ತುಮಕೂರು | ರೈತ ಹುತಾತ್ಮ ದಿನ ಆಚರಣೆ : ಹಿರಿಯ ನಾಯಕರ ಭಾವಚಿತ್ರಗಳಿಗೆ ಪುಷ್ಪನಮನ

Date:

ಕರ್ನಾಟಕ ರಾಜ್ಯ ರೈತ ಸಂಘ,ತುಮಕೂರು ತಾಲೂಕು ಶಾಖೆ ವತಿಯಿಂದ ಹೆಬ್ಬೂರಿನ ದಿ.ಪುಟ್ಟಣ್ಣಯ್ಯ ರೈತ ಭವನದಲ್ಲಿ 45ನೇ ರೈತ ಹುತಾತ್ಮ ದಿನವನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

- Advertisement -

ರೈತ ಸಂಘದ ಹುಟ್ಟಿಗೆ ಕಾರಣರಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಎಂ.ಡಿ.ಸುಂದರೇಶನ್,ದಿ.ಪುಟ್ಟಣ್ಣಯ್ಯ ಸೇರಿದಂತೆ ಹಿರಿಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ,1980ರಲ್ಲಿ ಮಲಪ್ರಭ ಅಚ್ಚುಕಟ್ಟು ಪ್ರದೇಶದ ಜನರಿಗೆ ಅಂದಿನ ಗುಂಡೂರಾವ್ ನೇತೃತ್ವದ ಸರಕಾರ ನೀರು ನೀಡದೆ,ನೀರಿನ ತೆರಿಗೆ ವಿಧಿಸಿದ್ದರ ವಿರುದ್ದವಾಗಿ ನವಲಗುಂದದಲ್ಲಿ 92 ದಿನಗಳ ಕಾಲ ನಡೆದ ಹೋರಾಟ ನಡೆದಿತ್ತು.ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ರೈತ ಮುಖಂಡರಿಗೆ ಅವಕಾಶ ನೀಡದೆ ಇರುವುದನ್ನು ಖಂಡಿಸಿ 1981 ರ ಜುಲೈ 21ರಂದು ನಡೆದ ಪ್ರತಿಭಟನೆಯ ವೇಳೆ ನಡೆದ ಲಾಠಿ ಚಾರ್ಜ್, ಗೋಲಿಬಾರ್‌ನಿಂದ ಇಬ್ಬರು ರೈತರು ಹುತಾತ್ಮರಾದರೆ, ಓರ್ವ ಸಬ್‌ಇನ್ಸ್ಪೆಕ್ಟರ್ ಸಹ ಸಾವನ್ನಪ್ಪುತ್ತಾರೆ. ಗುಂಡಿಗೆ ಬಲಿಯಾದ ರೈತರ ನೆನಪಿಗಾಗಿ ಅಂದಿನಿಂದ ಪ್ರತಿವರ್ಷದ ಜುಲೈ 21ನೇ ದಿನಾಂಕವನ್ನು ರೈತ ಹುತಾತ್ಮ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...
1001765588

