ರಾಗಿ ಖರೀದಿಸುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಕೇಂದ್ರ ಸರ್ಕಾರ ವಿಧಿಸಿರುವ ಷರತ್ತಿಗೊಳಪಡಿಸಿ ರೈತರಿಂದ ರಾಗಿ ಖರೀದಿಸುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಸುಮಾರು 10 ಖರೀದಿ ಕೇಂದ್ರಗಳಲ್ಲಿ ಈಗಾಗಲೇ ನೋಂದಣಿ ಮಾಡಿಸಿರುವ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸಲಾಗುತ್ತಿದ್ದು, ರೈತ ಬಂಧುಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
