ್ಧಿಯಲ್ಲಿ ಪಾಲ್ಗೊಳ್ಳಬೇಕು” ಎಂದು ತಿಳಿಸಿದರು.

“ಆನ್‌ಲೈನ್ ಅಪ್ಲಿಕೇಶನ್ ಮತ್ತು 1950 ಹೆಲ್ಪ್ ಲೈನ್ ಸಂಖ್ಯೆಗೆ ಕರೆ ಮಾಡುವ ಮೂಲಕ ಯಾರಾದರೂ ಆಮಿಷಗಳನ್ನು ಒಡ್ಡುತ್ತಿದ್ದರೆ ಅಥವಾ ಮತದಾನಕ್ಕೆ ಅಡ್ಡಿ ಪಡಿಸುತ್ತಿದ್ದರೆ ದೂರು ದಾಖಲು ಮಾಡಬಹುದಾಗಿದೆ” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಮಾತನಾಡಿ, “ವಿಶ್ವದಲ್ಲಿ ಶೇ.55 ಆಡಳಿತ ದೇಶಗಳು ಪ್ರಜಾಪ್ರಭುತ್ವವನ್ನು ಆಯ್ಕೆ ಮಾಡಿಕೊಂಡಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶವನ್ನು ಸದೃಢವಾಗಿ ಮುನ್ನಡೆಸಲು ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಕಾರ್ಯ ನಿರ್ವಹಿಸುತ್ತಿವೆ. ಉತ್ತಮ ಶಾಸಕಾಂಗ ರಚನೆಯಾಗಬೇಕೆಂದರೆ ಪ್ರತಿಯೊಬ್ಬರೂ ಮತದಾನ ಮಾಡುವುದು ಅತ್ಯಗತ್ಯ, ಕಳೆದಬಾರಿ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿದ್ದು, ಈ ಬಾರಿ ಶೇಕಡಾ 100ರಷ್ಟು ಮತದಾನ ಆಗುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪುರಾಣಗಳ ಕುರುಡು ನಿರಾಕರಣೆ ಸಲ್ಲದು: ಪ್ರೊ. ಬರಗೂರು ರಾಮಚಂದ್ರಪ್ಪ

ಮಕ್ಕಳೊಂದಿಗೆ ಸಂವಾದ ನಡೆಸಿದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ಅವರು ಜಾಗೃತಿ ಜಾಥಾ ಕಾರ್ಯಕ್ರಮದ ಉದ್ದೇಶ ಮತ್ತು ಮತದಾನ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ, ಕೃಷಿ ಇಲಾಖೆ ಉಪನಿರ್ದೇಶಕ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಲಾ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X