ತುಮಕೂರು | ವಿಧಾನಸಭೆ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸುಳ್ಳು ಆಮಂತ್ರಣ ಪತ್ರಿಕೆ ಮುದ್ರಣ

Date:

  • ವಿಧಾನಸಭೆ ಚುನಾವಣೆ ದಿನದಂದು ಸುಳ್ಳು ವಿವಾಹ ದಿನಾಂಕ ಮುದ್ರಣ
  • ʼಸುಳ್ಳು ಆಹ್ವಾನ ಪತ್ರಿಕೆ ಮುದ್ರಿಸುವ ಮುದ್ರಕರ ಮೇಲೂ ಕ್ರಮʼ

ವಿಧಾನಸಭೆ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಮತಗಟ್ಟೆ ಅಧಿಕಾರಿ (ಪಿಆರ್‌ಒ) ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು (ಎಪಿಆರ್‌ಒ) ಸುಳ್ಳು ವಿವಾಹ ಆಮಂತ್ರಣ ಪತ್ರಿಕೆ ಮುದ್ರಿಸಿ ಸಲ್ಲಿಸುತ್ತಿರುವುದರಿಂದ ತುಮಕೂರು ಜಿಲ್ಲಾಡಳಿತಕ್ಕೆ ಸಂಕಷ್ಟ ಎದುರಾಗಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಮೇ 10ರಂದು ರಾಜ್ಯದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಕರ್ತವ್ಯಗಳಿಗಾಗಿ ಸರ್ಕಾರಿ ಶಿಕ್ಷಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ. ಈ ಮಧ್ಯೆ, ಕೆಲವು ಅಧಿಕಾರಿಗಳು ಚುನಾವಣಾ ಕರ್ತವ್ಯಗಳಿಂದ ತಪ್ಪಿಸಿಕೊಳ್ಳು ತಮ್ಮ ಅಕ್ಕ–ತಂಗಿಯರು, ಅಣ್ಣ–ತಮ್ಮಂದಿರು, ಮಕ್ಕಳು ಮತ್ತು ಕುಟುಂಬ ಸದಸ್ಯರ ವಿವಾಹ ಹಾಗೂ ಮತ್ತಿತರ ಸಮಾರಂಭ ನಡೆಯುತ್ತಿವೆ ಎಂಬಂತೆ ಆಹ್ವಾನ ಪತ್ರಿಕೆ ಮುದ್ರಿಸಿ ನೀಡುತ್ತಿದ್ದಾರೆ. ಯುವ ಅಧಿಕಾರಿಗಳು ತಮ್ಮದೇ ವಿವಾಹದ ನಕಲಿ ಆಹ್ವಾನ ಪತ್ರಿಕೆ ಸಿದ್ಧಪಡಿಸಿ ಕೊಡುತ್ತಿದ್ದಾರೆ. ಮನವಿ ಜೊತೆಗೆ ಆಹ್ವಾನ ಪತ್ರಿಕೆ ನೀಡಿ ಚುನಾವಣೆ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಕೇಳಿಕೊಳ್ಳುತ್ತಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಸುಳ್ಳು ಆಹ್ವಾನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸಭೆ ನಡೆಸಿ, “ಸುಳ್ಳು ಆಹ್ವಾನ ಪತ್ರಿಕೆ ನೀಡಿ, ಚುನಾವಣೆ ಕೆಲಸದಿಂದ ತಪ್ಪಿಸಿಕೊಂಡರೆ ಕೆಲಸದಿಂದ ಅಮಾನತು ಮಾಡಲಾಗುವುದು” ಎಂದು ಎಚ್ಚರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಿಧಾನಸಭೆ ಚುನಾವಣೆ ನಡೆಯುವ ದಿನ ಹಾಗೂ ಹಿಂದಿನ ದಿನದ ವಿವಾಹ ದಿನಾಂಕ ನಮೂದಿಸಿ ಆಹ್ವಾನ ಪತ್ರ ಸಿದ್ಧಪಡಿಸಿ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ಆಹ್ವಾನ ಪತ್ರಿಕೆ ಮುದ್ರಣ ಮಾಡುವವರು ಸೂಕ್ತ ದಾಖಲೆ ಪಡೆದುಕೊಳ್ಳಬೇಕು. ಒಂದು ವೇಳೆ ದಾಖಲೆ ಇಲ್ಲದೆ, ಸುಳ್ಳು ಆಹ್ವಾನ ಪತ್ರಿಕೆ ಮುದ್ರಿಸಿಕೊಡುವ ಮುದ್ರಕರ ಮೇಲೂ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...