1980ರಲ್ಲಿ ರೈತ ಸಂಘದ ಮುಖಂಡರಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಎಂ.ಡಿ.ಸುಂದರೇಶನ್, ರುದ್ರಪ್ಪ ಇವರುಗಳು ನರಗುಂದ, ನವಲಗುಂದ ಭಾಗದಲ್ಲಿ ಪ್ರವಾಸ ಮಾಡಿ, ರೈತರನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯ ರೈತ ಸಂಘವನ್ನು ಹುಟ್ಟು ಹಾಕಿ, ಗುಂಡೂರಾವ್ ಸರಕಾರದ ವಿರುದ್ದ ಹೋರಾಟವನ್ನು ರೂಪಿಸುತ್ತಾರೆ. ಸರಕಾರ ರೈತರ ಹೋರಾಟಗಳನ್ನು ಹತ್ತಿಕ್ಕುವ ಸಲುವಾಗಿ ಲಾಠಿ ಚಾರ್ಜ್, ಗೋಲಿಬಾರ್ ಮುಂದುವರೆಸುತ್ತದೆ. ಇದರ ಭಾಗವಾಗಿ ಮಂಡ್ಯ, ಮೈಸೂರು, ಗೆಜ್ಜಲಗೆರೆ, ರೋಣ,ದುದ್ದ, ನಿಪ್ಪಾಣಿ ಮತ್ತಿತರರ ಕಡೆಗಳಲ್ಲಿ ನಡೆದ ಹೋರಾಟದಲ್ಲಿ 130 ಜನರ ರೈತರ ಸರಕಾರದ ಗುಂಡಿಗೆ ಬಲಿಯಾಗುತ್ತಾರೆ. ಇವರ ನೆನಪಿಗಾಗಿ ರೈತ ಹುತಾತ್ಮ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.ಅಂದು ಹೋರಾಟದ ಮಂಚೂಣಿಯಲ್ಲಿದ್ದ ಅನೇಕರು ಇಂದು ನಮ್ಮೊಂದಿಗೆ ಇಲ್ಲ.ಅವರೆಲ್ಲರಿಗೂ ಕರ್ನಾಟಕ ರೈತ ಸಂಘ ಹಸಿರು ನಮನಗಳನ್ನು ಸಲ್ಲಿಸುತ್ತದೆ ಎಂದು ಎ.ಗೋವಿಂದರಾಜು ನುಡಿದರು.

ದೇವನಹಳ್ಳಿ ಚನ್ನರಾಯಪಟ್ಟಣದ ಸುತ್ತಮುತ್ತಲ 17 ಹಳ್ಳಿಗಳ 1787 ಎಕರೆ ಫಲವತ್ತಾದ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳಲು ಮುಂದಾಗಿ, ನೋಟಿಪಿಕೇಷನ್ ಹೊರಡಿಸಿದ್ದ ಸರಕಾರದ ನಡೆಯನ್ನು ಖಂಡಿಸಿ ಸುಮಾರು 3 ವರ್ಷಗಳಿಗೂ ಹೆಚ್ಚು ಕಾಲ ನಡೆದ ಹೋರಾಟಕ್ಕೆ ಮಣಿದ ಸರಕಾರ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟಿದೆ.ಈ ಹೋರಾಟದ ಯಶಸ್ಸನ್ನು ಮಡಿದ ಎಲ್ಲಾ ರೈತಮುಖಂಡರಿಗೆ ಅರ್ಪಿಸುತ್ತೇವೆ. ರೈತರ ಮುಂದೆ ಸಾಕಷ್ಟು ಸಮಸ್ಯೆಗಳಿವೆ, ವೈಜ್ಞಾನಿಕ ಬೆಂಬಲ ಬೆಲೆ, ವಿದ್ಯುತ್ ಖಾಸಗೀಕರಣ, ಫಲವತ್ತಾ ಭೂಮಿ ಸ್ವಾಧೀನ ವಿರೋಧಿಸಿ, ರೈತ ಸಂಘ ಹೋರಾಟ ನಡೆಸುತ್ತಿದೆ. ಬಂಡವಾಳಗಾರರ ಎಜೆಂಟ್‌ರಂತೆ ಕೆಲಸ ಮಾಡುತ್ತಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸುತ್ತೇವೆ ಎಂದು ಎ.ಗೋವಿಂದರಾಜು ನುಡಿದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ, ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ವೆಂಕಟೇಗೌಡರು, ತಿಮ್ಮೇಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅರೇಹಳ್ಳಿ ಮಂಜುನಾಥ್, ಮುಖಂಡರಾದ ರಾಜಣ್ಣ, ಬಸವರಾಜು, ಜಿ.ಟಿ.ಕೃಷ್ಣಪ್ಪ, ಶಬ್ಬೀರ ಪಾಷ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...