ತುಮಕೂರು | ಆಕಸ್ಮಿಕ ಬೆಂಕಿ ತಗುಲಿ 5 ಗುಡಿಸಲು ಭಸ್ಮ; ಬೀದಿಗೆ ಬಿದ್ದ ಕುಟುಂಬಗಳು

0
132

ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲುಗಳು ಸಂಪೂರ್ಣವಾಗಿ ಭಸ್ಮಗೊಂಡಿರುವ ಘಟನೆ ‌ತುಮಕೂರು ಜಿಲ್ಲೆ ಶಿರಾ ತಾಲೂಕಿನ ನೆಲದಿಮ್ಮನಹಳ್ಳಿ ಕಾಲೋನಿಯಲ್ಲಿ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಸುಮಾರು 20 ವರ್ಷಗಳಿಂದ ವಾಸವಿದ್ದ 30 ಬಡ ಕುಟುಂಬಗಳ ಪೈಕಿ 25 ಗುಡಿಸಲು ಬೆಂಕಿ ಅವಘಡದಿಂದ ಪಾರಾಗಿದ್ದು 5 ಬಡ ಕುಟುಂಬಗಳ ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಪರಿಣಾಮ ಕುಟುಂಬಸ್ಥರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ವಿದ್ಯಾರ್ಥಿಗಳಿಗೆ ಮತೀಯವಾದ ಬಿತ್ತಲು ಪ್ರಯತ್ನ; ದಲಿತ ಮುಖಂಡರ ಆಕ್ರೋಶ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಲವು ಬಾರಿ ನಿವೇಶನಕ್ಕಾಗಿ ಮನವಿ ಮಾಡಲಾಗಿದ್ದರೂ ಗಮನಕ್ಕೆ ತೆಗೆದುಕೊಳ್ಳದ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆಲ್ಲಾ ಕಾರಣ” ಎಂದು ಸಂತ್ರಸ್ತರು ಆರೋಪಿಸುತ್ತಿದ್ದಾರೆ.