ತುಮಕೂರು | ಹಾಲಿನ ದರ ಏರಿಕೆ ಲಾಭ ರೈತರಿಗೇ ಸಿಗಲಿದೆ : ಸಚಿವ ಕೆ.ಎನ್.ರಾಜಣ್ಣ

Date:

ಹಾಲಿನ ದರ ಏರಿಕೆ ಲಾಭ ರೈತರಿಗೇ ಸಿಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

- Advertisement -

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪೆಟ್ರೋಲ್ ಡೀಸೆಲ್ ಸೇರಿದಂತೆ ವಿವಿಧ ಪದಾರ್ಥಗಳ ಬೆಲೆಯಲ್ಲಿ ಏರಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಹಾಲಿನ ದರ ಏರಿಕೆ ಕೂಡ ಅನಿವರ‍್ಯವಾಗಿದ್ದು, ಅದರ ಲಾಭ ಪೂರ್ಣ ಪ್ರಮಾಣದಲ್ಲಿ ರೈತರಿಗೇ ಸಿಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವುದರಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಲಾಭವಾಗಲಿದ್ದು ರಾಜ್ಯ ಸರ್ಕಾರಕ್ಕೆ ಇದರಿಂದ ಯಾವುದೇ ಲಾಭವಿಲ್ಲ. ಆದರೆ ಈ ಏರಿಕೆಯಿಂದ ರಾಜ್ಯದ ಹಾಲು ಉತ್ಪಾದಕ ರೈತರಿಗೆ ಲಾಭವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಹಾಲಿನ ದರ ಏರಿಕೆ ಲಾಭವನ್ನು ನೇರವಾಗಿ ರೈತರಿಗೆ ಸಿಗಬೇಕೆಂಬ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದೂ ಸಚಿವರು ತಿಳಿಸಿದರು. ಇಡೀ ದೇಶದಲ್ಲಿ ರೈತರಿಂದ ಹೆಚ್ಚು ಬೆಲೆಗೆ ಹಾಲು ಖರೀದಿಸಿ ಕಡಿಮೆ ಬೆಲೆಗೆ ಗ್ರಾಹಕರಿಗೆ ನೀಡುತ್ತಿರುವುದು ಕರ್ನಾಟಕ ಮಾತ್ರ. ರೈತರಲ್ಲಿ ಹಣಕಾಸು ವಹಿವಾಟು ಹೆಚ್ಚಾದರೆ ಮಾತ್ರ ದೇಶದ ಜಿಡಿಪಿ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ವಿಧೇಯಕ ಪುನಃ ಸಲ್ಲಿಕೆ : ಮರು ಪರಿಶೀಲನೆಗಾಗಿ ರಾಜಭವನದಿಂದ ವಾಪಸಾಗಿದ್ದ ವಿಧೇಯಕಗಳನ್ನು ಮರು ಪರಿಶೀಲಿಸಿ ರಾಜ್ಯಪಾಲರ ಅನುಮೋದನೆಗೆ ಮತ್ತೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.


ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ ಸೇರಿದಂತೆ ವಿವಿಧ 11 ವಿಧೇಯಕಗಳ ಅನುಮೋದನೆಗಾಗಿ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿತ್ತು. ಈ ವಿಧೇಯಕಗಳ ಮರು ಪರಿಶೀಲನೆ ಅಗತ್ಯದ ಬಗ್ಗೆ ರಾಜ್ಯಪಾಲರು ಅಭಿಪ್ರಾಯಿಸಿ ವಾಪಸು ಕಳಿಸಿದ್ದರು. ಶೀಘ್ರವೇ ಮರು ಪರಿಶೀಲಿಸಿ ಪುನಃ ಅನುಮೋದನೆಗೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ವಿಧಾನಸಭೆಯಲ್ಲಿ ಅಂಗೀಕಾರವಾಗಿ ವಿಧಾನಪರಿಷತ್ತಿನಲ್ಲಿ ಈ ಮಸೂದೆಗಳನ್ನು ಮಂಡಿಸಲಾಗಿತ್ತು. ಅಲ್ಲದೆ, ಶಾಸಕರ ಅಭಿಪ್ರಾಯದಂತೆ ಸದನ ಸಮಿತಿಯನ್ನೂ ಮಾಡಿ ವಿಧೇಯಕಗಳನ್ನು ಅಂಗೀಕರಿಸಲಾಗಿತ್ತು. ಆದರೆ ಪ್ರತಿಪಕ್ಷಗಳು ಚರ್ಚೆಯಲ್ಲಿ ಭಾಗವಹಿಸದೆ ಸಭಾತ್ಯಾಗ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡಿದ್ದಾರೆ. ಆದಾಗ್ಯೂ ಸರ್ಕಾರ ಈ ವಿಷಯದಲ್ಲಿ ಸಮರ್ಪಕವಾಗಿ ನಡೆದುಕೊಂಡಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಯಶಸ್ವಿನಿ ಮತ್ತೆ ಜಾರಿ : ರೈತರು ಹಾಗೂ ಬಡವರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ಹಿಂದೆ ಎಸ್.ಎಂ.ಕೃಷ್ಟ ಅವರು ಮುಖ್ಯಮಂತ್ರಿಯಾಗಿದ್ದ ಸರ್ಕಾರ ಜಾರಿಗೆ ತಂದಿದ್ದ ಯಶಸ್ವಿನಿ ಯೋಜನೆಯನ್ನು ಮರು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ರೈತರು ಹಾಗೂ ಕಡುಬಡವರಿಗೆ ಅನುಕೂಲವಾಗಿದ್ದ ಯಶಸ್ವಿನಿ ಯೋಜನೆಯನ್ನು ಪುನಃ ಜಾರಿ ತರಬೇಕೆಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದ್ದು ಶೀಘ್ರವೇ ಈ ಯೋಜನೆ ಮತ್ತೆ ಜಾರಿಯಾಗಲಿದೆ. ಇದರಿಂದ ಕೋಟ್ಯಂತರ ರೈತರು ಬಡವರಿಗೆ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.
ರಾಜ್ಯ ಸರ್ಕಾರ ಜನಪರ ನಿಲುವುಗಳೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಸಾರಿಗೆ, ಶಿಕ್ಷಣ, ಆರೋಗ್ಯ, ಮೂಲಸೌಲಭ್ಯ ಸೇರಿದಂತೆ ವಿವಿಧ ವಿಷಯಗಳಲ್ಲಿ ಸಾಕಷ್ಟು ಸುಧಾರಣೆ ತಂದಿದ್ದು ಸಹಕಾರ ಕ್ಷೇತ್ರದಲ್ಲಿಯೂ ಕೂಡ ಉತ್ತಮ ನಿಲುಗಳನ್ನು ತೆಗೆದುಕೊಂಡಿದೆ ಎಂದರು.

ರಾಜ್ಯದ ಜನರ ಆರ್ಥಿಕ ಸಹಕಾರಕ್ಕಾಗಿ ಪಂಚಾಯ್ತಿಗೊಂದು ಸಹಕಾರ ಸಂಸ್ಥೆ ಸ್ಥಾಪಿಸುವ ಯೋಜನೆ ಸದ್ಯದಲ್ಲಿಯೇ ಅನುಷ್ಠಾನಕ್ಕೆ ಬರಲಿದ್ದು, ಇದು ಪ್ರಗತಿಯಲ್ಲಿದೆ ಎಂದರು.

ಭಾನುವಾರ ತುಮಕೂರು ಸಹಕಾರ ಕೇಂದ್ರ ಬ್ಯಾಂಕ್‌ನ ಸರ್ವ ಸದಸ್ಯರ ಸಭೆ ನಡೆಯಲಿದ್ದು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಹಾಲು ಮಹಾಮಂಡಳದ ಆಡಳಿತ ಮಂಡಳಿ ಸದಸ್ಯ ಕಾಂತರಾಜು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಜಂಗಮಪ್ಪ, ವಕೀಲ ನಾರಾಯಣಗೌಡ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...